Dailyhunt Logo
  • Light mode
    Follow system
    Dark mode
    • Play Story
    • App Story
ಬ್ಯಾಂಕ್ ಆಫ್ ಇಂಡಿಯಾದಲ್ಲಿ 779 ಹುದ್ದೆಗಳ ನೇಮಕಾತಿ : 1.2 ಲಕ್ಷ ರೂ. ಸಂಬಳ

ಬ್ಯಾಂಕ್ ಆಫ್ ಇಂಡಿಯಾದಲ್ಲಿ 779 ಹುದ್ದೆಗಳ ನೇಮಕಾತಿ : 1.2 ಲಕ್ಷ ರೂ. ಸಂಬಳ

Karnatakanewsbeat 2 weeks ago

ಬೆಂಗಳೂರು : ಬ್ಯಾಂಕಿಂಗ್ ಕ್ಷೇತ್ರದಲ್ಲಿ ಭವಿಷ್ಯ ರೂಪಿಸಿಕೊಳ್ಳಬೇಕು ಎಂದು ಬಯಸುತ್ತಿರುವವರಿಗೆ ಒಳ್ಳೆಯ ಅವಕಾಶ ಲಭಿಸಿದೆ. ಕೇಂದ್ರ ಸರ್ಕಾರಿ ಸ್ವಾಮ್ಯದ ಬ್ಯಾಂಕ್ ಆಫ್ ಇಂಡಿಯಾದಲ್ಲಿ ಖಾಲಿ ಇರುವ 779 ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಲಾಗಿದೆ. ಒಟ್ಟು 779 ಕ್ರೆಡಿಟ್ ಆಫೀಸರ್ ಹುದ್ದೆಗಳ ನೇಮಕಾತಿಗಾಗಿ ( Bank Of India Recruitment 2026) ಅಧಿಸೂಚನೆ ಹೊರಡಿಸಲಾಗಿದೆ.

ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಲು ಅವಕಾಶ ನೀಡಲಾಗಿದೆ. ನೇಮಕಾತಿಗೆ ಸಂಬಂಧಿಸಿದ ಹೆಚ್ಚಿನ ಮಾಹಿತಿ ಇಲ್ಲಿದೆ.

ಹುದ್ದೆಗಳ ವಿವರ
ನೇಮಕಾತಿ ಸಂಸ್ಥೆ: ಬ್ಯಾಂಕ್ ಆಫ್ ಇಂಡಿಯಾ
ಹುದ್ದೆಗಳ ಹೆಸರು: ಕ್ರೆಡಿಟ್ ಆಫೀಸರ್
ಒಟ್ಟು ಹುದ್ದೆಗಳು: 779
ಅರ್ಜಿ ಸಲ್ಲಿಕೆ ವಿಧಾನ: ಆನ್ ಲೈನ್
ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ: ಜುಲೈ 20

ದೇಶದ ಯಾವುದೇ ಭಾಗದಲ್ಲಿ ಕೆಲಸ ಮಾಡಲು ಇಚ್ಛಿಸುವವರು ಅರ್ಜಿ ಸಲ್ಲಿಸಬಹುದು. ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಅಥವಾ ಮಂಡಳಿಗಳಿಂದ ಹಣಕಾಸು, ಬ್ಯಾಂಕಿಂಗ್ ಕ್ಷೇತ್ರದಲ್ಲಿ ಸ್ನಾತಕೋತ್ತರ ಪದವಿ ಕೋರ್ಸ್ ಮುಗಿಸಿದವರು ಅರ್ಜಿ ಸಲ್ಲಿಸಬಹುದಾಗಿದೆ. ನೇಮಕಾತಿ ಹೊಂದಿದವರಿಗೆ ಮಾಸಿಕ 1.2 ಲಕ್ಷ ರೂಪಾಯಿವರೆಗೆ ಸಂಬಳ ನೀಡಲಾಗುತ್ತದೆ. ಗರಿಷ್ಠ 45 ವರ್ಷದೊಳಗಿನವರು ಅರ್ಜಿ ಸಲ್ಲಿಸಬಹುದಾಗಿದೆ.

ಜನರಲ್ ಹಾಗೂ ಒಬಿಸಿಯವರಿಗೆ 850 ರೂಪಾಯಿ ಅರ್ಜಿ ಶುಲ್ಕವಿದೆ. ಉಳಿದವರಿಗೆ ಯಾವುದೇ ಶುಲ್ಕ ಇರುವುದಿಲ್ಲ. ಎಸ್ಸಿ, ಎಸ್ಟಿ, ಪಿಡಬ್ಲ್ಯೂಬಿಡಿಯವರಿಗೆ 175 ರೂ. ಅರ್ಜಿ ಶುಲ್ಕವಿದೆ. ಎಸ್ಸಿ, ಎಸ್ಟಿಯವರಿಗೆ 5 ವರ್ಷ ಮತ್ತು ಜನರಲ್ ಹಾಗೂ ಒಬಿಸಿಯವರಿಗೆ 3 ವರ್ಷಗಳ ವಯೋಮಿತಿ ಸಡಿಲಿಕೆ ಇದೆ. ಮೊದಲಿಗೆ ಅರ್ಜಿಗಳನ್ನು ಪರಿಶೀಲನೆ ಮಾಡಲಾಗುತ್ತದೆ. ನಂತರ ಆನ್ ಲೈನ್ ಪರೀಕ್ಷೆ ಹಾಗೂ ಸಂದರ್ಶನದ ಮೂಲಕ ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ಅರ್ಜಿ ಸಲ್ಲಿಸುವವರು www.bankofindia.bank.in. ವೆಬ್ ಸೈಟ್ ಗೆ ಭೇಟಿ ನೀಡಬಹುದು.

Dailyhunt
Disclaimer: This content has not been generated, created or edited by Dailyhunt. Publisher: Karnatakanewsbeat