Dailyhunt Logo
  • Light mode
    Follow system
    Dark mode
    • Play Story
    • App Story
ರಾಜ್ಯದಲ್ಲಿಂದು 1330 ಕೊರೊನಾ ಪಾಸಿಟಿವ್ ಪತ್ತೆ

ರಾಜ್ಯದಲ್ಲಿಂದು 1330 ಕೊರೊನಾ ಪಾಸಿಟಿವ್ ಪತ್ತೆ

Kannadavahini 5 years ago

ರಾಜ್ಯದಲ್ಲಿಂದು 1330 ಕೊರೊನಾ ಸೋಂಕು ಪ್ರಕರಣಗಳು ಪತ್ತೆಯಾಗಿದ್ದು, 14 ಮಂದಿ ಮಹಾಮಾರಿಗೆ ಬಲಿಯಾಗಿದ್ದಾರೆ.

ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಂಗಳವಾರ ಬಿಡುಗಡೆ ಮಾಡಿದ ಮಾಹಿತಿ ಪ್ರಕಾರ ರಾಜ್ಯದಲ್ಲಿ ಒಟ್ಟಾರೆ ಸೋಂಕಿತರ ಸಂಖ್ಯೆ 8,86,227ಕ್ಕೆ ಏರಿಕೆಯಾದರೆ, ಸಾವಿನ ಸಂಖ್ಯೆ 11,792ಕ್ಕೆ ತಲುಪಿದೆ.

ರಾಜ್ಯದಲ್ಲಿ ಕೊರೊನಾದಿಂದ ಚೇತರಿಸಿಕೊಂಡವರ ಸಂಖ್ಯೆ 8,50,707ಕ್ಕೆ ಜಿಗಿತ ಕಂಡಿದ್ದು, ಸಕ್ರಿಯ ಪ್ರಕರಣಗಳ ಸಂಖ್ಯೆ 24,709ಕ್ಕೆ ಇಳಿದಿದೆ.

ಬೆಂಗಳೂರಿನಲ್ಲಿ 758 ಸೋಂಕು ಪ್ರಕರಣಗಳು ವರದಿಯಾಗಿದ್ದು, ಒಟ್ಟಾರೆ ಸೋಂಕಿತರ ಸಂಖ್ಯೆ 3,70 ಲಕ್ಷಕ್ಕೆ ಏರಿಕೆಯಾಗಿದ್ದು, ಕಳೆದ 24 ಗಂಟೆಯಲ್ಲಿ 9 ಮಂದಿ ಅಸುನೀಗಿದ್ದು, ಸಾವಿನ ಸಂಖ್ಯೆ 4146ಕ್ಕೆ ಜಿಗಿತ ಕಂಡಿದೆ.

Dailyhunt
Disclaimer: This content has not been generated, created or edited by Dailyhunt. Publisher: Kannadavahini