Dailyhunt Logo
  • Light mode
    Follow system
    Dark mode
    • Play Story
    • App Story
ಡಿ ಗ್ಯಾಂಗ್‌ಗೆ ಇಂದು ಬಿಗ್ ಡೇ : ಪ್ರದೋಷ್ ಮಾಫಿ ಸಾಕ್ಷಿ.. ಹೈಕೋರ್ಟ್ ತೀರ್ಪಿನತ್ತ ಎಲ್ಲರ ಚಿತ್ತ!

ಡಿ ಗ್ಯಾಂಗ್‌ಗೆ ಇಂದು ಬಿಗ್ ಡೇ : ಪ್ರದೋಷ್ ಮಾಫಿ ಸಾಕ್ಷಿ.. ಹೈಕೋರ್ಟ್ ತೀರ್ಪಿನತ್ತ ಎಲ್ಲರ ಚಿತ್ತ!

ಬೆಂಗಳೂರು : ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಸೇರಿ ಆರೋಪಿಗಳಿಗೆ ಇಂದು ಮಹತ್ವದ ದಿನವಾಗಿದೆ. ಪ್ರಕರಣದ 14ನೇ ಆರೋಪಿ ಪ್ರದೋಷ್ ಇಂದು ಮಾಫಿ ಸಾಕ್ಷಿಯಾಗಿ ಹೇಳಿಕೆ ನೀಡುವ ಸಾಧ್ಯತೆ ಇದ್ದು, ಇದೇ ವೇಳೆ ಮಾಫಿ ಸಾಕ್ಷಿ ಪ್ರಕ್ರಿಯೆಯನ್ನು ಪ್ರಶ್ನಿಸಿ ದರ್ಶನ್ ಸಲ್ಲಿಸಿರುವ ಅರ್ಜಿಯ ಕುರಿತು ಹೈಕೋರ್ಟ್ ಇಂದು ಆದೇಶ ಪ್ರಕಟಿಸುವ ಸಾಧ್ಯತೆ ಇದೆ.

ನಿನ್ನೆ ವಾದ-ಪ್ರತಿವಾದ ಆಲಿಸಿದ್ದ ಹೈಕೋರ್ಟ್ ಏಕಸದಸ್ಯ ಪೀಠ ಆದೇಶವನ್ನು ಕಾಯ್ದಿರಿಸಿತ್ತು. ಮಾಫಿ ಸಾಕ್ಷಿಯಾಗಿ ಪರಿಗಣಿಸುವ ಮುನ್ನ ಪ್ರೊಬೆಷನ್ ಅಧಿಕಾರಿಯಿಂದ ವರದಿ ಪಡೆಯಬೇಕಿತ್ತು ಎಂಬ ವಿಚಾರ ಸೇರಿದಂತೆ ವಿವಿಧ ಅಂಶಗಳ ಕುರಿತು ನ್ಯಾಯಾಲಯದಲ್ಲಿ ಚರ್ಚೆ ನಡೆದಿದೆ ಎಂದು ತಿಳಿದುಬಂದಿದೆ. ಈ ಪ್ರಕ್ರಿಯೆಗೆ ಸಂಬಂಧಿಸಿದಂತೆ ವಿಚಾರಣಾ ನ್ಯಾಯಾಲಯದ ಆದೇಶವನ್ನು ರದ್ದುಪಡಿಸಿ, ಮಾಫಿ ಸಾಕ್ಷಿಯಾಗಿ ಪರಿಗಣಿಸುವ ಕೋರಿಕೆಯನ್ನು ಪುನಃ ವಿಚಾರಣಾ ನ್ಯಾಯಾಲಯಕ್ಕೆ ಹಿಂದಿರುಗಿಸುವ ಕುರಿತು ಪೀಠ ಮೌಖಿಕವಾಗಿ ಹೇಳಿದೆ ಎನ್ನಲಾಗಿದೆ.

ಹೈಕೋರ್ಟ್ ಇಂದು ಮಾಫಿ ಸಾಕ್ಷಿ ಪ್ರಕ್ರಿಯೆಗೆ ಸಂಬಂಧಿಸಿದ ಆದೇಶವನ್ನು ರದ್ದುಪಡಿಸಿದರೆ, ಪ್ರದೋಷ್ ಅವರ ಹೇಳಿಕೆ ದಾಖಲಾತಿ ಪ್ರಕ್ರಿಯೆ ಮುಂದೂಡಿಕೆಯಾಗುವ ಸಾಧ್ಯತೆ ಇದೆ. ಎರಡು ದಿನಗಳಲ್ಲಿ ಹೊಸದಾಗಿ ಆದೇಶ ನೀಡಿ, ನಂತರ ಮತ್ತೊಂದು ದಿನಾಂಕ ನಿಗದಿಪಡಿಸುವ ಸಾಧ್ಯತೆಯೂ ಇದೆ. ಆದರೆ ದರ್ಶನ್ ಸಲ್ಲಿಸಿರುವ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದರೆ, ಪ್ರದೋಷ್ ಅವರ ಮಾಫಿ ಸಾಕ್ಷಿ ಹೇಳಿಕೆ ಇಂದು ದಾಖಲಾಗುವ ಸಾಧ್ಯತೆ ಇದೆ.

ಪ್ರದೋಷ್ ಅವರು ಇಂದು ಮಧ್ಯಾಹ್ನ 12 ಗಂಟೆಗೆ 59ನೇ ಸಿಸಿಹೆಚ್ ನ್ಯಾಯಾಲಯಕ್ಕೆ ಖುದ್ದು ಹಾಜರಾಗುವ ನಿರೀಕ್ಷೆಯಿದೆ. ಪರಪ್ಪನ ಅಗ್ರಹಾರ ಜೈಲಿನಿಂದ ಜೈಲು ಅಧಿಕಾರಿಗಳ ಭದ್ರತೆಯಲ್ಲಿ ಅವರನ್ನು ನ್ಯಾಯಾಲಯಕ್ಕೆ ಕರೆತರಲಾಗುವುದು. ಪ್ರಕರಣಕ್ಕೆ ಸಂಬಂಧಿಸಿದ ಸಂಪೂರ್ಣ ಮಾಹಿತಿಯನ್ನು ನ್ಯಾಯಾಲಯದ ಮುಂದೆ ಪ್ರದೋಷ್ ಹೇಳುವ ಸಾಧ್ಯತೆ ಇದ್ದು, ಅವರ ಹೇಳಿಕೆ ಪ್ರಕರಣದ ಮುಂದಿನ ತನಿಖೆ ಮತ್ತು ವಿಚಾರಣೆಯ ದೃಷ್ಟಿಯಿಂದ ಮಹತ್ವ ಪಡೆದುಕೊಂಡಿದೆ.

Dailyhunt
Disclaimer: This content has not been generated, created or edited by Dailyhunt. Publisher: Karnatakanewsbeat