Dailyhunt

ಕೇಂದ್ರ ಸರ್ಕಾರದ ಸಂಸ್ಥೆಯಲ್ಲಿ ಇಂಟರ್ನ್‌ಶಿಪ್ ಮಾಡಲು ಅವಕಾಶ : ಸ್ಟೈಪೆಂಡ್ ಕೂಡ ಇರತ್ತೆ

ಬೆಂಗಳೂರು : ಕೇಂದ್ರ ಸರ್ಕಾರದ ಅಧೀನದಲ್ಲಿ ಕಾರ್ಯನಿರ್ವಹಿಸುವ, ರಕ್ಷಣಾ ಸಂಶೋಧನೆ ಹಾಗೂ ಅಭಿವೃದ್ಧಿ ಸಂಸ್ಥೆಯ ಡಿಫೆನ್ಸ್ ಬಯೋ-ಎಂಜಿನಿಯರಿಂಗ್ ಆಯಂಡ್ ಎಲೆಕ್ಟ್ರೋಮೆಡಿಕಲ್ ಲ್ಯಾಬೊರೇಟರಿ (DRDO DEBEL Recruitment 2026) ಸಂಸ್ಥೆಯಲ್ಲಿ ಇಂಟರ್ನ್ ಶಿಪ್ ಮಾಡಲು ಅವಕಾಶ ನೀಡಲಾಗಿದೆ.

8 ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದ್ದು, ಅರ್ಹ ಹಾಗೂ ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಆಫ್ ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.

ಹುದ್ದೆಗಳ ವಿವರ

ನೇಮಕಾತಿ ಸಂಸ್ಥೆ: ರಕ್ಷಣಾ ಸಂಶೋಧನೆ ಹಾಗೂ ಅಭಿವೃದ್ಧಿ ಸಂಸ್ಥೆಯ DEBEL
ಹುದ್ದೆ ಹೆಸರು: ಇಂಟರ್ನ್ ಶಿಪ್
ಒಟ್ಟು ಹುದ್ದೆ: 8
ಉದ್ಯೋಗ ಸ್ಥಳ: ಬೆಂಗಳೂರು
ಸಂದರ್ಶನ ನಡೆಯುವ ದಿನಾಂಕ: ಮೇ 31

ಕಂಪ್ಯೂಟರ್ ಸೈನ್ಸ್, ಎಲೆಕ್ಟ್ರಾನಿಕ್ ಕಮ್ಯುನಿಕೇಷನ್, ಮೆಕ್ಯಾನಿಕಲ್ ಎಂಜಿನಿಯರಿಂಗ್ ಅಧ್ಯಯನ ಮಾಡುತ್ತಿರುವ ಅಂತಿಮ ವರ್ಷದ ವಿದ್ಯಾರ್ಥಿಗಳು ಅರ್ಜಿಗಳನ್ನು ಸಲ್ಲಿಸಲು ಅರ್ಹರಾಗಿದ್ದಾರೆ. ಇವರಿಗೆ ಆರು ತಿಂಗಳು ಇಂಟರ್ನ್ ಶಿಪ್ ಮಾಡಲು ಅವಕಾಶ ಇರುತ್ತದೆ. ತರಬೇತಿ ವೇಳೆ ಮಾಸಿಕ 15 ಸಾವಿರ ರೂಪಾಯಿ ಸ್ಟೈಪೆಂಡ್ ನೀಡಲಾಗುತ್ತದೆ. ಸಲ್ಲಿಕೆಯಾದ ಅರ್ಜಿಗಳನ್ನು ಮೊದಲು ಪರಿಶೀಲನೆ ಮಾಡಲಾಗುತ್ತದೆ. ಇದಾದ ಬಳಿಕ ಸಂದರ್ಶನ ನಡೆಸಿ ನೇಮಕಾತಿ ಮಾಡಿಕೊಳ್ಳಲಾಗುತ್ತದೆ.

ಅರ್ಹರು ಹಾಗೂ ಆಸಕ್ತಿ ಹೊಂದಿರುವವರು ಮೊದಲಿಗೆ drdo.gov.in ವೆಬ್ ಸೈಟ್ ಗೆ ಭೇಟಿ ನೀಡಬೇಕು. ನೇಮಕಾತಿಗೆ ಸಂಬಂಧಿಸಿದ ಅಧಿಸೂಚನೆ ಓದಿಕೊಳ್ಳಬೇಕು. ಅರ್ಜಿಯ ಪ್ರಿಂಟೌಟ್ ತೆಗೆದುಕೊಂಡು ಭರ್ತಿ ಮಾಡಬೇಕು. ಭರ್ತಿ ಮಾಡಿದ ಅರ್ಜಿ ಹಾಗೂ ಅಗತ್ಯ ದಾಖಲೆಗಳನ್ನು ಈ ಕೆಳಗಿನ ವಿಳಾಸಕ್ಕೆ ಪೋಸ್ಟ್ ಮಾಡಬೇಕು.

ಅರ್ಜಿ ಸಲ್ಲಿಸಬೇಕಾದ ವಿಳಾಸ

ನಿರ್ದೇಶಕರು, ಡಿಫೆನ್ಸ್ ಬಯೋ-ಎಂಜಿನಿಯರಿಂಗ್ ಆಯಂಡ್ ಎಲೆಕ್ಟ್ರೋಮೆಡಿಕಲ್ ಲ್ಯಾಬೊರೇಟರಿ (DEBEL)
ಎ.ಡಿ.ಇ ಕ್ಯಾಂಪಸ್, ಹೊಸ ತಿಪ್ಪಸಂದ್ರ,
ಬೆಂಗಳೂರು - 560075.

Dailyhunt
Disclaimer: This content has not been generated, created or edited by Dailyhunt. Publisher: Karnatakanewsbeat