Dailyhunt Logo
  • Light mode
    Follow system
    Dark mode
    • Play Story
    • App Story
ಕೇಂದ್ರ ಸರ್ಕಾರದ HPCL ಸಂಸ್ಥೆಯಲ್ಲಿ 116 ಹುದ್ದೆಗಳ ನೇಮಕಾತಿ : 2.8 ಲಕ್ಷ ರೂ. ಸ್ಯಾಲರಿ

ಕೇಂದ್ರ ಸರ್ಕಾರದ HPCL ಸಂಸ್ಥೆಯಲ್ಲಿ 116 ಹುದ್ದೆಗಳ ನೇಮಕಾತಿ : 2.8 ಲಕ್ಷ ರೂ. ಸ್ಯಾಲರಿ

ಬೆಂಗಳೂರು : ನೀವು ಕೇಂದ್ರ ಸರ್ಕಾರದ ಸಂಸ್ಥೆಯಲ್ಲಿ ಕೆಲಸ ಮಾಡಬೇಕು ಎಂದು ಬಯಸುತ್ತಿದ್ದೀರಾ? ಹಾಗಾದರೆ, ನಿಮಗೊಂದು ಗುಡ್ ನ್ಯೂಸ್ ಇದೆ. ಕೇಂದ್ರ ಸರ್ಕಾರಿ ಸ್ವಾಮ್ಯದ ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಷನ್ ಲಿಮಿಟೆಡ್‌ನಲ್ಲಿ (HPCL Recruitment 2026) ಖಾಲಿ ಇರುವ 116 ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಲಾಗಿದೆ.

ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.

ಹುದ್ದೆಗಳ ಸಂಕ್ಷಿಪ್ತ ವಿವರ

ನೇಮಕಾತಿ ಸಂಸ್ಥೆ: ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಷನ್ ಲಿಮಿಟೆಡ್ (HPCL)
ಒಟ್ಟು ಹುದ್ದೆಗಳು: 116
ಹುದ್ದೆಗಳ ಹೆಸರು: ಜೂನಿಯರ್ ಎಕ್ಸಿಕ್ಯೂಟಿವ್ ಇತ್ಯಾದಿ
ಉದ್ಯೋಗ ಸ್ಥಳ: ದೇಶಾದ್ಯಂತ
ಅರ್ಜಿ ಸಲ್ಲಿಕೆ ವಿಧಾನ: ಆನ್ ಲೈನ್
ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ: ಜುಲೈ 20

ಜೂನಿಯರ್ ಎಕ್ಸಿಕ್ಯೂಟಿವ್, ಸೀನಿಯರ್ ಆಫೀಸರ್, ಮ್ಯಾನೇಜರ್, ಚೀಫ್ ಮ್ಯಾನೇಜರ್ ಸೇರಿ ಹಲವು ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದೆ. ನೇಮಕಾತಿ ಹೊಂದಿದವರಿಗೆ ಆಯಾ ಹುದ್ದೆಗಳಿಗೆ ಅನುಗುಣವಾಗಿ ಮಾಸಿಕ 30 ಸಾವಿರ ರೂಪಾಯಿಯಿಂದ 2.8 ಲಕ್ಷ ರೂಪಾಯಿವರೆಗೆ ಸಂಬಳ ನೀಡಲಾಗುತ್ತದೆ. ಅರ್ಜಿ ಸಲ್ಲಿಸುವವರಿಗೆ ಗರಿಷ್ಠ 54 ವರ್ಷಗಳ ವಯೋಮಿತಿ ನಿಗದಿಪಡಿಸಲಾಗಿದೆ.

ಅರ್ಜಿ ಸಲ್ಲಿಸಲು ಬಯಸುವವರು ಮಾನ್ಯತೆ ಪಡೆದ ಯಾವುದೇ ವಿಶ್ವವಿದ್ಯಾಲಯ ಅಥವಾ ಮಂಡಳಿಗಳಲ್ಲಿ ಡಿಪ್ಲೋಮಾ, ಬಿ.ಇ, ಬಿ.ಟೆಕ್, ಪದವಿ, ಎಂಬಿಎ ಕೋರ್ಸ್ ಮುಗಿಸಿರಬೇಕು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ. ಕಂಪ್ಯೂಟರ್ ಆಧಾರಿತ ಪರೀಕ್ಷೆ, ಗ್ರೂಪ್ ಟಾಸ್ಕ್, ಸ್ಕಿಲ್ ಟೆಸ್ಟ್, ಸಂದರ್ಶನ, ದೈಹಿಕ ಸಾಮರ್ಥ್ಯ ಪರೀಕ್ಷೆ ನಡೆಸಿ ನೇಮಕಾತಿ ಮಾಡಿಕೊಳ್ಳಲಾಗುತ್ತದೆ.

ಅರ್ಜಿ ಸಲ್ಲಿಸುವವರು hindustanpetroleum.com ಗೆ ಭೇಟಿ ನೀಡಬೇಕು. ಅಧಿಸೂಚನೆಯನ್ನು ಓದಿಕೊಂಡ ಬಳಿಕ ಆನ್ ಲೈನ್ ಅರ್ಜಿಯನ್ನು ಭರ್ತಿ ಮಾಡಬೇಕು. ಅಗತ್ಯ ದಾಖಲೆಗಳನ್ನು ಅಪ್ ಲೋಡ್ ಮಾಡುವ ಮೂಲಕ ಅರ್ಜಿ ಸಲ್ಲಿಸಬೇಕು. ಫ್ಯೂಚರ್ ರೆಫರೆನ್ಸಿಗಾಗಿ ಅರ್ಜಿ ನಮೂನೆಯ ಪ್ರಿಂಟೌಟ್ ತೆಗೆದುಕೊಂಡಿರಬೇಕು.

Dailyhunt
Disclaimer: This content has not been generated, created or edited by Dailyhunt. Publisher: Karnatakanewsbeat