Dailyhunt Logo
  • Light mode
    Follow system
    Dark mode
    • Play Story
    • App Story
ಹಿಜಾಬ್ VS ಕೇಸರಿ ಶಾಲು ಶಾಲಾ-ಕಾಲೇಜುಗಳಲ್ಲಿ ಶಾಲು ವಿತರಣೆ

ಹಿಜಾಬ್ VS ಕೇಸರಿ ಶಾಲು ಶಾಲಾ-ಕಾಲೇಜುಗಳಲ್ಲಿ ಶಾಲು ವಿತರಣೆ

Karnataka TV 4 months ago

ಶಾಲಾ-ಕಾಲೇಜುಗಳಲ್ಲಿ ಹಿಜಾಬ್‌ಗೆ ಅನುಮತಿ ನೀಡಿರುವ ರಾಜ್ಯ ಸರ್ಕಾರದ ನಿರ್ಧಾರಕ್ಕೆ ವಿರೋಧ ವ್ಯಕ್ತಪಡಿಸಿರುವ ಹಿಂದೂಪರ ಸಂಘಟನೆಗಳು, ರಾಜ್ಯದ ವಿವಿಧ ಭಾಗಗಳಲ್ಲಿ ಪ್ರತಿಭಟನೆ ಹಾಗೂ ಜಾಗೃತಿ ಅಭಿಯಾನಗಳನ್ನು ಆರಂಭಿಸಿವೆ.

ಹಿಜಾಬ್ ವಿಚಾರವಾಗಿ ರಾಜ್ಯ ಸರ್ಕಾರದ ನಡೆಗೆ ಆಕ್ಷೇಪ ವ್ಯಕ್ತಪಡಿಸಿರುವ ಶ್ರೀರಾಮ ಸೇನೆ ಹಾಗೂ ಇತರ ಹಿಂದೂಪರ ಸಂಘಟನೆಗಳು, ಹುಬ್ಬಳ್ಳಿಯಲ್ಲಿ ವಿಭಿನ್ನ ಅಭಿಯಾನಕ್ಕೆ ಚಾಲನೆ ನೀಡಿವೆ.

ದಿನಿಂದ ರಾಜ್ಯದಾದ್ಯಂತ ಶಾಲಾ-ಕಾಲೇಜುಗಳ ವಿದ್ಯಾರ್ಥಿಗಳಿಗೆ ಕೇಸರಿ ಶಾಲು ವಿತರಣೆ ಮಾಡುವ ಕಾರ್ಯಕ್ರಮವನ್ನು ಶ್ರೀರಾಮ ಸೇನೆ ಹಮ್ಮಿಕೊಂಡಿದೆ.

ರಾಜ್ಯದ ವಿವಿಧೆಡೆ ಹಿಂದೂಪರ ಸಂಘಟನೆಗಳ ಕಾರ್ಯಕರ್ತರು ವಿದ್ಯಾರ್ಥಿಗಳಿಗೆ ಕೇಸರಿ ಶಾಲು ವಿತರಣೆ ಮಾಡುತ್ತಿದ್ದು, ಈ ಮೂಲಕ ಸರ್ಕಾರದ ನಿರ್ಧಾರದ ವಿರುದ್ಧ ತಮ್ಮ ಅಸಮಾಧಾನವನ್ನು ವ್ಯಕ್ತಪಡಿಸುತ್ತಿದ್ದಾರೆ.

ರಾಜ್ಯ ಸರ್ಕಾರದ ಕ್ರಮವನ್ನು ವಿರೋಧಿಸಿ ನಡೆಸಲಾಗುತ್ತಿರುವ ಈ ಅಭಿಯಾನವು ರಾಜಕೀಯ ಹಾಗೂ ಸಾಮಾಜಿಕ ವಲಯಗಳಲ್ಲಿ ಚರ್ಚೆಗೆ ಗ್ರಾಸವಾಗಿದ್ದು, ಮುಂದಿನ ದಿನಗಳಲ್ಲಿ ಈ ವಿಚಾರ ಮತ್ತಷ್ಟು ಮಹತ್ವ ಪಡೆದುಕೊಳ್ಳುವ ಸಾಧ್ಯತೆ ಇದೆ.

ಒಟ್ಟಾರೆ, ಹಿಜಾಬ್ ವಿಚಾರವಾಗಿ ರಾಜ್ಯ ಸರ್ಕಾರದ ನಿರ್ಧಾರ ಮತ್ತು ಅದಕ್ಕೆ ಪ್ರತಿಯಾಗಿ ಹಿಂದೂಪರ ಸಂಘಟನೆಗಳು ಕೈಗೊಂಡಿರುವ ಕೇಸರಿ ಶಾಲು ಅಭಿಯಾನ ರಾಜ್ಯದಲ್ಲಿ ಹೊಸ ಚರ್ಚೆಗೆ ಕಾರಣವಾಗಿದ್ದು, ಈ ಬೆಳವಣಿಗೆಗಳು ಎಲ್ಲರ ಗಮನ ಸೆಳೆದಿವೆ.

Dailyhunt
Disclaimer: This content has not been generated, created or edited by Dailyhunt. Publisher: Karnataka TV