Dailyhunt Logo
  • Light mode
    Follow system
    Dark mode
    • Play Story
    • App Story

ಕೋಲ್ ಇಂಡಿಯಾ ಸಂಸ್ಥೆಯಲ್ಲಿ 276 ಹುದ್ದೆಗಳ ನೇಮಕಾತಿ : 60 ಸಾವಿರ ರೂ. ಸಂಬಳ

ಬೆಂಗಳೂರು : ಕೇಂದ್ರ ಸರ್ಕಾರದ ಅಧೀನದಲ್ಲಿ ಕಾರ್ಯನಿರ್ವಹಿಸುವ, ಮಹಾರತ್ನ ಸಂಸ್ಥೆ ಎಂಬ ಮಾನ್ಯತೆ ಪಡೆದಿರುವ ಕೋಲ್ ಇಂಡಿಯಾ (CIL Management Trainee Recruitment 2026) ಸಂಸ್ಥೆಯಲ್ಲಿ ಖಾಲಿ ಇರುವ 276 ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಲಾಗಿದೆ.

ಮ್ಯಾನೇಜ್ ಮೆಂಟ್ ಟ್ರೈನಿ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದೆ. ಅರ್ಹ ಹಾಗೂ ಆಸಕ್ತಿ ಹೊಂದಿರುವವರು ಆನ್ ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.

ಹುದ್ದೆಗಳ ಸಂಕ್ಷಿಪ್ತ ವಿವರ

ನೇಮಕಾತಿ ಸಂಸ್ಥೆ: ಕೋಲ್ ಇಂಡಿಯಾ
ಹುದ್ದೆ ಹೆಸರು: ಮ್ಯಾನೇಜ್ ಮೆಂಟ್ ಟ್ರೈನಿ
ಒಟ್ಟು ಹುದ್ದೆಗಳು: 276
ಅರ್ಜಿ ಸಲ್ಲಿಕೆ ವಿಧಾನ: ಆನ್ ಲೈನ್
ಅರ್ಜಿ ಸಲ್ಲಿಕೆಗೆ ಕೊನೆಯ ದಿನ: ಜೂನ್ 11

ಅರ್ಜಿ ಸಲ್ಲಿಸುವವರು ಮಾನ್ಯತೆ ಪಡೆದ ಯಾವುದೇ ವಿಶ್ವವಿದ್ಯಾಲಯದಿಂದ ಪದವಿ ಮುಗಿಸಿರಬೇಕು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ. ಗೇಟ್ 2025 ಅಂಕಗಳನ್ನೂ ಪರಿಗಣಿಸಲಾಗುತ್ತದೆ. ಶಾರ್ಟ್ ಲಿಸ್ಟಿಂಗ್, ದಾಖಲೆ ಪರಿಶೀಲನೆ ಮತ್ತು ವೈದ್ಯಕೀಯ ಪರೀಕ್ಷೆ ನಡೆಸಿ ನೇಮಕ ಮಾಡಿಕೊಳ್ಳಲಾಗುತ್ತದೆ. ನೇಮಕಾತಿ ಹೊಂದಿದವರಿಗೆ ಮಾಸಿಕ 60 ಸಾವಿರ ರೂಪಾಯಿವರೆಗೆ ಸಂಬಳ ನೀಡಲಾಗುತ್ತದೆ. ಇಡಬ್ಲ್ಯೂಎಸ್, ಜನರಲ್ ಅಭ್ಯರ್ಥಿಗಳಿಗೆ 1,180 ರೂಪಾಯಿ ಅರ್ಜಿ ಶುಲ್ಕವಿದೆ. ಉಳಿದವರಿಗೆ ಶುಲ್ಕದಿಂದ ವಿನಾಯಿತಿ ನೀಡಲಾಗಿದೆ. ದೇಶದ ಯಾವುದೇ ಭಾಗದಲ್ಲಿ ಕೆಲಸ ಮಾಡಲು ಇಚ್ಛಿಸುವವರು ಅರ್ಜಿ ಸಲ್ಲಿಸಬಹುದು.

ಅರ್ಜಿ ಸಲ್ಲಿಸೋದು ಹೇಗೆ?

ಮೊದಲಿಗೆ ಅಧಿಕೃತ ವೆಬ್ ಸೈಟ್ ಆಗಿರುವ coalindia.in ಗೆ ಭೇಟಿ ನೀಡಬೇಕು.
ಮ್ಯಾನೇಜ್ ಮೆಂಟ್ ಟ್ರೈನಿ ಹುದ್ದೆಯ ವಿಭಾಗವನ್ನು ಆಯ್ಕೆ ಮಾಡಬೇಕು
ಹುದ್ದೆಗೆ ಸಂಬಂಧಿಸಿದ ಅಧಿಸೂಚನೆ ಓದಬೇಕು
ಆನ್ ಲೈನ್ ಅರ್ಜಿ ನಮೂನೆಯ ಲಿಂಕ್ ತೆರೆಯಬೇಕು
ಅಗತ್ಯ ವಿವರಗಳನ್ನು ಸರಿಯಾಗಿ ಭರ್ತಿ ಮಾಡಬೇಕು
ಅರ್ಜಿ ಸಲ್ಲಿಸಿ, ಸಬ್ಮಿಟ್ ಮಾಡಿದ ಅರ್ಜಿಯ ಪ್ರತಿಯನ್ನು ಪ್ರಿಂಟ್ ಔಟ್ ತೆಗೆದಿಟ್ಟುಕೊಳ್ಳಬೇಕು

ಇದನ್ನೂ ಓದಿ : ಬ್ರಿಕ್ಸ್ ವೇದಿಕೆಯಲ್ಲಿ ಭಾರತದ 'ಹೊರ್ಮುಜ್' ಮಂತ್ರ : ಇರಾನ್-ಯುಎಇ ಸಮ್ಮುಖದಲ್ಲೇ ಜೈಶಂಕರ್ ಖಡಕ್ ಸಂದೇಶ

Dailyhunt
Disclaimer: This content has not been generated, created or edited by Dailyhunt. Publisher: Karnatakanewsbeat