Dailyhunt Logo
  • Light mode
    Follow system
    Dark mode
    • Play Story
    • App Story
Political News: ನನ್ನ ರಾಜೀನಾಮೆ ಮುಖ್ಯಮಂತ್ರಿ ಹುದ್ದೆಗೆ ಮಾತ್ರ, ಸಕ್ರಿಯ ರಾಜಕಾರಣಕ್ಕಲ್ಲ: ಸಿದ್ದರಾಮಯ್ಯ

Political News: ನನ್ನ ರಾಜೀನಾಮೆ ಮುಖ್ಯಮಂತ್ರಿ ಹುದ್ದೆಗೆ ಮಾತ್ರ, ಸಕ್ರಿಯ ರಾಜಕಾರಣಕ್ಕಲ್ಲ: ಸಿದ್ದರಾಮಯ್ಯ

Karnataka TV 1 week ago

Political News: ಸಿದ್ದರಾಮಯ್ಯ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಬಳಿಕ ಪ್ರೆಸ್‌ಮೀಟ್ ನಡೆಸಿ ಮಾತನಾಡಿರುವ ಅವರು, ನನಗೆ ರಾಷ್ಟ್ರ ರಾಜಕಾರಣದಲ್ಲಿ ಆಸಕ್ತಿ ಇಲ್ಲ ರಾಜ್ಯ ರಾಜಕಾರಣದಲ್ಲೇ ಸಕ್ರೀಯನಾಗಿರುತ್ತೇನೆ ಎಂದಿದ್ದಾರೆ.

ಈ ಬಗ್ಗೆ ಮಾತನಾಡಿರುವ ಸಿಎಂ, ಇಂದು ಲೋಕಭವನಕ್ಕೆ ತೆರಳಿ ರಾಜ್ಯಪಾಲರ ಅನುಪಸ್ಥಿತಿಯಲ್ಲಿ ಅವರ ವಿಶೇಷ ಕಾರ್ಯದರ್ಶಿಗಳಿಗೆ ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ನನ್ನ ರಾಜೀನಾಮೆ ಪತ್ರವನ್ನು ಸಲ್ಲಿಸಿದ್ದೇನೆ.

ಹಳ್ಳಿಗಾಡಿನಲ್ಲಿ ಹುಟ್ಟಿಬೆಳೆದ ನಾನು ಮುಂದೊಂದು ದಿನ ಈ ರಾಜ್ಯದ ಶಾಸಕ, ಮಂತ್ರಿ, ವಿರೋಧ ಪಕ್ಷದ ನಾಯಕ, ಎರಡೆರಡು ಬಾರಿ ಮುಖ್ಯಮಂತ್ರಿಯಾಗುತ್ತೇನೆ ಎಂಬ ಕನಸನ್ನು ಸಹ ಕಂಡಿರಲಿಲ್ಲ. ಇಂತದ್ದೊಂದು ದುಬಾರಿಯಾದ ಕನಸು ನನಸಾಗಿರುವುದು ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಸಂವಿಧಾನದಿಂದ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಬುದ್ಧ, ಬಸವ, ಬಾಬಾ ಸಾಹೇಬರು, ಮಹಾತ್ಮ ಗಾಂಧಿಯವರೇ ನನ್ನ ಆದರ್ಶ. ನನ್ನ ನಲವತ್ತೆಂಟು ವರ್ಷಗಳ ರಾಜಕೀಯ ಜೀವನದಲ್ಲಿ ನಾಡಿನ ಅವಕಾಶ ವಂಚಿತ, ಶೋಷಿತ, ಬಡ ಜನರ ಪರವಾಗಿ ಪ್ರಾಮಾಣಿಕವಾಗಿ ದುಡಿದ ಸಂತೃಪ್ತಿಯಿದೆ. ನನ್ನನ್ನು ಶಾಸಕಾಂಗ ಪಕ್ಷದ ನಾಯಕನಾಗಿ ಆರಿಸಿ, ಈ ವರೆಗೆ ಮುಖ್ಯಮಂತ್ರಿಯಾಗಿ ಜನಸೇವೆಗೆ ಅವಕಾಶ ಮಾಡಿಕೊಟ್ಟ ಪಕ್ಷದ ಶಾಸಕರಿಗೆ, ನನ್ನ ಹೆಗಲಿಗೆ ಹೆಗಲಾಗಿ ದುಡಿದ ಸಂಪುಟ ಸಹೋದ್ಯೋಗಿಗಳಿಗೆ, ಅವಕಾಶ ನೀಡಿದ ಪಕ್ಷದ ವರಿಷ್ಠರಾದ ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಹಾಗೂ ನನ್ನ ರಾಜಕೀಯ ಬದುಕಿನುದ್ದಕ್ಕೂ ಪ್ರೀತಿ ತುಂಬಿದ, ಅಭಿಮಾನಿಸಿದ, ಇಲ್ಲಿಯ ತನಕ ಕೈಹಿಡಿದು ನಡೆಸಿದ ಹೃದಯವಂತ ಕನ್ನಡಿಗರಿಗೆ ನಾನು ಚಿರಋಣಿ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಸಂವಿಧಾನವೇ ನನಗೆ ಧರ್ಮ, ಜನರೇ ನನ್ನ ಪಾಲಿನ ದೇವರು. ನನ್ನ ರಾಜೀನಾಮೆ ಮುಖ್ಯಮಂತ್ರಿ ಹುದ್ದೆಗೆ ಮಾತ್ರವೇ ಸೀಮಿತ, ಸಕ್ರಿಯ ರಾಜಕಾರಣಕ್ಕಲ್ಲ. ನನ್ನ ಜೀವದ ಕೊನೆಯುಸಿರು ಇರುವ ವರೆಗೂ ಸಾಮಾಜಿಕ ನ್ಯಾಯಕ್ಕಾಗಿ ಮತ್ತು ಸಂವಿಧಾನ ವಿರೋಧಿ ಕೋಮುವಾದಿ ಶಕ್ತಿಗಳ ವಿರುದ್ಧ ಹೋರಾಟ ಮಾಡುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ನನ್ನ ರಾಜೀನಾಮೆ ಮುಖ್ಯಮಂತ್ರಿ ಹುದ್ದೆಗೆ ಮಾತ್ರ, ಸಕ್ರಿಯ ರಾಜಕಾರಣಕ್ಕಲ್ಲ. ನನ್ನ ಜೀವದಲ್ಲಿ ಕೊನೆಯುಸಿರು ಇರುವವರೆಗೆ ಸಾಮಾಜಿಕ ನ್ಯಾಯಕ್ಕಾಗಿ, ಸಂವಿಧಾನದ ಉಳಿವಿಗಾಗಿ ಮತ್ತು ಕೋಮುವಾದದ ವಿರುದ್ಧ ಹೋರಾಟ ಮಾಡುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

Dailyhunt
Disclaimer: This content has not been generated, created or edited by Dailyhunt. Publisher: Karnataka TV