Dailyhunt Logo
  • Light mode
    Follow system
    Dark mode
    • Play Story
    • App Story
ಬೇಬಿ ಕೇರ್‌ನಲ್ಲಿ ಮಕ್ಕಳ ಮೇಲೆ ಹಲ್ಲೆ ಕೇಸ್‌ : ಸ್ಪಷ್ಟನೆ ಕೊಟ್ಟ ಸಂಸ್ಥೆ

ಬೇಬಿ ಕೇರ್‌ನಲ್ಲಿ ಮಕ್ಕಳ ಮೇಲೆ ಹಲ್ಲೆ ಕೇಸ್‌ : ಸ್ಪಷ್ಟನೆ ಕೊಟ್ಟ ಸಂಸ್ಥೆ

Karnatakanewsbeat 3 weeks ago

ಬೆಂಗಳೂರು: ಹೆಚ್‌ಎಎಲ್ ಪೊಲೀಸ್ ಠಾಣಾ ವ್ಯಾಪ್ತಿಯ ಬೇಬಿ ಕೇರ್‌ನಲ್ಲಿ ಮಕ್ಕಳ ಮೇಲೆ ಹಲ್ಲೆ ನಡೆಸಿದ್ದ ಪ್ರಕರಣ ಸಂಬಂಧ ಕ್ಯಾಪ್‌ಜೆಮಿನಿ ಸಂಸ್ಥೆ ಸ್ಪಷ್ಟನೆ ನೀಡಿದೆ.

ಪತ್ರಿಕಾ ಪ್ರಕಟಣೆ ಮೂಲಕ ಸ್ಪಷ್ಟನೆ ನೀಡಿರುವ ಸಂಸ್ಥೆ, ಪ್ರತಿಯೊಬ್ಬ ಮಗುವಿನ ಸುರಕ್ಷತೆ ಮತ್ತು ಯೋಗಕ್ಷೇಮವೇ ನಮ್ಮ ಅತ್ಯುನ್ನತ ಆದ್ಯತೆಯಾಗಿದೆ.

ಬೆಂಗಳೂರಿನ ಡೇಕೇರ್‌ನಲ್ಲಿ ನಡೆದಿರುವ ಘಟನೆಯನ್ನ ಗಂಭೀರವಾಗಿ ಪರಿಗಣಿಸಿದ್ದೇವೆ. ಡೇ ಕೇರ್ ಕೇಂದ್ರವನ್ನು ನಮ್ಮ ಸಂಸ್ಥೆಯ ಬಾಹ್ಯ ಸೇವಾ ಪೂರೈಕೆದಾರ ಲಿಟಲ್ ಸ್ಕಾಲರ್ಸ್ ನಡೆಸುತ್ತಿದೆ. ಈ ಘಟನೆಗೆ ಸಂಬಂಧಿಸಿದಂತೆ ತನಿಖೆ ನಡೆಯುತ್ತಿದ್ದು, ಪೊಲೀಸ್ ಇಲಾಖೆಗೆ ಸಂಪೂರ್ಣ ಸಹಕಾರ ನೀಡುತ್ತಿದ್ದೇವೆ ಎಂದು ತಿಳಿಸಿದೆ.

ತನಿಖೆ ಪೂರ್ಣಗೊಳ್ಳುವವರೆಗೂ ಡೇ ಕೇರ್ ಮುಚ್ಚಲಾಗುವುದು. ಸತ್ಯಾಂಶ ಹೊರತರಲು ಹಾಗೂ ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಸಂಪೂರ್ಣ ಸಹಕಾರ ನೀಡುತ್ತೇವೆ. ಡೇ ಕೇರ್ ಅನ್ನು ತಾತ್ಕಾಲಿಕವಾಗಿ ಬಂದ್ ಮಾಡಿರುವ ಕಾರಣ, ಮಕ್ಕಳು ಇರುವ ಸಿಬ್ಬಂದಿಗೆ ವರ್ಕ್ ಫ್ರಂ ಹೋಮ್‌ಗೆ ಅವಕಾಶ ನೀಡಲಾಗಿದೆ. ಭಾರತದಾದ್ಯಂತ ನಮ್ಮ ಎಲ್ಲ ಕಚೇರಿಗಳಲ್ಲಿರುವ ಡೇ-ಕೇರ್ ಸೇವಾ ಪೂರೈಕೆದಾರರ ವ್ಯವಸ್ಥೆಯನ್ನು ಮರುಪರಿಶೀಲಿಸಲಾಗುತ್ತಿದೆ ಎಂದಿದೆ.ಈಗಾಗಲೇ ಹೆಚ್‌ಎಎಲ್ ಪೊಲೀಸರು, ಮಕ್ಕಳಿಗೆ ಕಿರುಕುಳ ನೀಡಿದ ಪ್ರಕರಣದಲ್ಲಿ ಇಬ್ಬರು ಬಂಧನ ಮಾಡಿ, ತನಿಖೆ ನಡೆಸಿದ್ದಾರೆ.

ಏನಿದು ಕೇಸ್‌?
ಬೆಂಗಳೂರಿನ ಬ್ರೂಕ್ ಫೀಲ್ಡ್‌ನಲ್ಲಿರುವ ಬೇಬಿ ಕೇರ್ ಸೆಂಟರ್‌ನಲ್ಲಿ ಮಕ್ಕಳಿಗೆ ದೈಹಿಕವಾಗಿ ಚಿತ್ರಹಿಂಸೆ ನೀಡಿ ವಿಕೃತಿ ಮೆರೆದಿದ್ದರು. ಇದರ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿತ್ತು. ಇದನ್ನು ತಿಳಿದ ಮಕ್ಕಳ ಸಹಾಯವಾಣಿ ಅಧಿಕಾರಿಗಳು ಮಕ್ಕಳ ಮೇಲೆ ಆಯಾಗಳು ಕ್ರೌರ್ಯ ಮೆರೆದಿರುವ ವೀಡಿಯೋ ಪರಿಶೀಲನೆ ಮಾಡಿ, ಐವರು ಆಯಾಗಳ ಮೇಲೆ ಹೆಚ್‌ಎಎಲ್ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರು.

Dailyhunt
Disclaimer: This content has not been generated, created or edited by Dailyhunt. Publisher: Karnatakanewsbeat