Dailyhunt Logo
  • Light mode
    Follow system
    Dark mode
    • Play Story
    • App Story
ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಚೇರಿಯಲ್ಲಿ ನೇಮಕಾತಿ : ಈ ಜಿಲ್ಲೆಯವರಿಗೆ ಗುಡ್ ನ್ಯೂಸ್

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಚೇರಿಯಲ್ಲಿ ನೇಮಕಾತಿ : ಈ ಜಿಲ್ಲೆಯವರಿಗೆ ಗುಡ್ ನ್ಯೂಸ್

ಬೆಂಗಳೂರು : ನೀವೇನಾದರೂ ಧಾರವಾಡ ಜಿಲ್ಲೆಯವರಾಗಿದ್ದು, ನಿಮ್ಮ ಜಿಲ್ಲೆಯಲ್ಲಿಯೇ ಉದ್ಯೋಗ ಪಡೆಯಬೇಕು ಎಂದು ಬಯಸುತ್ತಿದ್ದರೆ, ನಿಮಗೊಂದು ಸುವರ್ಣಾವಕಾಶ ದೊರೆತಿದೆ. ಧಾರವಾಡದಲ್ಲಿರುವ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಚೇರಿಯಲ್ಲಿ (DHFWO Dharwad Recruitment 2026) ಖಾಲಿ ಇರುವ 14 ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಲಾಗಿದೆ.

ಅರ್ಹ ಹಾಗೂ ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ.

ಹುದ್ದೆಗಳ ಸಂಕ್ಷಿಪ್ತ ವಿವರ

ನೇಮಕಾತಿ ಸಂಸ್ಥೆ: ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಚೇರಿ, ಧಾರವಾಡ
ಒಟ್ಟು ಹುದ್ದೆಗಳು: 14
ಹುದ್ದೆಗಳ ಹೆಸರು: ನರ್ಸಿಂಗ್ ಆಫೀಸರ್ ಇತ್ಯಾದಿ
ಉದ್ಯೋಗ ಸ್ಥಳ: ಧಾರವಾಡ
ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ: ಆಗಸ್ಟ್ 5

12 ನರ್ಸಿಂಗ್ ಆಫೀಸರ್, 1 ಜೂನಿಯರ್ ಲ್ಯಾಬೊರೇಟರಿ ಟೆಕ್ನಿಕಲ್ ಆಫೀಸರ್ ಹಾಗೂ 1 ಫಾರ್ಮಸಿ ಆಫೀಸರ್ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದೆ. ಅರ್ಜಿ ಸಲ್ಲಿಸುವವರಿಗೆ ಗರಿಷ್ಠ 45 ವರ್ಷಗಳ ವಯೋಮಿತಿ ನಿಗದಿಪಡಿಸಲಾಗಿದೆ. ಅರ್ಜಿ ಸಲ್ಲಿಸಲು ಯಾವುದೇ ಶುಲ್ಕ ಇರುವುದಿಲ್ಲ. ಸಲ್ಲಿಕೆಯಾದ ಅರ್ಜಿಗಳನ್ನು ಮೊದಲು ಪರಿಶೀಲನೆ ಮಾಡಲಾಗುತ್ತದೆ. ಇದಾದ ಬಳಿಕ ಮೆರಿಟ್ ಲಿಸ್ಟ್ ಬಿಡುಗಡೆ ಮಾಡಲಾಗುತ್ತದೆ. ನಂತರ ಸಂದರ್ಶನಕ್ಕೆ ಆಹ್ವಾನಿಸಿ ನೇಮಕಾತಿ ಮಾಡಿಕೊಳ್ಳಲಾಗುತ್ತದೆ.

ಅರ್ಜಿ ಸಲ್ಲಿಸುವುದು ಹೇಗೆ?

  • ಮೊದಲಿಗೆ dharwad.nic.in ವೆಬ್ ಸೈಟ್ ಗೆ ಭೇಟಿ ನೀಡಬೇಕು
  • ನಿಮಗೆ ಬೇಕಾದ ಹುದ್ದೆಯ ವಿಭಾಗವನ್ನು ಆಯ್ಕೆ ಮಾಡಿಕೊಳ್ಳಬೇಕು
  • ಆನ್ ಲೈನ್ ಮೂಲಕ ಅರ್ಜಿಯನ್ನು ಭರ್ತಿ ಮಾಡಬೇಕು
  • ಅಗತ್ಯ ದಾಖಲೆಗಳನ್ನು ಅಪ್ ಲೋಡ್ ಮಾಡಬೇಕು
  • ಫೀಸ್ ತುಂಬುವ ಮೂಲಕ ಅರ್ಜಿ ಸಲ್ಲಿಸಬೇಕು
  • ಫ್ಯೂಚರ್ ರೆಫರೆನ್ಸಿಗಾಗಿ ಅರ್ಜಿ ನಮೂನೆಯ ಪ್ರಿಂಟೌಟ್ ತೆಗೆದುಕೊಳ್ಳಬೇಕು
Dailyhunt
Disclaimer: This content has not been generated, created or edited by Dailyhunt. Publisher: Karnatakanewsbeat