Dailyhunt Logo
  • Light mode
    Follow system
    Dark mode
    • Play Story
    • App Story

ಬೆಂಗಳೂರಿನ DRDO ಸಂಸ್ಥೆಯಲ್ಲಿ 1 ಹುದ್ದೆಯ ನೇಮಕಾತಿ : 37 ಸಾವಿರ ರೂ. ಸಂಬಳ

Karnatakanewsbeat 3 weeks ago

ಬೆಂಗಳೂರು : ಕೇಂದ್ರ ಸರ್ಕಾರಿ ಸ್ವಾಮ್ಯದ ರಕ್ಷಣಾ ಸಂಶೋಧನೆ ಹಾಗೂ ಅಭಿವೃದ್ಧಿ ಸಂಸ್ಥೆಯಲ್ಲಿ (DRDO CAIR Recruitment 2026) ಖಾಲಿ ಇರುವ 1 ಹುದ್ದೆಯ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಲಾಗಿದೆ. 1 ಜೂನಿಯರ್ ರಿಸರ್ಚ್ ಫೆಲೋ ಹುದ್ದೆಯನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದೆ.

ಅರ್ಹ ಹಾಗೂ ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಇ-ಮೇಲ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಬೆಂಗಳೂರಿನಲ್ಲಿಯೇ ಉದ್ಯೋಗ ಹುಡುಕುತ್ತಿರುವವರಿಗೆ ಇದು ಒಳ್ಳೆಯ ಅವಕಾಶವಾಗಿದೆ.

ಹುದ್ದೆಗಳ ವಿವರ

ನೇಮಕಾತಿ ಸಂಸ್ಥೆ: ರಕ್ಷಣಾ ಸಂಶೋಧನೆ ಹಾಗೂ ಅಭಿವೃದ್ಧಿ ಸಂಸ್ಥೆ (DRDO CAIR)
ಹುದ್ದೆ ಹೆಸರು: ಜೂನಿಯರ್ ರಿಸರ್ಚ್ ಫೆಲೋ
ಒಟ್ಟು ಹುದ್ದೆ: 1
ಉದ್ಯೋಗ ಸ್ಥಳ: ಬೆಂಗಳೂರು
ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ: ಜೂನ್ 26

ಡಿಆರ್ ಡಿಒದ ಸೆಂಟರ್ ಫಾರ್ ಆರ್ಟಿಫಿಶಿಯಲ್ ಇಂಟೆಲಿಜೆನ್ಸ್ ಹಾಗೂ ರೋಬೊಟಿಕ್ಸ್ ಸಂಸ್ಥೆಯಲ್ಲಿ (DRDO CAIR) ನೇಮಕಾತಿ ನಡೆಯುತ್ತಿದೆ. ಅರ್ಜಿ ಸಲ್ಲಿಸಲು ಬಯಸುವವರು ಮಾನ್ಯತೆ ಪಡೆದ ಯಾವುದೇ ವಿಶ್ವವಿದ್ಯಾಲಯದಲ್ಲಿ ಬಿ.ಇ, ಬಿ.ಟೆಕ್, ಎಂ.ಇ, ಎಂ.ಟೆಕ್ ಮುಗಿಸಿದವರು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸುವವರಿಗೆ ಗರಿಷ್ಠ 28 ವರ್ಷಗಳ ವಯೋಮಿತಿಯನ್ನು ನಿಗದಿಪಡಿಸಲಾಗಿದೆ. ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷಗಳ ವಯೋಮಿತಿ ಸಡಿಲಿಕೆ ಇದೆ. ಎಸ್ಸಿ, ಎಸ್ಟಿ, ವಿಶೇಷ ಚೇತನರಿಗೆ 5 ವರ್ಷಗಳ ಸಡಿಲಿಕೆ ಅನ್ವಯವಾಗುತ್ತದೆ.

ಅರ್ಜಿ ಸಲ್ಲಿಸಲು ಬಯಸುವವರು ಮೊದಲಿಗೆ drdo.gov.in ವೆಬ್ ಸೈಟ್ ಗೆ ಭೇಟಿ ನೀಡಬೇಕು. ಅರ್ಜಿಯ ಪ್ರಿಂಟೌಟ್ ತೆಗೆದುಕೊಂಡು ಭರ್ತಿ ಮಾಡಬೇಕು. ಭರ್ತಿ ಮಾಡಿದ ಅರ್ಜಿಯನ್ನು ಅಗತ್ಯ ದಾಖಲೆಗಳೊಂದಿಗೆ ad-hrt.cair@gov.in ಗೆ ಮೇಲ್ ಮಾಡಬೇಕು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ. ಅರ್ಜಿಗಳನ್ನು ಪರಿಶೀಲನೆ ಮಾಡಿದ ಬಳಿಕ ಸಂದರ್ಶನಕ್ಕೆ ಆಹ್ವಾನಿಸಲಾಗುತ್ತದೆ.

ಸಂದರ್ಶನ ನಡೆಯುವ ಸ್ಥಳ
Centre for Artificial Intelligence & Robotics (CAIR), DRDO Complex, C.V. Raman Nagar, Bengaluru - 560093

ಇದನ್ನೂ ಓದಿ : ಲೈಬ್ರರಿ ಸೈನ್ಸ್ ಮುಗಿಸಿದವರಿಗೆ ಶುಭ ಸಮಾಚಾರ : IIMBಯಲ್ಲಿ 4 ಲೈಬ್ರರಿ ಟ್ರೈನಿ ಹುದ್ದೆಗಳ ನೇಮಕಾತಿ!

Dailyhunt
Disclaimer: This content has not been generated, created or edited by Dailyhunt. Publisher: Karnatakanewsbeat