Dailyhunt
ರಾಜ್ಯದಲ್ಲಿ 1870 ಸೋಂಕು ದೃಢ, 17 ಮಂದಿ ಬಲಿ

ರಾಜ್ಯದಲ್ಲಿ 1870 ಸೋಂಕು ದೃಢ, 17 ಮಂದಿ ಬಲಿ

Kannadavahini 5 years ago

ರಾಜ್ಯದಲ್ಲಿ ಕಳೆದ 24 ಗಂಟೆಯಲ್ಲಿ 1870 ಕೊರೊನಾ ಸೋಂಕು ಪ್ರಕರಣಗಳು ಪತ್ತೆಯಾಗಿದ್ದು, 17 ಮಂದಿ ಕೊರೊನಾಗೆ ಬಲಿಯಾಗಿದ್ದಾರೆ.

ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಂಗಳವಾರ ಬಿಡುಗಡೆ ಮಾಡಿದ ಮಾಹಿತಿ ಪ್ರಕಾರ ರಾಜ್ಯದಲ್ಲಿ ಒಟ್ಟಾರೆ ಸೋಂಕಿತರ ಸಂಖ್ಯೆ 8,76,425ಕ್ಕೆ ಏರಿಕೆಯಾದರೆ, ಸಾವಿನ ಸಂಖ್ಯೆ 11,695ಕ್ಕೆ ಜಿಗಿತ ಕಂಡಿದೆ.

ರಾಜ್ಯದಲ್ಲಿ ಒಟ್ಟಾರೆ ಗುಣಮುಖಿತರ ಸಂಖ್ಯೆ 8.40.999ಕ್ಕೆ ಏರಿಕೆಯಾಗಿದ್ದು, ಒಟ್ಟಾರೆ ಸಕ್ರಿಯ ಪ್ರಕರಣಗಳ ಸಂಖ್ಯೆ 24612ಕ್ಕೆ ತಲುಪಿದೆ.

ರಾಜಧಾನಿ ಬೆಂಗಳೂರಿನಲ್ಲಿ 927 ಸೋಂಕು ಪ್ರಕರಣಗಳು ದೃಢಪಟ್ಟಿದ್ದು, 12 ಮಂದಿ ಅಸುನೀಗಿದ್ದಾರೆ. ಇದರಿಂದ ನಗರದಲ್ಲಿ ಸಾವಿನ ಸಂಖ್ಯೆ 4090ಕ್ಕೆ ಏರಿಕೆಯಾಗಿದೆ.

Dailyhunt
Disclaimer: This content has not been generated, created or edited by Dailyhunt. Publisher: Kannadavahini