Dailyhunt Logo
  • Light mode
    Follow system
    Dark mode
    • Play Story
    • App Story
ಕರ್ನಾಟಕದಿಂದ ರಾಜ್ಯಸಭೆಗೆ ವೈಎಸ್‌ ಶರ್ಮಿಳಾಗೆ ಟಕೆಟ್?

ಕರ್ನಾಟಕದಿಂದ ರಾಜ್ಯಸಭೆಗೆ ವೈಎಸ್‌ ಶರ್ಮಿಳಾಗೆ ಟಕೆಟ್?

Kannadavahini 2 days ago

ವದೆಹಲಿ: ಆಂಧ್ರಪ್ರದೇಶದ ಮಾಜಿ ಸಿಎಂ ವೈಎಸ್‌ ಜಗನ್‌ ಮೋಹನ್‌ ರೆಡ್ಡಿ ಸೋದರಿ ವೈ ಎಸ್‌ ಶಾರ್ಮಿಳಾ ಕರ್ನಾಟಕದಿಂದ ರಾಜ್ಯಸಭೆಗೆ ಟಿಕೆಟ್‌ ದೊರೆಯುವ ಸಾಧ್ಯತೆ ಇದೆ.

ಆಂಧ್ರಪ್ರದೇಶದ ಕಾಂಗ್ರೆಸ್‌ ಪಕ್ಷದ ರಾಜ್ಯಾಧ್ಯಕ್ಷೆ ಆಗಿರುವ ವೈಎಸ್‌ ಶರ್ಮಳಾ ಶುಕ್ರವಾರ ಕಾಂಗ್ರೆಸ್‌ ಮುಖಂಡ ರಾಹುಲ್‌ ಗಾಂಧಿ ಅವರನ್ನು ಭೇಟಿ ಮಾಡಿ ಆಂಧ್ರದಲ್ಲಿ ಪಕ್ಷ ಬಲವರ್ಧನೆ ಕುರಿತು ಚರ್ಚಿಸಿದ್ದಾರೆ.

ಈ ವೇಳೆ ಕರ್ನಾಟಕದಿಂದ ರಾಜ್ಯಸಭೆಗೆ ಟಿಕೆಟ್‌ ನೀಡುವ ಕುರಿತು ಚರ್ಚೆ ನಡೆದಿದೆ ಎನ್ನಲಾಗಿದೆ.

ರಾಜ್ಯಸಭೆಗೆ ಕರ್ನಾಟಕದಿಂದ ಸಿದ್ದರಾಮಯ್ಯ ಅವರಿಗೆ ಟಿಕೆಟ್‌ ನೀಡುವ ಪ್ರಸ್ತಾಪ ಮುಂದಿಡಲಾಗಿದ್ದು, ಆದರೆ ಸಿದ್ದರಾಮಯ್ಯ ರಾಜ್ಯಸಭೆಗೆ ಪ್ರವೇಶಿಸಲು ನಿರಾಕರಿಸಿದ ಹಿನ್ನೆಲೆಯಲ್ಲಿ ಅವರ ಸ್ಥಾನಕ್ಕೆ ಶರ್ಮಿಳಾ ಅವರಿಗೆ ಟಿಕೆಟ್‌ ನೀಡುವ ಸಾಧ್ಯತೆಗಳಿವೆ ಎಂದು ಹೇಳಲಾಗಿದೆ.

ಕರ್ನಾಟಕದಿಂದ ೪ ರಾಜ್ಯಸಭಾ ಸ್ಥಾನಗಳು ತೆರವಾಗಲಿದ್ದು, ಒಂದು ಟಿಕೆಟ್‌ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಟಕೆಟ್‌ ದೊಯುವುದು ಖಚಿತವಾಗಿದೆ.

Dailyhunt
Disclaimer: This content has not been generated, created or edited by Dailyhunt. Publisher: Kannadavahini