Dailyhunt Logo
  • Light mode
    Follow system
    Dark mode
    • Play Story
    • App Story

ಕರ್ನಾಟಕ ಹೈಕೋರ್ಟ್‌ನಲ್ಲಿ ವಾಚ್ ಮನ್, ಪ್ಯೂನ್ ಹುದ್ದೆಗಳ ನೇಮಕಾತಿ : 69 ಸಾವಿರ ರೂ. ಸಂಬಳ

Karnatakanewsbeat 1 month ago

ಬೆಂಗಳೂರು : ನೀವು ಎಸ್ಸೆಸ್ಸೆಲ್ಸಿ ಮುಗಿಸಿ ಸರ್ಕಾರದ ಉದ್ಯೋಗಕ್ಕಾಗಿ ಪ್ರಯತ್ನಿಸುತ್ತಿದ್ದರೆ, ನಿಮಗೊಂದು ಸುವರ್ಣಾವಕಾಶ ಇಲ್ಲಿದೆ. ಕರ್ನಾಟಕ ಹೈಕೋರ್ಟ್‌ನಲ್ಲಿ (Karnataka High Court Recruitment 2026) ಖಾಲಿ ಇರುವ 101 ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಲಾಗಿದೆ.

101 ಪ್ಯೂನ್, ವಾಚ್ ಮನ್, ಸ್ವೀಪರ್ ಸೇರಿ ಹಲವು ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದೆ. ಅರ್ಹ ಹಾಗೂ ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.

ಹುದ್ದೆಗಳ ಸಂಕ್ಷಿಪ್ತ ವಿವರ

ನೇಮಕಾತಿ ಸಂಸ್ಥೆ: ಕರ್ನಾಟಕ ಹೈಕೋರ್ಟ್
ಹುದ್ದೆ ಹೆಸರು: ಪ್ಯೂನ್, ವಾಚ್ ಮನ್, ಸ್ವೀಪರ್ ಇತ್ಯಾದಿ
ಒಟ್ಟು ಹುದ್ದೆ: 101
ಉದ್ಯೋಗ ಸ್ಥಳ: ಬೆಂಗಳೂರು
ಅರ್ಜಿ ಸಲ್ಲಿಕೆ ವಿಧಾನ: ಆನ್ ಲೈನ್
ಅರ್ಜಿ ಸಲ್ಲಿಸಲು ಕೊನೆಯ ದಿನ: ಮೇ 21

93 ಪ್ಯೂನ್, ವಾಚ್ ಮನ್, ಸ್ವೀಪರ್, 5 ಲಿಫ್ಟ್ ಅಟೆಂಡರ್, ಅಸಿಸ್ಟಂಟ್ ಬೈಂಡರ್, ಟೈಲರ್ ಹಾಗೂ ಧೋಬಿ ತಲಾ 1 ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದೆ. ಎಸ್ಸೆಸ್ಸೆಲ್ಸಿ ಪಾಸಾದವರು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸುವವರಿಗೆ ಕನಿಷ್ಠ 18ರಿಂದ 40 ವರ್ಷಗಳ ವಯೋಮಿತಿಯನ್ನು ನಿಗದಿಪಡಿಸಲಾಗಿದೆ. ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಹಾಗೂ ಸಂದರ್ಶನದ ಮೂಲಕ ನೇಮಕಾತಿ ಮಾಡಿಕೊಳ್ಳಲಾಗುತ್ತದೆ.

ನೇಮಕಾತಿ ಹೊಂದಿದವರಿಗೆ ಆಯಾ ಹುದ್ದೆಗಳಿಗೆ ಅನುಗುಣವಾಗಿ ಮಾಸಿಕ 21,700 - 69,100 ರೂಪಾಯಿವರೆಗೆ ಸಂಬಳ ನೀಡಲಾಗುತ್ತದೆ. ಎಸ್ಸಿ, ಎಸ್ಟಿ, ಕೆಟಗರಿ 1 ಅಭ್ಯರ್ಥಿಗಳಿಗೆ 5 ವರ್ಷಗಳ ವಯೋಮಿತಿ ಸಡಿಲಿಕೆ ಇದೆ. ಒಬಿಸಿಯವರಿಗೆ 3 ವರ್ಷಗಳ ಸಡಿಲಿಕೆ ಅನ್ವಯವಾಗುತ್ತದೆ. ಎಸ್ಸಿ, ಎಸ್ಟಿ, ಕೆಟಗರಿ 1, ವಿಶೇಷ ಚೇತನರಿಗೆ 100 ರೂಪಾಯಿ ಅರ್ಜಿ ಶುಲ್ಕವಿದ್ದರೆ, ಉಳಿದವರಿಗೆ 200 ರೂಪಾಯಿ ಶುಲ್ಕವಿದೆ.

ಅರ್ಜಿ ಸಲ್ಲಿಸುವುದು ಹೇಗೆ?

ಮೊದಲಿಗೆ ಅಧಿಕೃತ ವೆಬ್ ಸೈಟ್ ಆಗಿರುವ judiciary.karnataka.gov.in ಗೆ ಭೇಟಿ ನೀಡಬೇಕು
ನಿಮಗೆ ಬೇಕಾದ ನೇಮಕಾತಿಯ ಅಧಿಸೂಚನೆಯನ್ನು ಓದಬೇಕು
ಆನ್ ಲೈನ್ ಅರ್ಜಿ ನಮೂನೆಯ ಲಿಂಕ್ ತೆರೆಯಬೇಕು.
ಅರ್ಜಿಯನ್ನು ಯಾವುದೇ ತಪ್ಪುಗಳಿಲ್ಲದ ರೀತಿ ಭರ್ತಿ ಮಾಡಬೇಕು
ಭರ್ತಿ ಮಾಡಿದ ಅರ್ಜಿಯನ್ನು ಅಗತ್ಯ ದಾಖಲೆಗಳೊಂದಿಗೆ ಸಲ್ಲಿಸಬೇಕು
ಫ್ಯೂಚರ್ ರೆಫರೆನ್ಸಿಗಾಗಿ ಅರ್ಜಿ ನಮೂನೆಯ ಪ್ರಿಂಟೌಟ್ ತೆಗೆದಿಟ್ಟುಕೊಳ್ಳಬೇಕು

Dailyhunt
Disclaimer: This content has not been generated, created or edited by Dailyhunt. Publisher: Karnatakanewsbeat