Dailyhunt Logo
  • Light mode
    Follow system
    Dark mode
    • Play Story
    • App Story
9ನೇ ತರಗತಿ, ಎಸ್ಸೆಸ್ಸೆಲ್ಸಿ, ಪಿಯುಸಿ ವಿದ್ಯಾರ್ಥಿಗಳಿಗೆ ಸ್ಕಾಲರ್‌ಶಿಪ್ : ಹೀಗೆ ಅರ್ಜಿ ಸಲ್ಲಿಸಿ

9ನೇ ತರಗತಿ, ಎಸ್ಸೆಸ್ಸೆಲ್ಸಿ, ಪಿಯುಸಿ ವಿದ್ಯಾರ್ಥಿಗಳಿಗೆ ಸ್ಕಾಲರ್‌ಶಿಪ್ : ಹೀಗೆ ಅರ್ಜಿ ಸಲ್ಲಿಸಿ

ಬೆಂಗಳೂರು : ಕರ್ನಾಟಕ ಸರ್ಕಾರವು ರಾಷ್ಟ್ರೀಯ ಮಟ್ಟದಲ್ಲಿ ಜಾರಿಗೆ ತಂದಿರುವ ರಾಷ್ಟ್ರೀಯ ಅರ್ಹತೆ ಮತ್ತು ಆದಾಯ ಆಧಾರಿತ ವಿದ್ಯಾರ್ಥಿವೇತನ (National Means-cum-Merit Scholarship - NMMS 2026) ಯೋಜನೆಯಡಿ 2026-27ನೇ ಸಾಲಿನ ವಿದ್ಯಾರ್ಥಿವೇತನಕ್ಕಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಅರ್ಹ ಹಾಗೂ ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಅರ್ಜಿಗಳನ್ನು ಸಲ್ಲಿಸುವ ಮೂಲಕ ಸ್ಕಾಲರ್ ಶಿಪ್ ಯೋಜನೆಯ ಲಾಭ ಪಡೆಯಬಹುದಾಗಿದೆ.

9, 10ನೇ ತರಗತಿ ಹಾಗೂ ಪಿಯುಸಿಯಲ್ಲಿ ಅಧ್ಯಯನ ಮಾಡುತ್ತಿರುವ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದು. ರಾಜ್ಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಇಲಾಖೆಯು ವಿದ್ಯಾರ್ಥಿಗಳಿಗೆ ಪರೀಕ್ಷೆ ಆಯೋಜಿಸುತ್ತದೆ. ಬೌದ್ಧಿಕ ಸಾಮರ್ಥ್ಯ ಪರೀಕ್ಷೆ ಹಾಗೂ ಶೈಕ್ಷಣಿಕ ಪ್ರವೃತ್ತಿ ಪರೀಕ್ಷೆಯಲ್ಲಿ ಶೇ.40ರಷ್ಟು (ಎಸ್ಸಿ, ಎಸ್ಟಿ, ವಿಶೇಷ ಚೇತನರು ಶೇ.32) ಅಂಕಗಳನ್ನು ಪಡೆದವರಿಗೆ ಸ್ಕಾಲರ್ ಶಿಪ್ ನೀಡಲಾಗುತ್ತದೆ.

2026-27ನೇ ಸಾಲಿನ ಎನ್‌ಎಂಎಂಎಸ್ ( NMMS) ವಿದ್ಯಾರ್ಥಿವೇತನಕ್ಕೆ ಅರ್ಜಿ ಸಲ್ಲಿಸಲು ಬೇಕಾಗುವ ಪ್ರಮುಖ ದಾಖಲೆಗಳೆಂದರೆ ಆಧಾರ್ ಕಾರ್ಡ್, ಜಾತಿ ಪ್ರಮಾಣ ಪತ್ರ, ನವೀಕೃತ (ರಿನಿವಲ್ ಆದ) ಆದಾಯ ಪ್ರಮಾಣ ಪತ್ರ ಹಾಗೂ ಆಧಾರ್ಗೆ ಜೋಡಣೆಯಾಗಿರುವ ಸಕ್ರಿಯ ಬ್ಯಾಂಕ್ ಖಾತೆ ಪಾಸ್ ಬುಕ್. ಈ ದಾಖಲೆಗಳನ್ನು ತಪ್ಪದೇ ಸಿದ್ಧವಾಗಿಟ್ಟುಕೊಳ್ಳಿ.

ಅರ್ಜಿ ಸಲ್ಲಿಕೆ ಹೇಗೆ?

ಅರ್ಹ ಹಾಗೂ ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಆನ್ ಲೈನ್ ಮೂಲಕವೇ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸಲು ವೆಬ್ಸೈಟ್: scholarships.gov.in. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 31-08-2026. ಇದೇ ಮೊದಲ ಬಾರಿಗೆ ಈ ವಿದ್ಯಾರ್ಥಿವೇತನಕ್ಕೆ ಆಯ್ಕೆಯಾದ ವಿದ್ಯಾರ್ಥಿಗಳು ಹೊಸದಾಗಿ ನೋಂದಣಿ ಮಾಡಿಕೊಳ್ಳಬೇಕು. ಈಗಾಗಲೇ ವಿದ್ಯಾರ್ಥಿವೇತನ ಪಡೆಯುತ್ತಿದ್ದು ಮುಂದಿನ ತರಗತಿಗಳಿಗೆ ಮುಂದುವರಿದಿರುವ ವಿದ್ಯಾರ್ಥಿಗಳು ನವೀಕರಣ ಮಾಡಿಕೊಳ್ಳಬೇಕಾಗುತ್ತದೆ ಎಂದು ತಿಳಿಸಲಾಗಿದೆ.

Dailyhunt
Disclaimer: This content has not been generated, created or edited by Dailyhunt. Publisher: Karnatakanewsbeat