Dailyhunt

ಕೇಂದ್ರ ಸರ್ಕಾರದ HLL Lifecare ಸಂಸ್ಥೆಯಲ್ಲಿ ನೇಮಕಾತಿ : ಹೀಗೆ ಅರ್ಜಿ ಸಲ್ಲಿಸಿ

ಬೆಂಗಳೂರು : ಕೇಂದ್ರ ಸರ್ಕಾರದ ಸಂಸ್ಥೆಯಲ್ಲಿ ಕೆಲಸ ಮಾಡಬೇಕು, ಅದರಲ್ಲೂ ಕರ್ನಾಟಕದ ಬೆಳಗಾವಿಯಲ್ಲಿ ಉದ್ಯೋಗ ಪಡೆಯಬೇಕು ಎಂದು ಬಯಸುವವರಿಗೆ ಗುಡ್ ನ್ಯೂಸ್ ಇದೆ. ಎಚ್ ಎಲ್ ಎಲ್ ಲೈಫ್ ಲಿಮಿಟೆಡ್ ಕಂಪನಿಯಲ್ಲಿ (HLL Lifecare Recruitment 2026) ಖಾಲಿ ಇರುವ ಡ್ರೈವರ್ ಹುದ್ದೆಯ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಲಾಗಿದೆ.

ಅರ್ಹ ಹಾಗೂ ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಆಫ್ ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.

ಹುದ್ದೆಗಳ ಸಂಕ್ಷಿಪ್ತ ವಿವರ

ನೇಮಕಾತಿ ಸಂಸ್ಥೆ: HLL Lifecare ಲಿಮಿಟೆಡ್
ಒಟ್ಟು ಹುದ್ದೆಗಳು: 01
ಅರ್ಜಿ ಸಲ್ಲಿಕೆ ಮಾದರಿ: ಆಫ್ ಲೈನ್
ಉದ್ಯೋಗ ಸ್ಥಳ: ಬೆಳಗಾವಿ
ಹುದ್ದೆಗಳ ಹೆಸರು: ಡ್ರೈವರ್
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಮೇ 6

ವಿದ್ಯಾರ್ಹತೆ ಏನು?

ಮಾನ್ಯತೆ ಪಡೆದ ವಿವಿ ಅಥವಾ ಮಂಡಳಿಗಳಲ್ಲಿ ಎಸ್ಸೆಸ್ಸೆಲ್ಸಿ ಕೋರ್ಸ್ ಮುಗಿಸಿದವರು ಅರ್ಜಿ ಸಲ್ಲಿಸಬಹುದು. ಹಾಗೆಯೇ, ಅಭ್ಯರ್ಥಿಗಳು ಎಲ್‌ಎಂವಿ ಡ್ರೈವಿಂಗ್ ಲೈಸೆನ್ಸ್ ಹೊಂದಿರಬೇಕು ಎಂದು ತಿಳಿಸಲಾಗಿದೆ. ಅರ್ಜಿ ಸಲ್ಲಿಸುವವರ ಗರಿಷ್ಠ ವಯಸ್ಸು 50 ವರ್ಷ ಎಂದು ತಿಳಿಸಲಾಗಿದೆ. ಅರ್ಜಿ ಸಲ್ಲಿಸುವವರಿಗೆ ಯಾವುದೇ ಅರ್ಜಿ ಶುಲ್ಕವನ್ನು ನಿಗದಿಪಡಿಸಿಲ್ಲ. ನೇಮಕಾತಿ ಹೊಂದಿದವರಿಗೆ ಮಾಸಿಕ 13,500 ಸಾವಿರ ರೂಪಾಯಿ ಸಂಬಳ ನೀಡಲಾಗುತ್ತದೆ. ಸ್ಕಿಲ್ ಟೆಸ್ಟ್ ಹಾಗೂ ಸಂದರ್ಶನದ ಮೂಲಕ ನೇಮಕಾತಿ ಮಾಡಿಕೊಳ್ಳಲಾಗುತ್ತದೆ.

ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಮೊದಲಿಗೆ lifecarehll.com ವೆಬ್ ಸೈಟ್ ಗೆ ಭೇಟಿ ನೀಡಬೇಕು. ಅಧಿಸೂಚನೆಯನ್ನು ಓದಿಕೊಂಡು ಅಗತ್ಯ ದಾಖಲೆಗಳನ್ನು ರೆಡಿ ಮಾಡಿಟ್ಟುಕೊಳ್ಳಬೇಕು. ಅರ್ಜಿ ನಮೂನೆಯ ಪ್ರಿಂಟ್ ಔಟ್ ತೆಗೆದುಕೊಂಡು ಭರ್ತಿ ಮಾಡಬೇಕು. ಅಗತ್ಯ ದಾಖಲೆಗಳೊಂದಿಗೆ ಭರ್ತಿ ಮಾಡಿದ ಅರ್ಜಿಯನ್ನು ನಿಗದಿತ ದಿನಾಂಕದೊಳಗೆ ಈ ಕೆಳಗಿನ ವಿಳಾಸಕ್ಕೆ ಕಳುಹಿಸಬೇಕು.

ಅರ್ಜಿ ಸಲ್ಲಿಸಬೇಕಾದ ವಿಳಾಸ
General Manager Operations & Unit Chief, Hll Lifecare Limited, Kanagala - 591225

ಇದನ್ನೂ ಓದಿ : ಅಗ್ನಿಶಾಮಕ ದಳದಲ್ಲಿ 1,828 ಹುದ್ದೆಗಳ ನೇಮಕಾತಿ : 83 ಸಾವಿರ ರೂ.ವರೆಗೆ ಸ್ಯಾಲರಿ

Dailyhunt
Disclaimer: This content has not been generated, created or edited by Dailyhunt. Publisher: Karnatakanewsbeat