Dailyhunt Logo
  • Light mode
    Follow system
    Dark mode
    • Play Story
    • App Story
ಗೃಹಲಕ್ಷ್ಮೀ ಹಣಕ್ಕಾಗಿ ಅಜ್ಜಿಯನ್ನೇ ಕೊಲೆ ಮಾಡಿದ ಮೊಮ್ಮಗ!

ಗೃಹಲಕ್ಷ್ಮೀ ಹಣಕ್ಕಾಗಿ ಅಜ್ಜಿಯನ್ನೇ ಕೊಲೆ ಮಾಡಿದ ಮೊಮ್ಮಗ!

ಬೆಳಗಾವಿ: ಜಿಲ್ಲೆಯ ಹುಕ್ಕೇರಿ ತಾಲೂಕಿನ ಅರಳಿಕಟ್ಟಿ ಗ್ರಾಮದಲ್ಲಿ ಗೃಹಲಕ್ಷ್ಮೀ ಹಣಕ್ಕಾಗಿ ಮೊಮ್ಮಗನೊಬ್ಬ ತನ್ನ ಅಜ್ಜಿಯನ್ನೇ ಕೊಲೆ ಮಾಡಿದ್ದಾನೆ. ನವೆಂಬರ್ 10ರಂದು ನಡೆದಿದ್ದ ಈ ಕೊಲೆ ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ. ಅರಳಿಕಟ್ಟಿಯಿಂದ ಪಾಶ್ಚಾಪುರ ಸಂತೆಗೆ ಹೋಗಿದ್ದ 78 ವರ್ಷದ ಹಮ್ಮವ್ವಾ ಸನದಿ ನಾಪತ್ತೆಯಾಗಿದ್ದರು.

ನವೆಂಬರ್ 15ರಂದು ಹಿಡಕಲ್ ಡ್ಯಾಂ ಹಿನ್ನೀರಿನಲ್ಲಿ ವೃದ್ಧೆಯ ಶವ ಪತ್ತೆಯಾಗಿತ್ತು.

ಅಜ್ಜಿಯ ಗೃಹಲಕ್ಷ್ಮೀ ಹಣಕ್ಕಾಗಿ ಕಿರಿಕ್ ಮಾಡಿದ್ದ ಮೊಮ್ಮಗ ಭೀಮಪ್ಪ ಸನದಿ, ಪಾಶ್ಚಾಪುರಕ್ಕೆ ಕರೆದುಕೊಂಡು ಹೋಗುವ ನೆಪದಲ್ಲಿ ಗವಿ ಸಿದ್ದೇಶ್ವರ ಗುಡ್ಡಕ್ಕೆ ಕರೆದೊಯ್ದು ಉಸಿರುಗಟ್ಟಿಸಿ ಕೊಲೆ ಮಾಡಿದ್ದಾನೆ. ಬಳಿಕ ಸಾಕ್ಷಿ ನಾಶ ಮಾಡಲು ಶವವನ್ನು ಗೋಣಿಚೀಲದಲ್ಲಿ ತುಂಬಿ ಕಲ್ಲು ಕಟ್ಟಿ ಡ್ಯಾಂ ಹಿನ್ನೀರಿನಲ್ಲಿ ಬಿಸಾಡಿದ್ದಾನೆ. ನಂತರ ಏನೂ ತಿಳಿಯದಂತೆ ಅಜ್ಜಿಯ ಹುಡುಕಾಟದಲ್ಲಿ ತೊಡಗಿದ್ದ. ಭೀಮಪ್ಪನ ಕೃತ್ಯ ಗೊತ್ತಿದ್ದರೂ ಸುಮ್ಮನಿದ್ದ ಆತನ ತಂದೆ ರಾಮಪ್ಪನನ್ನೂ ಈ ಕೊಲೆ ಪ್ರಕರಣದಲ್ಲಿ ಆರೋಪಿಯನ್ನಾಗಿ ಮಾಡಲಾಗಿದೆ. ಯಮಕನಮರಡಿ ಪೊಲೀಸರು ಕೊಲೆ ರಹಸ್ಯವನ್ನು ಬಯಲಿಗೆಳೆದಿದ್ದು, ತಂದೆ ಮತ್ತು ಮಗ ಇಬ್ಬರನ್ನೂ ಬಂಧಿಸಿದ್ದಾರೆ.

Dailyhunt
Disclaimer: This content has not been generated, created or edited by Dailyhunt. Publisher: Karnatakanewsbeat