Dailyhunt Logo
  • Light mode
    Follow system
    Dark mode
    • Play Story
    • App Story

ದೇಶದ ಸಶಸ್ತ್ರ ಸೀಮಾ ಬಲದಲ್ಲಿ 404 ಹುದ್ದೆಗಳ ನೇಮಕಾತಿ : ಕೂಡಲೇ ಅರ್ಜಿ ಸಲ್ಲಿಸಿ

ಬೆಂಗಳೂರು : ನೀವು ಎಸ್ಸೆಸ್ಸೆಲ್ಸಿ ಪಾಸಾಗಿ, ಸರ್ಕಾರ ಉದ್ಯೋಗದ ಹುಡುಕಾಟದಲ್ಲಿದ್ದರೆ ನಿಮಗೊಂದು ಸುವರ್ಣಾವಕಾಶ ದೊರೆತಿದೆ. ದೇಶದ ಪ್ರಮುಖ ಸಶಸ್ತ್ರ ಪಡೆಗಳಲ್ಲಿ ಒಂದಾಗಿರುವ ಸಶಸ್ತ್ರ ಸೀಮಾ ಬಲದಲ್ಲಿ ಖಾಲಿ ಇರುವ 404 ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ (SSB Recruitment 2026) ಹೊರಡಿಸಲಾಗಿದೆ.

ಕಾನ್ ಸ್ಟೇಬಲ್ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದೆ. ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಸ್ಪೋರ್ಟ್ಸ್ ಕೋಟಾದ ಅಡಿಯಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದೆ.

ಹುದ್ದೆಗಳ ಸಂಕ್ಷಿಪ್ತ ವಿವರ

ನೇಮಕಾತಿ ಸಂಸ್ಥೆ: ಸಶಸ್ತ್ರ ಸೀಮಾ ಬಲ (SSB)
ಹುದ್ದೆ ಹೆಸರು: ಕಾನ್ಸ್ ಟೇಬಲ್
ಒಟ್ಟು ಹುದ್ದೆ: 404
ಉದ್ಯೋಗ ಸ್ಥಳ: ದೇಶಾದ್ಯಂತ
ಅರ್ಜಿ ಸಲ್ಲಿಸಲು ಕೊನೆ ದಿನಾಕ: ಜೂನ್ 7

ಮಾನ್ಯತೆ ಪಡೆದ ಯಾವುದೇ ವಿಶ್ವವಿದ್ಯಾಲಯ ಅಥವಾ ಮಂಡಳಿಗಳಲ್ಲಿ ಎಸ್ಸೆಸ್ಸೆಲ್ಸಿ ಮುಗಿಸಿದವರು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಈಜು, ಬಾಕ್ಸಿಂಗ್, ಅಥ್ಲೆಟಿಕ್ಸ್, ಫುಟ್ಬಾಲ್, ಹಾಕಿ, ಕಬಡ್ಡಿ, ವಾಲಿಬಾಲ್, ಕುಸ್ತಿ, ಸೇರಿ ಹಲವು ಕ್ರೀಡೆಗಳಲ್ಲಿ ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಮಟ್ಟದಲ್ಲಿ ದೇಶ ಅಥವಾ ರಾಜ್ಯವನ್ನು ಪ್ರತಿನಿಧಿಸಿರಬೇಕು. ಸೀನಿಯರ್ ಅಥವಾ ಜೂನಿಯರ್ ರಾಷ್ಟ್ರೀಯ ಚಾಂಪಿಯನ್ ಶಿಪ್ ಗಳಲ್ಲಿ ಪದಕ ಗೆದ್ದವರು ಮತ್ತು ಖೇಲೋ ಇಂಡಿಯಾ ಗೇಮ್ಸ್ ಪದಕ ವಿಜೇತರಿಗೂ ಅರ್ಜಿ ಸಲ್ಲಿಸಲು ಅವಕಾಶವಿದೆ ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.

ಅರ್ಜಿ ಸಲ್ಲಿಸುವವರಿಗೆ ಕನಿಷ್ಠ 18ರಿಂದ ಗರಿಷ್ಠ 23 ವರ್ಷಗಳ ವಯೋಮಿತಿಯನ್ನು ನಿಗದಿಪಡಿಸಲಾಗಿದೆ. ಎಸ್ಸಿ, ಎಸ್ಟಿಯವರಿಗೆ 5 ವರ್ಷ ಹಾಗೂ ಒಬಿಸಿಯವರಿಗೆ 3 ವರ್ಷಗಳ ವಯೋಮಿತಿ ಸಡಿಲಿಕೆ ನೀಡಲಾಗಿದೆ. ಇಡಬ್ಲ್ಯೂಎಸ್, ಒಬಿಸಿವಯರಿಗೆ 100 ರೂಪಾಯಿ ಅರ್ಜಿ ಶುಲ್ಕವಿದ್ದರೆ, ಎಸ್ಸಿ, ಎಸ್ಟಿ, ಮಹಿಳಾ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕವಿರುವುದಿಲ್ಲ.

ಲಿಖಿತ ಪರೀಕ್ಷೆ, ದೈಹಿಕ ಸಾಮರ್ಥ್ಯ ಪರೀಕ್ಷೆ ಹಾಗೂ ಸಂದರ್ಶನದ ಮೂಲಕ ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ಅರ್ಜಿ ಸಲ್ಲಿಸುವವರು www.recruitment.ssb.gov.in ವೆಬ್ ಸೈಟ್ ಗೆ ಭೇಟಿ ನೀಡಿ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ನೇಮಕಾತಿ ಹೊಂದಿದವರಿಗೆ ಮಾಸಿಕ 21,700 ಸಾವಿರ ರೂಪಾಯಿಯಿಂದ 69,100 ರೂಪಾಯಿವರೆಗೆ ಸಂಬಳ ನೀಡಲಾಗುತ್ತದೆ.

Dailyhunt
Disclaimer: This content has not been generated, created or edited by Dailyhunt. Publisher: Karnatakanewsbeat