Dailyhunt Logo
  • Light mode
    Follow system
    Dark mode
    • Play Story
    • App Story

ಬೀದರ್‌ನಲ್ಲಿ ಭೀಕರ ಅಪಘಾತ.. ಮೂವರು ಯುವಕರು ದುರ್ಮರಣ!

Karnatakanewsbeat 3 weeks ago

ಬೀದರ್ : ಭೀಕರ ರಸ್ತೆ ಅಪಘಾತದಲ್ಲಿ ಮೂವರು ಯುವಕರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಬೀದರ್ ಜಿಲ್ಲೆಯ ಭಾಲ್ಕಿ ತಾಲೂಕಿನಲ್ಲಿ ಬುಧವಾರ (ಏಪ್ರಿಲ್ 29) ತಡರಾತ್ರಿ ಸಂಭವಿಸಿದೆ.

ಬೈಕ್ ಮತ್ತು ಕಾರಿನ ನಡುವೆ ನಡೆದ ಈ ಮುಖಾಮುಖಿ ಡಿಕ್ಕಿ ಬೆಚ್ಚಿಬೀಳಿಸುವಂತಿದೆ. ಭಾಲ್ಕಿ ತಾಲ್ಲೂಕಿನ ಕಳಸದಾಳ ವ್ಯಾಪ್ತಿಯ ಮಹಾತ್ಮಾ ಗಾಂಧಿ ಸಕ್ಕರೆ ಕಾರ್ಖಾನೆಯ ಬಳಿ ದುರ್ಘಟನೆ ಸಂಭವಿಸಿದೆ.

ಮೃತರನ್ನು ಕಳಸದಾಳ ಗ್ರಾಮದ ವಿಠ್ಠಲ ಪಾಂಚಾಳ (25), ಮಹೇಶ್ ಬಿರಾದಾರ (25) ಮತ್ತು ಕಾಕನಾಳ ಗ್ರಾಮದ ರಾಜೇಂದ್ರ ಪಾಂಚಾಳ (28) ಎಂದು ಗುರುತಿಸಲಾಗಿದೆ.

ವೇಗವಾಗಿ ಬಂದ ಕಾರು ಮತ್ತು ಬೈಕ್ ನಡುವೆ ಡಿಕ್ಕಿ ಸಂಭವಿಸಿದ್ದು, ಡಿಕ್ಕಿಯ ತೀವ್ರತೆಗೆ ಬೈಕ್ ಸವಾರರು ರಸ್ತೆಗೆ ಎಸೆಯಲ್ಪಟ್ಟು ಪ್ರಾಣ ಕಳೆದುಕೊಂಡಿದ್ದಾರೆ. ಘಟನಾ ಸ್ಥಳಕ್ಕೆ ಭಾಲ್ಕಿ ಗ್ರಾಮೀಣ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.

Dailyhunt
Disclaimer: This content has not been generated, created or edited by Dailyhunt. Publisher: Karnatakanewsbeat