Saturday, 08 Aug, 8.01 pm Karnataka TV

ಕರ್ನಾಟಕ ಟಿವಿ
ಗೆಳತಿ ಧನಶ್ರೀ ಜೊತೆ ನಿಶ್ಚಿತಾರ್ಥ ಮಾಡಿಕೊಂಡ ಕ್ರಿಕೇಟಿಗ ಚಹಲ್..

ಉತ್ತರಪ್ರದೇಶದ ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣದ ಭೂಮಿ ಪೂಜೆ ನಡೆದ ಮೇಲೆ ಸಿಎಂ ಯಡಿಯೂರಪ್ಪ ಯೋಗಿ ಆದಿತ್ಯನಾಥರಿಗೆ ಪತ್ರ ಬರೆದಿದ್ದಾರೆ. ಈ ಪತ್ರದಲ್ಲಿ ಅಯೋಧ್ಯೆಯಲ್ಲಿ ಎರಡು ಎಕರೆ ಜಾಗ ಕೇಳಿದ್ದಾರೆ. ರಾಮಮಂದಿರ ನಿರ್ಮಾಣವಾದ ಬಳಿಕ ಅಲ್ಲಿ ಪ್ರವಾಸಕ್ಕೆ ಬರುವ ಕನ್ನಡಿಗರಿಗೆ ಉಳಿದುಕೊಳ್ಳಲು ಜಾಗ ಬೇಕಾಗಿರುವ ಕಾರಣದಿಂದ, ಸಿಎಂ ಯಡಿಯೂರಪ್ಪ ಯಾತ್ರಿ ನಿವಾಸ ನಿರ್ಮಾಣಕ್ಕಾಗಿ ಅಯೋಧ್ಯೆಯಲ್ಲಿ ಎರಡು ಎಕರೆ ಜಾಗ ಕೇಳಿದ್ದಾರೆ.

ಅಬಕಾರಿ ಇಲಾಖೆ ನಷ್ಟದಲ್ಲಿರುವ ಕಾರಣ ಆನ್‌ಲೈನ್‌ ಮದ್ಯಮಾರಾಟ ಮಾಡುವ ಕುರಿತಾಗಿ ವಿರೋಧ ವ್ಯಕ್ತಪಡಿಸಿರುವ ಮಾಜಿ ಸಿಎಂ ಕುಮಾರಸ್ವಾಮಿ, ಕೊರೋನಾ ವೈರಸ್ ನಂತರ ಎದುರಾದ ಲಾಕ್ ಡೌನ್ ಪರಿಸ್ಥಿತಿಯಿಂದ ಜನತೆ ಆದಾಯ ಇಲ್ಲದೆ ತೀವ್ರ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದಾರೆ. ದೈನಂದಿನ ಜೀವನ ನಡೆಸಲು ಹೆಣಗಾಡುತ್ತಿದ್ದಾರೆ. ಇಂತಹ ಪರಿಸ್ಥಿತಿಯಲ್ಲಿ ಮನೆಬಾಗಿಲಿಗೆ ಮದ್ಯ ಪೂರೈಸುವ ಮನೆಹಾಳು ನಿರ್ಧಾರವನ್ನು ಹಿಂಪಡೆಯಬೇಕು ಎಂದು ಆಗ್ರಹಿಸಿದ್ದಾರೆ.

ಪೊಲೀಸರ ವಶದಲ್ಲಿದ್ದ ಖತರ್ನಾಕ್ ಸರಗಳ್ಳ ನೋರ್ವ ಪೊಲೀಸ್ ಠಾಣೆಯಿಂದಲೇ ಪರಾರಿಯಾಗಿರುವ ಘಟನೆ ತುಮಕೂರು ತಾಲೂಕಿನ ಕೋರಾ ಠಾಣೆಯಲ್ಲಿ ನಡೆದಿದೆ. ರಂಗಪ್ಪ ಅಲಿಯಾಸ್ ಪುನೀತ್ ಎಂಬಾತನೇ ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸಿ ಠಾಣೆಯಿಂದಲೇ ಕಾಲ್ಕಿತ್ತು ನಾಪತ್ತೆಯಾಗಿರುವ ಆರೋಪಿ. ಮೊನ್ನೆ ರಾತ್ರಿ ಪೊಲೀಸ್ ಠಾಣೆಯಲ್ಲಿ ಊಟ ಕೊಟ್ಟು ಕೊರೋನಾ ಭೀತಿಯಲ್ಲಿದ್ದ ಪೊಲೀಸರು ಸಾಮಾಜಿಕ ಅಂತರ ಕಾಯ್ದುಕೊಂಡಿದ್ದೆ ಠಾಣೆಯಿಂದ ಓಡಿ ಹೋಗಲು ಕಾರಣವಾಗಿದೆ.

ಚಾಲೆಂಜಿಂಗ್ ಸ್ಟಾರ್ ದರ್ಶನ್ ಭದ್ರಾ ಜಲಾಶಯಕ್ಕೆ ಭೇಟಿ ನೀಡಿದ್ದು, ಭದ್ರ ಅಭಯಾರಣ್ಯದಲ್ಲಿ ಜಂಗಲ್ ಸಫಾರಿ ಕೂಡ ಮಾಡಿದ್ದಾರೆ. ಹಾಸ್ಯ ನಟ ಚಿಕ್ಕಣ್ಣ ಸೇರಿ ಹತ್ತು ಜನ ಗೆಳೆಯರೊಂದಿಗೆ ದರ್ಶನ್ ಭದ್ರಾ ಜಲಾಶಯಕ್ಕೆ ಭೇಟಿ ಕೊಟ್ಟಿದ್ದು, ಬಿಆರ್‌ಪಿಯ ಜಂಗಲ್ ರೆಸಾರ್ಟ್‌ನಲ್ಲಿ ಎರಡು ದಿನ ವಾಸ್ತವ ಹೂಡಿದ್ದಾರೆ.

ಟೀಂ ಇಂಡಿಯಾ ಕ್ರಿಕೇಟಿಗ ಯಜುವೇಂದ್ರ ಚಹಲ್, ಗೆಳತಿ ಧನಶ್ರೀ ಶರ್ಮಾರೊಂದಿಗೆ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ. ತಮ್ಮ ಎಂಗೇಜ್‌ಮೆಂಟ್‌ನ ಕೆಲ ಫೋಟೋಗಳನ್ನ ಚಹಲ್ ಸೋಶಿಯಲ್ ಮೀಡಿಯಾದಲ್ಲಿ ಶೇರ್ ಮಾಡಿಕೊಂಡಿದ್ದಾರೆ.

ಶ್ರೀ ಸಾಯಿ ಕೃಷ್ಣ ಜ್ಯೋತಿಷ್ಯಾಲಯ, ಪಂಡಿತ್ ಡಿ.ಎಸ್ ಜೋಷಿ - 9731355538
ನಿಮ್ಮ ಸಮಸ್ಯೆಗಳಾದ ಉದ್ಯೋಗ, ಸತಿ-ಪತಿ ಕಲಹ, ಮದುವೆ, ಪ್ರೇಮ ವಿಚಾರ, ವಶೀಕರಣ ಯಾವುದೇ ಕಠಿಣ-ಕ್ಲಿಷ್ಟ ಸಂಕಷ್ಟಗಳಿಗೆ ಸಂಪರ್ಕಿಸಿ.
ವಿಳಾಸ : ಸಾಯಿಬಾಬಾ ದೇವಸ್ಥಾನ ಎದುರು, 15ನೇ ಕ್ರಾಸ್, ಬಸ್ ನಿಲ್ದಾಣದ ಪಕ್ಕ, ಸಂಪಿಗೆ ರೋಡ್, ಮಲ್ಲೇಶ್ವರಂ, ಬೆಂಗಳೂರು
ನಿಮ್ಮ ಸಮಸ್ಯೆಗಳಿಗೆ ಕಾಶಿ ತಾಂತ್ರಿಕ ಅಘೋರಿ, ನಾಗಸಾಧುಗಳ ವಿಶೇಷ ಪ್ರಯೋಗಗಳಾದ ಮಹಾರುದ್ರ ಪೂಜೆ, ಮಂಡಲ ಪೂಜೆ, ಅಷ್ಟ ದಿಗ್ಬಂಧನೆಯ ಪೂಜೆಯಿಂದ 11 ದಿನಗಳಲ್ಲಿ ಪರಿಹಾರ ಶತಸಿದ್ಧ.
ಹೆಸರಾಂತ ವಂಶಪಾರಂಪರ್ಯ ಜ್ಯೋತಿಷ್ಯರು ಪಂಡಿತ್ ಡಿ.ಎಸ್ ಜೋಷಿ ತಮ್ಮ 25 ವರ್ಷಗಳ ಅನುಭವದಲ್ಲಿ 20,000 ಕ್ಕೂ ಹೆಚ್ಚು ಸಮಸ್ಯೆಗಳನ್ನ ಇತ್ಯರ್ಥ ಮಾಡಿ ಸಾವಿರಾರು ಕುಟುಂಬಗಳ ನೆಮ್ಮದಿಯ ಬದುಕಿಗೆ ನೆರವಾಗಿದ್ದಾರೆ.

Dailyhunt
Disclaimer: This story is auto-aggregated by a computer program and has not been created or edited by Dailyhunt. Publisher: Karnataka TV
Top