Dailyhunt Logo
  • Light mode
    Follow system
    Dark mode
    • Play Story
    • App Story
ಅಕ್ರಮ ಗಾಂಜಾ ಮಾರಾಟ ಮಾಡುತ್ತಿದ್ದ ವ್ಯಕ್ತಿಯ ಬಂಧನ

ಅಕ್ರಮ ಗಾಂಜಾ ಮಾರಾಟ ಮಾಡುತ್ತಿದ್ದ ವ್ಯಕ್ತಿಯ ಬಂಧನ

Karnataka TV 14 hrs ago

ಹಾನಗಲ್‌ನಲ್ಲಿ ಅಕ್ರಮ ಗಾಂಜಾ ಮಾರಾಟ ಮಾಡುತ್ತಿದ್ದ ವ್ಯಕ್ತಿಯನ್ನು ಪೊಲೀಸರು ಬಂಧಿಸಿರುವ ಘಟನೆ ನಡೆದಿದೆ. ಖಚಿತ ಮಾಹಿತಿಯ ಮೇರೆಗೆ ಕಾರ್ಯಾಚರಣೆ ನಡೆಸಿದ ಪೊಲೀಸರು 542 ಗ್ರಾಂ ಒಣ ಗಾಂಜಾವನ್ನು ವಶಪಡಿಸಿಕೊಂಡಿದ್ದಾರೆ.

ಬಂಧಿತನನ್ನು ಹಾನಗಲ್ ನಿವಾಸಿ 35 ವರ್ಷದ ಗೌಸ್ ಮೋದ್ದೀನ್ ಮೊಹಮ್ಮದ್ ರಫೀಕ್ ಎಂದು ಗುರುತಿಸಲಾಗಿದೆ.

ಭಾನುವಾರ ದರ್ಗಾ ಕ್ರಾಸ್ ಬಳಿ ಶಕ್ತಿಧಾಮದ ಸಮೀಪ ಅಕ್ರಮವಾಗಿ ಗಾಂಜಾ ಮಾರಾಟ ಮಾಡುತ್ತಿದ್ದ ವೇಳೆ ಪೊಲೀಸರು ದಾಳಿ ನಡೆಸಿದ್ದಾರೆ ಎಂದು ತಿಳಿದುಬಂದಿದೆ.

ಹಾನಗಲ್ ಪೊಲೀಸ್ ಠಾಣೆ ಪಿಎಸ್‌ಐ ಸಂಪತ್ ಆನಿಕಿವಿ ನೇತೃತ್ವದಲ್ಲಿ ನಡೆದ ಕಾರ್ಯಾಚರಣೆಯಲ್ಲಿ ಸಿಬ್ಬಂದಿಗಳಾದ ಬಾಹುಬಲಿ ಉಪಾಧ್ಯಾಯ, ಚಿಕ್ಕಪ್ಪ ಕಡಕೋಳ, ನಾರಾಯಣ ಗುರ್ಕಿ ಮತ್ತು ಗುತ್ತೆಪ್ಪ ಬಾಸೂರ ಭಾಗವಹಿಸಿದ್ದರು. ದಾಳಿಯಲ್ಲಿ ಗಾಂಜಾ ಪ್ಯಾಕೆಟ್‌ಗಳು ಹಾಗೂ ₹300 ನಗದು ಸಹ ವಶಪಡಿಸಿಕೊಳ್ಳಲಾಗಿದೆ.

ಈ ಸಂಬಂಧ ಎನ್.ಡಿ.ಪಿ.ಎಸ್ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದ್ದು, ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಇನ್ನೊಬ್ಬ ಆರೋಪಿ ತಲೆಮರೆಸಿಕೊಂಡಿದ್ದು, ಆತನ ಪತ್ತೆಗಾಗಿ ಪೊಲೀಸರು ಶೋಧ ಮುಂದುವರಿಸಿದ್ದಾರೆ.

Dailyhunt
Disclaimer: This content has not been generated, created or edited by Dailyhunt. Publisher: Karnataka TV