Dailyhunt Logo
  • Light mode
    Follow system
    Dark mode
    • Play Story
    • App Story

ಧಾರವಾಡದಲ್ಲಿ ಬೌದ್ಧ ಸನ್ಯಾಸಿ ಶವವಾಗಿ ಪತ್ತೆ!

Karnatakanewsbeat 3 weeks ago

ಧಾರವಾಡ : ಬೌದ್ಧ ಸನ್ಯಾಸಿಯ ಒಬ್ಬರು ಶವವಾಗಿ ಪತ್ತೆಯಾಗಿರುವ ಘಟನೆ ಧಾರವಾಡದ ಬೈಪಾಸ್ ಬಳಿ ನಡೆದಿದೆ. ಉತ್ತರ ಕನ್ನಡ ಜಿಲ್ಲೆಯ ಮುಂಡಗೋಡು ಪಟ್ಟಣದ ಟಿಬೆಟಿಯನ್ ಮೂಲದ ಥಾಶಿದೊಂಡು(39) ಮೃತ ಬೌದ್ಧ ಸನ್ಯಾಸಿ ಎಂದು ಗುರುತಿಸಲಾಗಿದೆ.

ಮೃತ ಥಾಶಿದೊಂಡು ಮುಖದ ಮೇಲೆ ಗಾಯಗಳಾಗಿದ್ದು, ಹಂತಕರು ಬೇರೆಡೆ ಕೊಲೆಗೈದು ಶವ ತಂದು ಎಸೆದು ಹೋಗಿರುವ ಶಂಕೆ ವ್ಯಕ್ತವಾಗಿದೆ.

ಧಾರವಾಡ ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರೆಸಿದ್ದಾರೆ.

ಇದನ್ನೂ ಓದಿ :ಗಂಗಾವತಿ ಬಿಜೆಪಿ ಮುಖಂಡನ ಹತ್ಯೆ ಕೇಸ್‌ - ಆರು ಅಪರಾಧಿಗಳಿಗೆ ಗಲ್ಲು ಶಿಕ್ಷೆ ವಿಧಿಸಿದ ಕೋರ್ಟ್‌!

ಪತ್ನಿಯನ್ನು ಮಚ್ಚಿನಿಂದ ಕೊಚ್ಚಿ ಕೊಲೆಗೈದ ಪಾಪಿ ಪತಿ!

ಕೌಟುಂಬಿಕ ಕಲಹವೊಂದು ಕೊಲೆಯಲ್ಲಿ ಅಂತ್ಯವಾಗಿರುವ ಭೀಕರ ಘಟನೆ ಮೈಸೂರಿನ ಹಳೆ ಕೆಸರೆ ಗ್ರಾಮದಲ್ಲಿ ನಡೆದಿದೆ. ಕೆಲಸ ಮುಗಿಸಿ ಮನೆಗೆ ತಡವಾಗಿ ಬರುತ್ತಿದ್ದಾಳೆ ಎಂಬ ಅನುಮಾನದ ಹಿನ್ನೆಲೆಯಲ್ಲಿ ಪತಿ ಮಹೇಶ್‌ ಪತ್ನಿ ಪುಷ್ಪ(24) ಅವರನ್ನು ಮಚ್ಚಿನಿಂದ ಕೊಚ್ಚಿ ಕ್ರೂರವಾಗಿ ಹತ್ಯೆ ಮಾಡಿದ್ದಾನೆ. ಮೃತ ಪುಷ್ಪ ಅವರು ಮೈಸೂರಿನ ದೇವರಾಜ ಅರಸು ರಸ್ತೆಯಲ್ಲಿರುವ ಖಾಸಗಿ ಬಟ್ಟೆ ಅಂಗಡಿಯೊಂದರಲ್ಲಿ ಕೆಲಸ ಮಾಡುತ್ತಿದ್ದರು. ಕೆಲಸದ ನಿಮಿತ್ತ ಅವರು ಪ್ರತಿದಿನ ರಾತ್ರಿ ಮನೆಗೆ ತಡವಾಗಿ ಬರುತ್ತಿದ್ದರು. ನಿನ್ನೆ ತಡರಾತ್ರಿಯೂ ಪುಷ್ಪ ಕೆಲಸ ಮುಗಿಸಿ ಮನೆಗೆ ಬಂದಾಗ ದಂಪತಿ ನಡುವೆ ಇದೇ ವಿಚಾರವಾಗಿ ತೀವ್ರ ಜಗಳ ನಡೆದಿದೆ. ಜಗಳ ವಿಕೋಪಕ್ಕೆ ತಿರುಗಿದಾಗ ಆಕ್ರೋಶಗೊಂಡ ಮಹೇಶ್ ಮನೆಯಲ್ಲಿದ್ದ ಮಚ್ಚಿನಿಂದ ಕೊಚ್ಚಿ ಕೊಲೆ ಮಾಡಿದ್ದಾನೆ. ವಿಷಯ ತಿಳಿಯುತ್ತಿದ್ದಂತೆಯೇ ನರಸಿಂಹರಾಜ ಠಾಣೆಯ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದ್ದು, ಆರೋಪಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ.

Dailyhunt
Disclaimer: This content has not been generated, created or edited by Dailyhunt. Publisher: Karnatakanewsbeat