Dailyhunt Logo
  • Light mode
    Follow system
    Dark mode
    • Play Story
    • App Story
ಹೆಲ್ಮೆಟ್‌ನಿಂದ ಹೊಡೆದು ಪತ್ನಿಯನ್ನು ಭೀಕರವಾಗಿ ಕೊಲೆಗೈದ ಪತಿ!

ಹೆಲ್ಮೆಟ್‌ನಿಂದ ಹೊಡೆದು ಪತ್ನಿಯನ್ನು ಭೀಕರವಾಗಿ ಕೊಲೆಗೈದ ಪತಿ!

Karnatakanewsbeat 2 weeks ago

ಹುಬ್ಬಳ್ಳಿ : ಗಂಡನೊಬ್ಬ ಹೆಲ್ಮೆಟ್‌ನಿಂದ ಹಲ್ಲೆ ನಡೆಸಿ ಪತ್ನಿಯನ್ನೇ ಬೀಕರವಾಗಿ ಹತ್ಯೆ ಮಾಡಿರುವ ಘಟನೆ ಹುಬ್ಬಳ್ಳಿಯ ತಾರಿಹಾಳ ಗ್ರಾಮದಲ್ಲಿ ನಡೆದಿದೆ.

ಕೊಲೆಯಾದ ಯುವತಿಯನ್ನು 19 ವರ್ಷದ ನಾಗರತ್ನ ಹಳೆಮನಿ ಎಂದು ಗುರುತಿಸಲಾಗಿದೆ. ನಾಗರತ್ನ ಅವರು ನವಲಗುಂದ ತಾಲೂಕಿನ ಇಬ್ರಾಹಿಂಪುರ ಗ್ರಾಮದವರಾಗಿದ್ದು, ಕಳೆದ ಫೆಬ್ರವರಿಯಲ್ಲಷ್ಟೇ ಶಿವರಾಜ್ ಜೊತೆ ವಿವಾಹವಾಗಿದ್ದರು.

ಬೆಳಿಗ್ಗೆ ಗಂಡ-ಹೆಂಡತಿ ನಡುವೆ ಆರಂಭವಾದ ಮಾತಿನ ಚಕಮಕಿ ಕ್ಷಣಾರ್ಧದಲ್ಲೇ ತೀವ್ರ ಸ್ವರೂಪ ಪಡೆದುಕೊಂಡಿದೆ. ಜಗಳ ವಿಕೋಪಕ್ಕೆ ತಿರುಗಿದ ವೇಳೆ ಶಿವರಾಜ್ ಹೆಲ್ಮೆಟ್‌ನಿಂದ ಪತ್ನಿಯ ಮೇಲೆ ಹಲ್ಲೆ ನಡೆಸಿದ್ದಾನೆ ಎನ್ನಲಾಗಿದೆ. ತಲೆಗೆ ಗಂಭೀರ ಗಾಯಗಳಾಗಿದ್ದ ನಾಗರತ್ನ ಸ್ಥಳದಲ್ಲೇ ಮೃತಪಟ್ಟಿರುವ ಮಾಹಿತಿ ಲಭ್ಯವಾಗಿದೆ.

ಘಟನಾ ಸ್ಥಳಕ್ಕೆ ಹುಬ್ಬಳ್ಳಿ ಗ್ರಾಮೀಣ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದ್ದು, ಪ್ರಕರಣ ದಾಖಲಿಸಿ ತನಿಖೆ ಆರಂಭಿಸಿದ್ದಾರೆ. ದಂಪತಿ ನಡುವೆ ಜಗಳಕ್ಕೆ ನಿಖರ ಕಾರಣವೇನು ಹಾಗೂ ಕೊಲೆಗೆ ಕಾರಣವಾದ ಹಿನ್ನೆಲೆ ಏನು ಎಂಬುದನ್ನು ಪೊಲೀಸರು ತನಿಖೆಯ ಮೂಲಕ ಪತ್ತೆಹಚ್ಚುತ್ತಿದ್ದಾರೆ.

Dailyhunt
Disclaimer: This content has not been generated, created or edited by Dailyhunt. Publisher: Karnatakanewsbeat