Dailyhunt Logo
  • Light mode
    Follow system
    Dark mode
    • Play Story
    • App Story
ಕರ್ನಾಟಕಕ್ಕೆ ಕಾಲಿಟ್ಟ ಡೆಲ್ಟಾ ರೂಪಾಂತರಿ: 7 ಮಂದಿಗೆ ಸೋಂಕು!

ಕರ್ನಾಟಕಕ್ಕೆ ಕಾಲಿಟ್ಟ ಡೆಲ್ಟಾ ರೂಪಾಂತರಿ: 7 ಮಂದಿಗೆ ಸೋಂಕು!

Kannadavahini 4 years ago

ಇಂಗ್ಲೆಂಡ್ ಸೇರಿದಂತೆ ಜಗತ್ತಿನ ಹಲವು ರಾಷ್ಟ್ರಗಳಲ್ಲಿ ವ್ಯಾಪಕವಾಗಿ ಹಬ್ಬುತ್ತಿರುವ ಡೆಲ್ಟಾ ರೂಪಾಂತರಿ ವೈರಸ್ AY.4.2. ಕರ್ನಾಟಕಕ್ಕೆ ಕಾಲಿಟ್ಟಿದ್ದು, ಸೋಂಕಿತರ ಸಂಖ್ಯೆ 7ಕ್ಕೆ ಏರಿಕೆಯಾಗಿದೆ.

ಬೆಂಗಳೂರು ಸೇರಿದಂತೆ ರಾಜ್ಯದಲ್ಲಿ ಕೊರೊನಾ ಸೋಂಕು ಪ್ರಮಾಣ ಕಡಿಮೆ ಆಗುತ್ತಿರುವ ನಡುವೆ ಡೆಲ್ಟಾ ರೂಪಾಂತರಿ ವೈರಸ್ ಸಂಖ್ಯೆಯಲ್ಲಿ ಹೆಚ್ಚಳ ಕಂಡು ಬರುತ್ತಿದೆ.


ಕೋವಿಡ್‌ ಕುರಿತ ಎಲ್ಲಾ ಲೇಟೆಸ್ಟ್‌ ಅಪ್‌ಡೇಟ್ಸ್‌ ಓದಿ

ಬೆಂಗಳೂರಿನಲ್ಲಿ ಹೊಸದಾಗಿ ಮೂವರಲ್ಲಿ ಈ ಸೋಂಕು ಕಾಣಿಸಿಕೊಂಡಿದ್ದು, ರಾಜ್ಯದಲ್ಲಿ 7 ಮಂದಿಯಲ್ಲಿ ಈ ಸೋಂಕು ಕಾಣಿಸಿಕೊಂಡಿದೆ.

ಡೆಲ್ಟಾ ವೈರಸ್ ಈಗಾಗಲೇ ಇಂಗ್ಲೆಂಡ್, ಡೆನ್ಮಾರ್ಕ್, ಜರ್ಮನಿ, ಐರ್ಲೆಂಡ್ ಅಲ್ಲದೇ ಹಲವು ಯುರೋಪ್ ರಾಷ್ಟ್ರಗಳಲ್ಲಿ ಹಬ್ಬುತ್ತಿದೆ.

ರಾಜ್ಯದಲ್ಲಿ ಡೆಲ್ಟಾ ವೈರಸ್ ಸೋಂಕು ಕಾಣಿಸಿಕೊಂಡವರ ಪೈಕಿ ಇಬ್ಬರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಯಾವುದೇ ಸಾವು ವರದಿಯಾಗಿಲ್ಲ ಎಂದು ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.

Dailyhunt
Disclaimer: This content has not been generated, created or edited by Dailyhunt. Publisher: Kannadavahini