Dailyhunt

ಬೆಂಗಳೂರಿನ ಆಸ್ತಿ ತೆರಿಗೆದಾರರಿಗೆ ರಾಜ್ಯ ಸರ್ಕಾರದಿಂದ ಭರ್ಜರಿ ಸಿಹಿ ಸುದ್ದಿ!

ಬೆಂಗಳೂರು : ಸಿಲಿಕಾನ್‌ ಸಿಟಿ ಬೆಂಗಳೂರಿನ ಆಸ್ತಿ ತೆರಿಗೆದಾರರಿಗೆ ರಾಜ್ಯ ಸರ್ಕಾರ ಭರ್ಜರಿ ಸಿಹಿ ಸುದ್ದಿ ನೀಡಿದೆ. ಆಸ್ತಿ ತೆರಿಗೆ ಪಾವತಿಯ ಮೇಲೆ ನೀಡಲಾಗುತ್ತಿದ್ದ ಶೇ 5ರಷ್ಟು ರಿಯಾಯಿತಿಅವಧಿಯನ್ನು 2026ರ ಮೇ 31ರವರೆಗೆ ವಿಸ್ತರಿಸಲು ಸರ್ಕಾರ ನಿರ್ಧರಿಸಿದೆ.

ಏಪ್ರಿಲ್ 30ರವರೆಗೆ ಆಸ್ತಿ ತೆರಿಗೆ ಪಾವತಿಗೆ ಶೇಕಡಾ 5ರಷ್ಟು ರಿಯಾಯಿತಿ ನೀಡಲಾಗಿತ್ತು. ಆದರೆ, ಸಾರ್ವಜನಿಕರು ಹಾಗೂ ಕಾಂಗ್ರೆಸ್‌ನ ಮಾಜಿ ಪಾಲಿಕೆ ಸದಸ್ಯರಾದ ಅಬ್ದುಲ್ ವಾಜೀದ್ ಮತ್ತು ಶಿವರಾಜ್ ಅವರು ರಿಯಾಯಿತಿ ಅವಧಿ ವಿಸ್ತರಿಸುವಂತೆ GBA ಮುಖ್ಯ ಆಯುಕ್ತರಿಗೆ ಮನವಿ ಸಲ್ಲಿಸಿದ್ದರು.

ಈ ಮನವಿಯನ್ನು ಪರಿಗಣಿಸಿದ GBA, ಕಟ್ಟಡ ಮಾಲೀಕರ ಅನುಕೂಲಕ್ಕಾಗಿ ರಿಯಾಯಿತಿ ಅವಧಿಯನ್ನು ಮೇ 31ರವರೆಗೆ ವಿಸ್ತರಿಸಿ ಆದೇಶ ಹೊರಡಿಸಿದೆ. ಇದರಿಂದ ತೆರಿಗೆದಾರರು ಇನ್ನೂ ಒಂದು ತಿಂಗಳ ಕಾಲ ಶೇಕಡಾ 5ರಷ್ಟು ವಿನಾಯಿತಿ ಪಡೆದು ಮಾಲೀಕರು ಆಸ್ತಿ ತೆರಿಗೆ ಪಾವತಿಸಬಹುದಾಗಿದೆ. ನಗರದ ಸಾವಿರಾರು ಆಸ್ತಿ ಮಾಲೀಕರಿಗೆ ಇದು ನಿಜಕ್ಕೂ ಹಿತಕರ ನಿರ್ಧಾರವಾಗಿದೆ.

Dailyhunt
Disclaimer: This content has not been generated, created or edited by Dailyhunt. Publisher: Karnatakanewsbeat