Dailyhunt Logo
  • Light mode
    Follow system
    Dark mode
    • Play Story
    • App Story
ನಾಳೆ ಶಿವರಾಮ ಕಾರಂತ ಬಡಾವಣೆ ಭೂ ಮಾಲೀಕರಿಗೆ ನಿವೇಶನ ಹಂಚಿಕೆ

ನಾಳೆ ಶಿವರಾಮ ಕಾರಂತ ಬಡಾವಣೆ ಭೂ ಮಾಲೀಕರಿಗೆ ನಿವೇಶನ ಹಂಚಿಕೆ

Karnatakanewsbeat 3 weeks ago

ಬೆಂಗಳೂರು : ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ (ಬಿಡಿಎ) ವತಿಯಿಂದ ಆಗಸ್ಟ್ 31ರಂದು ಬೆಳಗ್ಗೆ 11.30ಕ್ಕೆ ಡಾ.ಕೆ ಶಿವರಾಮ ಕಾರಂತ ಬಡಾವಣೆಯ ಭೂ ಮಾಲೀಕರಿಗೆ ನಿವೇಶನದ ಹಂಚಿಕೆ ಪತ್ರ ವಿತರಣೆ ಕಾರ್ಯಕ್ರಮ ನಡೆಯಲಿದೆ.

ನೆಹರೂ ತಾರಾಲಯದ ಯು.ಆರ್. ಭವನದಲ್ಲಿ ನಡೆಯಲಿರುವ ಕಾರ್ಯಕ್ರಮವನ್ನು ಮುಖ್ಯಮಂತ್ರಿ ಡಿ.ಕೆ.

ಶಿವಕುಮಾರ್ ಉದ್ಘಾಟಿಸಲಿದ್ದಾರೆ.

ಕಾರ್ಯಕ್ರಮದಲ್ಲಿ ಉಪ ಮುಖ್ಯಮಂತ್ರಿ ಹಾಗೂ ಕಂದಾಯ ಸಚಿವ ಡಾ. ಜಿ. ಪರಮೇಶ್ವರ, ಗ್ರೇಟರ್ ಬೆಂಗಳೂರು ಸಚಿವ ಕೃಷ್ಣ ಬೈರೇಗೌಡ ಹಾಗೂ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಸಚಿವ ರಿಜ್ವಾನ್ ಅರ್ಷದ್ ಉಪಸ್ಥಿತರಿಲಿದ್ದಾರೆ.

ಶಾಸಕರು ಹಾಗೂ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಎನ್.ಎ. ಹ್ಯಾರಿಸ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ. ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ, ಸಂಸದ ಪಿ.ಸಿ. ಮೋಹನ್, ಶಾಸಕರಾದ ಎಸ್.ಆರ್. ವಿಶ್ವನಾಥ್ ಮತ್ತು ಎಸ್. ಮುನಿರಾಜು ಸೇರಿದಂತೆ ಬಿಡಿಎ ಸದಸ್ಯರು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.

Dailyhunt
Disclaimer: This content has not been generated, created or edited by Dailyhunt. Publisher: Karnatakanewsbeat