ಕನ್ನಡಕ್ಕಾಗಿ ನಾವು ಅಭಿಯಾನ ಪ್ರಯುಕ್ತ ಇಂದು ಜಗತ್ತಿನಾದ್ಯಂತ ಒಂದೇ ಸಮಯದಲ್ಲಿ 5 ಲಕ್ಷ ಕನ್ನಡಿಗರು ಕನ್ನಡ ಹಾಡುಗಳನ್ನು ಹಾಡಿ ಗಮನ ಸೆಳೆದಿದ್ದಾರೆ.
ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧೆಡೆ ಹಾಗೂ ಜಗತ್ತಿನಾದ್ಯಂತ ಗುರುವಾರ ಬೆಳಿಗ್ಗೆ 10.30ರಿಂದ 11.30ರ ಅವಧಿಯಲ್ಲಿ 4 ಸಾವಿರ ಕಡೆಗಳಲ್ಲಿ ಏಕಕಾಲದಲ್ಲಿ 5 ಲಕ್ಷಕ್ಕೂ ಅಧಿಕ ಜನರು ಕನ್ನಡ ಹಾಡುಗಳನ್ನು ಹಾಡಿದರು.
ಕನ್ನಡ ರಾಜ್ಯೋತ್ಸವ ಅಂಗವಾಗಿ ಬೆಂಗಳೂರಿನ ವಿಧಾನಸೌಧ ಮುಂಭಾಗದಲ್ಲಿ ವಿಧಾನಸೌಧ ಹಾಗೂ ವಿಕಾಸಸೌಧ 4 ಸಾವಿರಕ್ಕೂ ಅಧಿಕ ಸಿಬ್ಬಂದಿ ಕನ್ನಡ ಹಾಡುಗಳನ್ನು ಹಾಡಿದರು.
ಕಾರ್ಯಕ್ರಮದಲ್ಲಿ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ, ಸಚಿವ ಸುನಿಲ್ ಕುಮಾರ್, ಶಾಸಕ ಸುನಿಲ್ ನಾಯಕ್ ಸೇರಿದಂತೆ ಐಎಎಸ್, ಐಪಿಎಸ್ ಅಧಿಕಾರಿಗಳು ಭಾಗಿಯಾಗಿದ್ದರು.
ನಾಡಗೀತೆ, ಜೈ ಭಾರತ ಜನನಿಯ ತನುಜಾತೆ, ಬಾರಿಸು ಕನ್ನಡ ಡಿಂಡಿಮವ, ಜೋಗದ ಸಿರಿ ಬೆಳಕಿನಲ್ಲಿ, ಹಾಡುಗಳನ್ನು ಸೇರಿದಂತೆ ನಾಲ್ಕು ಹಾಡುಗಳನ್ನ ರಮ್ಯ ವಸಿಷ್ಠ ನೇತೃತ್ವದಲ್ಲಿ ಅಧಿಕಾರಿಗಳು, ಸಿಬ್ಬಂದಿಗಳು ಹಾಗೂ ಗಾಯಕರು ಹಾಡಿದರು.

