Dailyhunt
ಪ್ರೀತಿ ಅಂತ ನಂಬಿಸಿ ʼವಿಷʼ ಕೊಟ್ಟ? ಕಾಂಗ್ರೆಸ್ ಮುಖಂಡನ ವಿರುದ್ಧ ಗಂಭೀರ ದೂರು!

ಪ್ರೀತಿ ಅಂತ ನಂಬಿಸಿ ʼವಿಷʼ ಕೊಟ್ಟ? ಕಾಂಗ್ರೆಸ್ ಮುಖಂಡನ ವಿರುದ್ಧ ಗಂಭೀರ ದೂರು!

Karnataka TV 1 week ago

ಟಿ. ನರಸೀಪುರ ಪುರಸಭೆ ಮಾಜಿ ಅಧ್ಯಕ್ಷ ಹಾಗೂ ಕಾಂಗ್ರೆಸ್ ಮುಖಂಡ ಮದನ್ ರಾಜ್ ವಿರುದ್ಧ ಗಂಭೀರ ಆರೋಪಗಳು ಕೇಳಿಬಂದಿವೆ. ಪ್ರೀತಿಸಿ ಮದುವೆಯಾಗುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿ ನಂತರ ವಂಚನೆ ಮಾಡಲಾಗಿದೆ ಎಂದು ಯುವತಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

ಮೇಘನಾ ಎಂಬ ಯುವತಿ ನೀಡಿದ ದೂರಿನ ಪ್ರಕಾರ, ಮದನ್ ರಾಜ್ ತನ್ನನ್ನು ಪ್ರೀತಿಸಿ ಮದುವೆಯಾಗುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿದ್ದಾರೆ ಎಂದು ಆರೋಪಿಸಲಾಗಿದೆ. ಬಳಿಕ ಅವರು ಮತ್ತೊಬ್ಬ ಯುವತಿಯೊಂದಿಗೆ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ ಎಂಬುದೂ ತಿಳಿದುಬಂದಿದೆ.

ಇದಲ್ಲದೆ, ಇಬ್ಬರೂ ಸೇರಿ ವಿಷ ಕುಡಿದು ಆತ್ಮಹತ್ಯೆ ಮಾಡಿಕೊಳ್ಳೋಣ ಎಂದು ಹೇಳಿ ನಾಟಕವಾಡಲಾಗಿತ್ತು. ಆದರೆ ಮದನ್ ರಾಜ್ ಕೇವಲ ಯುವತಿಗೆ ಮಾತ್ರ ವಿಷ ನೀಡಿದ್ದಾನೆ ಎಂಬ ಗಂಭೀರ ಆರೋಪವೂ ದೂರಿನಲ್ಲಿ ಉಲ್ಲೇಖವಾಗಿದೆ. ಮದನ್ ರಾಜ್ ಮತ್ತೊಂದು ಯುವತಿಯೊಂದಿಗೆ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ ಎಂಬ ಆರೋಪವೂ ಕೇಳಿಬಂದಿದ್ದು, ಆ ನಿಶ್ಚಿತಾರ್ಥದ ಫೋಟೋಗಳನ್ನು ಸಾಕ್ಷ್ಯವಾಗಿ ಪೊಲೀಸ್ ಠಾಣೆಗೆ ಸಲ್ಲಿಸಲಾಗಿದೆ ಎಂದು ತಿಳಿದುಬಂದಿದೆ.

ಮನನೊಂದು ಯುವತಿ ಟಿ. ನರಸೀಪುರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ದೂರಿನ ಆಧಾರದ ಮೇಲೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಆರೋಪಿಯ ಪತ್ತೆಗಾಗಿ ಕ್ರಮ ಕೈಗೊಂಡಿದ್ದಾರೆ. ಪ್ರೀತಿ, ವಂಚನೆ ಮತ್ತು ಗಂಭೀರ ಆರೋಪಗಳ ಈ ಪ್ರಕರಣ ಸ್ಥಳೀಯ ರಾಜಕೀಯ ವಲಯದಲ್ಲೂ ತೀವ್ರ ಚರ್ಚೆಗೆ ಕಾರಣವಾಗಿದೆ. ಪೊಲೀಸರು ಮುಂದಿನ ತನಿಖೆಯನ್ನು ತೀವ್ರಗೊಳಿಸಿದ್ದಾರೆ.

Dailyhunt
Disclaimer: This content has not been generated, created or edited by Dailyhunt. Publisher: Karnataka TV