Dailyhunt Logo
  • Light mode
    Follow system
    Dark mode
    • Play Story
    • App Story
ಕರ್ನಾಟಕಕ್ಕೆ ಮುಂಗಾರು ಎಂಟ್ರಿ! ಸಿಡಿಲು, ಬಿರುಗಾಳಿ ಮಳೆ ಎಚ್ಚರಿಕೆ!

ಕರ್ನಾಟಕಕ್ಕೆ ಮುಂಗಾರು ಎಂಟ್ರಿ! ಸಿಡಿಲು, ಬಿರುಗಾಳಿ ಮಳೆ ಎಚ್ಚರಿಕೆ!

Karnataka TV 5 days ago

ವರ್ಷದ ಮುಂಗಾರು ಜೂನ್ 4 ರಿಂದ ಕರ್ನಾಟಕವನ್ನು ಪ್ರವೇಶಿಸುವ ಸಾಧ್ಯತೆಯಿದೆ, ಆರಂಭಿಕ ಹಂತದಲ್ಲಿ ಅದು ದುರ್ಬಲ ಸ್ವರೂಪದಲ್ಲಿರಬಹುದು ಎಂದು ಹವಾಮಾನ ತಜ್ಞರು ಅಂದಾಜಿಸಿದ್ದಾರೆ. ಜೂನ್ 7 ರಿಂದ 8 ರೊಳಗೆ ಕರಾವಳಿ ಮತ್ತು ಮಲೆನಾಡು ಭಾಗಗಳಲ್ಲಿ ಮುಂಗಾರು ಚಟುವಟಿಕೆಗಳು ಚುರುಕಾಗುವ ಸಾಧ್ಯತೆಯಿದೆ.

ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ ಕೆಲವು ದಿನಗಳ ಕಾಲ ಗುಡುಗು, ಸಿಡಿಲು ಹಾಗೂ ಬಿರುಗಾಳಿ ಮಳೆಯಾಗುವ ಸಾಧ್ಯತೆ ಇದೆ. ವಿಶೇಷವಾಗಿ ಉತ್ತರ ಒಳನಾಡು ಭಾಗಗಳಲ್ಲಿ ಜೂನ್ 1 ರಿಂದ 4 ಗಂಟೆಯವರೆಗೆ 40 ರಿಂದ 50 ಕಿಲೋಮೀಟರ್ ವೇಗದಲ್ಲಿ ಗಾಳಿ ಬೀಸುವ ಮುನ್ಸೂಚನೆ ನೀಡಲಾಗಿದೆ.

ಕರಾವಳಿ ಜಿಲ್ಲೆಗಳಲ್ಲಿ ಹಗಲು ವೇಳೆ ಬಿಸಿಲು ಮತ್ತು ಮೋಡ ಕವಿದ ವಾತಾವರಣ ಇರಲಿದೆ, ಸಂಜೆ ಹಾಗೂ ರಾತ್ರಿ ವೇಳೆ ಕೆಲವೆಡೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಮಲೆನಾಡಿನ ಕೊಡಗು, ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಸಂಜೆ ಮತ್ತು ರಾತ್ರಿ ವೇಳೆಗೆ ಗುಡುಗು ಸಹಿತ ಮಳೆಯ ಚಟುವಟಿಕೆ ಹೆಚ್ಚಾಗುವ ನಿರೀಕ್ಷೆಯಿದೆ.

ದಕ್ಷಿಣ ಒಳನಾಡಿನ, ಚಾಮರಾಜನಗರ, ಮೈಸೂರು, ರಾಮನಗರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಕೋಲಾರ, ಚಿಕ್ಕಬಳ್ಳಾಪುರ ಮತ್ತು ತುಮಕೂರು ಜಿಲ್ಲೆಗಳಲ್ಲಿ ಸಂಜೆ ಹಾಗೂ ರಾತ್ರಿ ವೇಳೆಗೆ ಗುಡುಗು ಮಳೆಯ ಸಾಧ್ಯತೆ ಇದೆ. ಚಿತ್ರದುರ್ಗ, ದಾವಣಗೆರೆ ಮತ್ತು ವಿಜಯನಗರ ಜಿಲ್ಲೆಗಳಲ್ಲಿ ಮೋಡ ಕವಿದ ವಾತಾವರಣ ಮುಂದುವರಿಯಲಿದೆ, ಅಲ್ಲಲ್ಲಿ, ಗಾಳಿಯ ಒತ್ತಡದ ಬದಲಾವಣೆಗಳು ಆಧಾರದ ಮೇಲೆ ಮಳೆಯಾಗುವ ಸಾಧ್ಯತೆ ಇದೆ.

ಮುಂಗಾರು ಮಳೆ ಪ್ರಮಾಣದ ಬಗ್ಗೆ ಅನಿಶ್ಚಿತತೆ ಇರುವ ರೈತರು ಲಭ್ಯವಾಗುವ ಮಳೆನೀರನ್ನು ಕೃಷಿ ಹೊಂಡಗಳು ಹಾಗೂ ಜಲಸಂಗ್ರಹಣಾ ವ್ಯವಸ್ಥೆಗಳ ಮೂಲಕ ಸಂಗ್ರಹಿಸಿ. ಗುಡುಗು, ಸಿಡಿಲು ಹಾಗೂ ಬಿರುಗಾಳಿ ಸಂಭವಿಸುವ ಜನರು ಮರಗಳ ಕೆಳಗೆ ನಿಲ್ಲುವುದನ್ನು ತಪ್ಪಿಸಿ. ರೈತರು ಮತ್ತು ಸಾರ್ವಜನಿಕರು ಹವಾಮಾನ ಇಲಾಖೆ ಅಧಿಕೃತ ಮಾಹಿತಿಯನ್ನು ಗಮನಿಸಿ, ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಬೇಕು.

Dailyhunt
Disclaimer: This content has not been generated, created or edited by Dailyhunt. Publisher: Karnataka TV