Dailyhunt Logo
  • Light mode
    Follow system
    Dark mode
    • Play Story
    • App Story
ಸೆಪ್ಟಂಬರ್ 17 ರವರೆಗೆ ಮಳೆ ಮುಂದುವರೆಯಲಿದೆ

ಸೆಪ್ಟಂಬರ್ 17 ರವರೆಗೆ ಮಳೆ ಮುಂದುವರೆಯಲಿದೆ

Kannadavahini 4 years ago

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವ ಪರಿಣಾಮ ರಾಜ್ಯದ ಹಲವೆಡೆ ಮಳೆಯಾಗುತ್ತಿದೆ.

ಇನ್ನೂ ಎರಡು ದಿನಗಳ ಕಾಲ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಮುಂದಿನ ಎರಡು ದಿನಗಳ ಕಾಲ ಮಲೆನಾಡು ಮತ್ತು ಕರಾವಳಿ ಭಾಗದಲ್ಲಿ ಮಳೆ ಮುಂದುವರಿಯಲಿದೆ.
ಸೋನೆ ಮಳೆಗೆ ಶಿವಮೊಗ್ಗ ಜಿಲ್ಲೆಯ ಜಲಾಶಯಗಳ ಒಳ ಹರಿವು ಹೆಚ್ಚಳವಾಗಿದ್ದು, ಜಲಾಶಯಗಳಲ್ಲಿ ನೀರಿನ ಮಟ್ಟ ಏರಿಕೆಯಾಗಿದೆ. ತೀರ್ಥಹಳ್ಳಿ, ಹೊಸನಗರ, ಸಾಗರ ತಾಲೂಕಿನಲ್ಲಿ ಜೋರು ಮಳೆಯಾಗುತ್ತಿದೆ.

ಬಂಗಾಳಕೊಲ್ಲಿಯಲ್ಲಿ ಉಂಟಾದ ವಾಯುಭಾರ ಕುಸಿತದಿಂದ ಜಿಲ್ಲೆಯಾದ್ಯಂತ ಜಿಟಿಜಿಟಿ ಮಳೆ ಸುರಿಯುತ್ತಿದೆ.
ಹೆಚ್ಚಿನ ಮಳೆಯಾಗುವ ಕಾರಣ ಸೆಪ್ಟಂಬರ್ 17 ರವರೆಗೆ ಕರಾವಳಿಯ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಮಲೆನಾಡಿನ ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು ಜಿಲ್ಲೆಗಳಲ್ಲಿ ಹೆಚ್ಚಿನ ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

Dailyhunt
Disclaimer: This content has not been generated, created or edited by Dailyhunt. Publisher: Kannadavahini