Dailyhunt Logo
  • Light mode
    Follow system
    Dark mode
    • Play Story
    • App Story
Haveri News: ಎಂ.ಜಿ. ತಿಮ್ಮಾಪುರದಲ್ಲಿ ಬಸ್‌ಗಾಗಿ ವಿದ್ಯಾರ್ಥಿಗಳು, ಗ್ರಾಮಸ್ಥರ ಪ್ರತಿಭಟನೆ

Haveri News: ಎಂ.ಜಿ. ತಿಮ್ಮಾಪುರದಲ್ಲಿ ಬಸ್‌ಗಾಗಿ ವಿದ್ಯಾರ್ಥಿಗಳು, ಗ್ರಾಮಸ್ಥರ ಪ್ರತಿಭಟನೆ

Karnataka TV 2 days ago

Haveri News: ಹಾವೇರಿ: ಸಮರ್ಪಕ ಬಸ್ ಸೌಲಭ್ಯ ಕಲ್ಪಿಸಬೇಕು ಹಾಗೂ ಗ್ರಾಮದಲ್ಲಿ ಈ ಮಾರ್ಗದ ಎಲ್ಲ ಬಸ್‌ಗಳಿಗೆ ನಿಲುಗಡೆ ನೀಡಬೇಕು ಎಂದು ಒತ್ತಾಯಿಸಿ ಹಾವೇರಿ ತಾಲೂಕಿನ ಎಂ.ಜಿ. ತಿಮ್ಮಾಪುರ ಗ್ರಾಮದಲ್ಲಿ ನೂರಾರು ವಿದ್ಯಾರ್ಥಿಗಳು ಹಾಗೂ ಗ್ರಾಮಸ್ಥರು ಪ್ರತಿಭಟನೆ ನಡೆಸಿದರು.

ಗ್ರಾಮದಿಂದ ಪ್ರತಿನಿತ್ಯ ನೂರಾರು ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ಹಾವೇರಿ, ರಾಣೇಬೆನ್ನೂರು ಸೇರಿದಂತೆ ವಿವಿಧೆಡೆ ಸಂಚರಿಸುತ್ತಾರೆ. ಆದರೆ ಸಮರ್ಪಕ ಬಸ್ ಸೌಲಭ್ಯ ಇಲ್ಲದಿರುವುದರಿಂದ ತೀವ್ರ ತೊಂದರೆ ಎದುರಿಸುವಂತಾಗಿದೆ. ಈ ಮಾರ್ಗದಲ್ಲಿ ಸಂಚರಿಸುವ ಹಲವು ಬಸ್‌ಗಳು ಗ್ರಾಮದಲ್ಲಿ ನಿಲುಗಡೆ ನೀಡದೆ ತೆರಳುತ್ತಿರುವುದರಿಂದ ವಿದ್ಯಾರ್ಥಿಗಳು ಸಮಯಕ್ಕೆ ಸರಿಯಾಗಿ ಶಾಲಾ-ಕಾಲೇಜುಗಳಿಗೆ ತೆರಳಲು ಸಾಧ್ಯವಾಗುತ್ತಿಲ್ಲ ಎಂದು ಪ್ರತಿಭಟನಾಕಾರರು ಆರೋಪಿಸಿದರು.

ಬಸ್‌ಗಾಗಿ ಗಂಟೆಗಟ್ಟಲೆ ಕಾಯಬೇಕಾದ ಪರಿಸ್ಥಿತಿ ನಿರ್ಮಾಣವಾಗಿದ್ದು, ಅನಿವಾರ್ಯವಾಗಿ ಖಾಸಗಿ ವಾಹನಗಳನ್ನು ಅವಲಂಬಿಸಬೇಕಾಗಿದೆ. ಇದರಿಂದ ವಿದ್ಯಾರ್ಥಿಗಳು, ಮಹಿಳೆಯರು ಹಾಗೂ ವೃದ್ಧರು ಸೇರಿದಂತೆ ಸಾರ್ವಜನಿಕರು ಸಂಕಷ್ಟ ಅನುಭವಿಸುತ್ತಿದ್ದಾರೆ ಎಂದು ಗ್ರಾಮಸ್ಥರು ಅಸಮಾಧಾನ ವ್ಯಕ್ತಪಡಿಸಿದರು.

ತಕ್ಷಣ ಸಾರಿಗೆ ಇಲಾಖೆ ಅಧಿಕಾರಿಗಳು ಗ್ರಾಮಕ್ಕೆ ಭೇಟಿ ನೀಡಿ ಸಮಸ್ಯೆ ಪರಿಶೀಲಿಸಬೇಕು. ಎಂ.ಜಿ. ತಿಮ್ಮಾಪುರಕ್ಕೆ ಸಮರ್ಪಕ ಬಸ್ ಸೌಲಭ್ಯ ಕಲ್ಪಿಸುವುದರ ಜೊತೆಗೆ ಈ ಮಾರ್ಗದಲ್ಲಿ ಸಂಚರಿಸುವ ಎಲ್ಲ ಬಸ್‌ಗಳಿಗೆ ಗ್ರಾಮದಲ್ಲಿ ಕಡ್ಡಾಯ ನಿಲುಗಡೆ ನೀಡಬೇಕು. ವಿದ್ಯಾರ್ಥಿಗಳ ಶೈಕ್ಷಣಿಕ ಹಿತದೃಷ್ಟಿಯಿಂದ ಸಮಸ್ಯೆಗೆ ಶಾಶ್ವತ ಪರಿಹಾರ ಕಲ್ಪಿಸಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.

Dailyhunt
Disclaimer: This content has not been generated, created or edited by Dailyhunt. Publisher: Karnataka TV