Dailyhunt Logo
  • Light mode
    Follow system
    Dark mode
    • Play Story
    • App Story
ಕೇಂದ್ರದ ಕ್ಷಮೆಕೋರಿದ ಮೆಟಾ: ಪ್ರಧಾನಿ ಮೋದಿ ವೀಡಿಯೋ ಡಿಲಿಟ್ ಬಗ್ಗೆ ಜುಕರ್ ಬರ್ಗ್ ಸ್ಪಷ್ಟನೆ

ಕೇಂದ್ರದ ಕ್ಷಮೆಕೋರಿದ ಮೆಟಾ: ಪ್ರಧಾನಿ ಮೋದಿ ವೀಡಿಯೋ ಡಿಲಿಟ್ ಬಗ್ಗೆ ಜುಕರ್ ಬರ್ಗ್ ಸ್ಪಷ್ಟನೆ

Kannadavahini 1 week ago

ವದೆಹಲಿ: ಮೆಟಾ ಸಿಇಒ ಮಾರ್ಕ್ ಜುಕರ್‌ಬರ್ಗ್ ತಮ್ಮ ಪ್ಲಾಟ್‌ಫಾರ್ಮ್‌ನಲ್ಲಿ ಪ್ರಸಾರವಾದ ಸಿಎಸ್‌ಎಎಮ್ ಮಕ್ಕಳ ಲೈಂಗಿಕ ಶೋಷಣೆ ವಿಷಯ ಡಿಪ್‌ಫೇಕ್ ವಿಷಯಗಳು ಹಾ ಗೂ ಪ್ಲಾಟ್‌ಫಾರ್ಮ್ ನಿರ್ವಹಣೆಯಲ್ಲಿನ ಲೋಪದೋಷಗಳಿಗಾಗಿ ಕ್ಷಮೆಯಾಚಿಸಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಅವರ ಫೇಸ್‌ಬುಕ್ ವೀಡಿಯೊವನ್ನು ತಾತ್ಕಾಲಿಕವಾಗಿ ತೆಗೆದುಹಾಕಿದ್ದಕ್ಕಾಗಿ ಮೆಟಾ ಸಿಇಒ ಮಾರ್ಕ್ ಜುಕರ್‌ಬರ್ಗ್ ಅವರು 3 ದಿನಗಳ ಒಳಗೆ ಬೇಷರತ್ ಕ್ಷಮೆಯಾಚಿಸಬೇಕು, ಇಲ್ಲದಿದ್ದರೆ ಭಾರತದಲ್ಲಿ ಕಂಪನಿಯು ಪಡೆಯುತ್ತಿರುವ 'ಸೇಫ್ ಹಾರ್ಬರ್' ರಕ್ಷಣೆಯನ್ನು ಹಿಂಪಡೆಯಲಾಗುವುದು ಎಂದು ಸಂಸದೀಯ ಸಮಿತಿ ಎಚ್ಚರಿಕೆ ನೀಡಿತ್ತು.

ಈ ಎಚ್ಚರಿಕೆಯ ಬೆನ್ನಲ್ಲೇ ನಿರ್ದಿಷ್ಟ ರೀತಿಯ ವಿಷಯಗಳನ್ನು ಬೂಸ್ಟ್ ಮಾಡಲು (ಪ್ರಚಾರ ಮಾಡಲು) ಹೆಚ್ಚಿನ ಹಣ ಪಾವತಿಸಲಾಗಿದೆ ಎಂಬುದನ್ನು ಜುಕರ್‌ಬರ್ಗ್‌ ಒಪ್ಪಿಕೊಂಡಿದ್ದಾರೆ ಹಾಗೂ ಈ ತಪ್ಪಿಗಾಗಿ ವಿಷಾದ ವ್ಯಕ್ತಪಡಿಸಿ ಕ್ಷಮೆ ಕೋರಿದ್ದಾರೆ.

ಮಂಗಳವಾರ ಸಂಸದೀಯ ತಂತ್ರಜ್ಞಾನ ಸಮಿತಿಯ ಅಧ್ಯಕ್ಷ ನಿಶಿಕಾಂತ್ ದುಬೆ ಅವರು ಮಾತನಾಡಿ, ಕೇವಲ ಕ್ಷಮೆಯಾಚನೆ ಮಾತ್ರ ಸಾಕಾಗುವುದಿಲ್ಲ, ಈ ಲೋಪಕ್ಕೆ ಕಾರಣರಾದವರ ಮೇಲೆ ಜವಾಬ್ದಾರಿ ನಿಗದಿಪಡಿಸಬೇಕು" ಎಂದು ಸ್ಪಷ್ಟಪಡಿಸಿದ್ದಾರೆ.

ಜುಕರ್‌ಬರ್ಗ್ ಅವರು ವೈಯಕ್ತಿಕವಾಗಿ ಕ್ಷಮೆಯಾಚಿಸದಿದ್ದರೆ, ಮಾಹಿತಿ ತಂತ್ರಜ್ಞಾನ ಕಾಯಿದೆಯ ಸೆಕ್ಷನ್ 79ರ ಅಡಿಯಲ್ಲಿ ಮೆಟಾ ಪಡೆಯುತ್ತಿರುವ 'ಸೇಫ್ ಹಾರ್ಬರ್' ರಕ್ಷಣೆಯನ್ನು ಹಿಂಪಡೆಯಲು ಶಿಫಾರಸು ಮಾಡಲಾಗುವುದು ಎಂದು ತಿಳಿಸಿದ್ದರು.

Dailyhunt
Disclaimer: This content has not been generated, created or edited by Dailyhunt. Publisher: Kannadavahini