Dailyhunt Logo
  • Light mode
    Follow system
    Dark mode
    • Play Story
    • App Story
ನಟಿ ಸಂಜನಾಗೆ 14 ದಿನ ನ್ಯಾಯಾಂಗ ಬಂಧನ

ನಟಿ ಸಂಜನಾಗೆ 14 ದಿನ ನ್ಯಾಯಾಂಗ ಬಂಧನ

Kannadavahini 5 years ago

ಸ್ಯಾಂಡಲ್ ವುಡ್ ಡ್ರಗ್ಸ್ ಪ್ರಕರಣದಲ್ಲಿ ಸಿಸಿಬಿ ವಶದಲ್ಲಿರುವ ನಟಿ ಸಂಜನಾ ಗುಜ್ರಾಲ್ ಗೆ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಲಾಗಿದ್ದು, ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿಗೆ ಸ್ಥಳಾಂತರಗೊಳ್ಳಲಿದ್ದಾರೆ.

ಸಿಸಿಬಿ ಕಸ್ಟಡಿ ಅವಧಿ ಪೂರ್ಣಗೊಂಡ ಹಿನ್ನೆಲೆಯಲ್ಲಿ ಪೊಲೀಸರು ಸಂಜೆ 1ನೇ ಎಸಿಎಂಎಂಣ ನ್ಯಾಯಾಲಯದ ಮುಂದೆ ವೀಡಿಯೋ ಕಾನ್ಫರೆನ್ಸ್ ಮೂಲಕ ಹಾಜರುಪಡಿಸಿದ್ದರು.

ಮಾದಕ ದ್ರವ್ಯ ಜಾಲದ ಪ್ರಕರಣದ ಎನ್ ಡಿಪಿಎಸ್ ಪ್ರಕರಣ ದಾಖಲಿಸಿರುವುದರಿಂದ ಸಂಜನಾ ಅವರಿಗೆ ನ್ಯಾಯಾಂಗ ಬಂಧನ ವಿಸ್ತರಿಸಬೇಕು ಎಂದು ಸರಕಾರದ ಪರ ವಕೀಲರು ವಾದಿಸಿದರು.

ಎನ್ ಡಿಪಿಎಸ್ ಗೆ ಪ್ರಕರಣ ಹೋಗಿರುವುದರಿಂದ ಸಂಜನಾ ಜಾಮೀನು ಅರ್ಜಿಯ ವಿಚಾರಣೆಯನ್ನು ನ್ಯಾಯಾಧೀಶರು ಎನ್ ಡಿಪಿಎಸ್ ವಿಶೇಷ ನ್ಯಾಯಾಲಯಕ್ಕೆ ವರ್ಗಾಯಿಸಿದರು.

ಆದರೆ ನಿರ್ದಿಷ್ಟ ಆರೋಪಗಳನ್ನು ಮಾಡದೇ ಕಸ್ಟಡಿಯಲ್ಲಿ ಇರಿಸಿರುವುದು ಸರಿಯಲ್ಲ ಎಂದು ಸಂಜನಾ ಪರ ವಕೀಲರು ವಾದ ಮಂಡಿಸಿದರು.

ಅಲ್ಲದೇ ನ್ಯಾಯಾಂಗ ಬಂಧನ ವಿಧಿಸದೇ ಜಾಮೀನು ಅರ್ಜಿಯನ್ನು ಪುರಸ್ಕರಿಸಬೇಕು ಎಂದು ವಾದ ಮಂಡಿಸಿದರು.

Dailyhunt
Disclaimer: This content has not been generated, created or edited by Dailyhunt. Publisher: Kannadavahini