Dailyhunt Logo
  • Light mode
    Follow system
    Dark mode
    • Play Story
    • App Story

ಕೊನೆಗೂ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಘೋಷಿಸಿದ ಸಿದ್ದರಾಮಯ್ಯ!

Karnatakanewsbeat 3 weeks ago

ಬೆಂಗಳೂರು : ಕರ್ನಾಟಕ ರಾಜಕೀಯದಲ್ಲಿ ಮುಖ್ಯಮಂತ್ರಿ ಕುರ್ಚಿ ಬದಲಾವಣೆ ಚರ್ಚೆಯ ಮಧ್ಯೆ ಕಾಂಗ್ರೆಸ್​ ಹೈಕಮಾಂಡ್​ ಸೂಚನೆಯಂತೆ ಸಿಎಂ ಸಿದ್ದರಾಮಯ್ಯ ಅವರು ಡಿಸಿಎಂ ಡಿ.ಕೆ.ಶಿವಕುಮಾರ್​ ಹಾಗೂ ತಮ್ಮ ಸಂಪುಟ ಸಹೋದ್ಯೋಗಿಗಳೊಂದಿಗೆ ಇಂದು ಉಪಹಾರ ಸಭೆ ನಡೆಸಿದ್ದಾರೆ. ಸರ್ಕಾರಿ ನಿವಾಸ ಕಾವೇರಿಯಲ್ಲಿ ನಡೆದ ಈ ಸಭೆಯಲ್ಲಿ ತಾವು ಸಿಎಂ ಹುದ್ದೆಯಿಂದ ಕೆಳಗಿಳಿಯುವುದಾಗಿ ಸಿದ್ದರಾಮಯ್ಯ ತಿಳಿಸಿದ್ದಾರೆ.

ನನಗೆ ಯಾವುದೇ ನೋವಿಲ್ಲ, ಮನಃಪೂರ್ವಕವಾಗಿ ರಾಜೀನಾಮೆ ನೀಡುತ್ತಿದ್ದೇನೆ ಎಂದು ಸಿಎಂ ಸಿದ್ದರಾಮಯ್ಯ ವಿದಾಯದ ಬ್ರೇಕ್‌ಫಾಸ್ಟ್‌ ಮೀಟಿಂಗ್‌ನಲ್ಲಿ ಹೇಳಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ಇಂದು ಮಧ್ಯಾಹ್ನ 3 ಗಂಟೆಗೆ ರಾಜೀನಾಮೆ ಕೊಡುವುದಾಗಿ ಸಿಎಂ ಸಿದ್ದರಾಮಯ್ಯ ಘೋಷಣೆ ಮಾಡಿದ್ದು, ಲೋಕಭವನಕ್ಕೆ ತೆರಳಿ ರಾಜೀನಾಮೆ ನೀಡುತ್ತೇನೆ. ರಾಜ್ಯಪಾಲರು ಇಲ್ಲದೇ ಇದ್ದರೆ ಅವರ ಕಾರ್ಯದರ್ಶಿಗೆ ರಾಜೀನಾಮೆ ನೀಡುವುದಾಗಿ ಸಿಎಂ ಮಾಹಿತಿ ನೀಡಿದ್ದಾರೆ.

ಸಿದ್ದರಾಮಯ್ಯನವರು ಈ ರೀತಿ ಹೇಳುತ್ತಿದ್ದಂತೆ ಡಿಕೆ ಶಿವಕುಮಾರ್‌ ಕಣ್ಣಂಚಲಿ‌ ನೀರು ಬಂದಿದೆ. ಸಿಎಂ ಕೊಟ್ಟ ಮಾತಿನಂತೆ ನಡೆದುಕೊಂಡಿದ್ದಕ್ಕೆ ಡಿಕೆಶಿ ಭಾವುಕರಾದರು ಎಂಬ ವಿಚಾರ ಮೂಲಗಳಿಂದ ತಿಳಿದು ಬಂದಿದೆ.

ಬೆಳಗ್ಗೆ ಉಪಹಾರಕ್ಕೆ ಕಾವೇರಿ ನಿವಾಸಕ್ಕೆ ಆಗಮಿಸಿದ ಡಿಕೆ ಶಿವಕುಮಾರ್‌ ಅವರು ಸಿದ್ದರಾಮಯ್ಯರನ್ನು ತಬ್ಬಿಕೊಂಡು ಕಾಲಿಗೆ ಬಿದ್ದು ಆಶೀರ್ವಾದ ಪಡೆದಿದ್ದು, ಉಪಹಾರ ಸಭೆಗೂ ಮೊದಲು ಡಿಕೆಶಿ ಜೊತೆ ಮೊದಲು ಸಿಎಂ ಪ್ರತ್ಯೇಕ ಮಾತುಕತೆ ಕೂಡ ನಡೆಸಿದ್ದರು.

ಇದನ್ನೂ ಓದಿ :

Dailyhunt
Disclaimer: This content has not been generated, created or edited by Dailyhunt. Publisher: Karnatakanewsbeat