Dailyhunt Logo
  • Light mode
    Follow system
    Dark mode
    • Play Story
    • App Story
ರಾಜ್ಯ ಹೈಕೋರ್ಟ್‌ನಲ್ಲಿ 21 ಡೇಟಾ ಎಂಟ್ರಿ ಅಸಿಸ್ಟಂಟ್ ಹುದ್ದೆಗಳ ನೇಮಕಾತಿ : 81 ಸಾವಿರ ರೂ. ಸ್ಯಾಲರಿ

ರಾಜ್ಯ ಹೈಕೋರ್ಟ್‌ನಲ್ಲಿ 21 ಡೇಟಾ ಎಂಟ್ರಿ ಅಸಿಸ್ಟಂಟ್ ಹುದ್ದೆಗಳ ನೇಮಕಾತಿ : 81 ಸಾವಿರ ರೂ. ಸ್ಯಾಲರಿ

ಬೆಂಗಳೂರು : ಪದವಿ ಮುಗಿಸಿ ಉದ್ಯೋಗ ಹುಡುಕುತ್ತಿರುವವರಿಗೆ ಗುಡ್ ನ್ಯೂಸ್ ಲಭಿಸಿದೆ. ಕರ್ನಾಟಕ ಹೈಕೋರ್ಟ್ ನಲ್ಲಿ ಖಾಲಿ ಇರುವ 21 ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಲಾಗಿದೆ. 21 ಡೇಟಾ ಎಂಟ್ರಿ ಅಸಿಸ್ಟಂಟ್ ಹುದ್ದೆಗಳನ್ನು ನೇಮಕಾತಿ (Karnataka High Court Recruitment 2026) ಮಾಡಿಕೊಳ್ಳಲಾಗುತ್ತಿದೆ.

ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಲು ಅವಕಾಶ ನೀಡಲಾಗಿದೆ. ನೇಮಕಾತಿಗೆ ಸಂಬಂಧಿಸಿದಂತೆ ಹೆಚ್ಚಿನ ಮಾಹಿತಿ ಈ ಕೆಳಗಿನಂತಿದೆ.

ಹುದ್ದೆಗಳ ವಿವರ

ನೇಮಕಾತಿ ಸಂಸ್ಥೆ: ಕರ್ನಾಟಕ ಹೈಕೋರ್ಟ್
ಹುದ್ದೆ ಹೆಸರು: ಡೇಟಾ ಎಂಟ್ರಿ ಅಸಿಸ್ಟಂಟ್
ಒಟ್ಟು ಹುದ್ದೆ: 21
ಉದ್ಯೋಗ ಸ್ಥಳ: ಬೆಂಗಳೂರು
ಅರ್ಜಿ ಸಲ್ಲಿಕೆ ವಿಧಾನ: ಆನ್ ಲೈನ್
ಅರ್ಜಿ ಸಲ್ಲಿಸಲು ಕೊನೆಯ ದಿನ: ಜುಲೈ 28

ಮಾನ್ಯತೆ ಪಡೆದ ಯಾವುದೇ ವಿಶ್ವವಿದ್ಯಾಲಯದಲ್ಲಿ ಕಾನೂನು ವಿಷಯದಲ್ಲಿ ಪದವಿ ಮುಗಿಸಿದವರು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸಲು ಗರಿಷ್ಠ 40 ವರ್ಷಗಳ ವಯೋಮಿತಿಯನ್ನು ನಿಗದಿಪಡಿಸಲಾಗಿದೆ. ಎಸ್ಸಿ, ಎಸ್ಟಿ, ಪಿಡಬ್ಲ್ಯೂಡಿ ಅಭ್ಯರ್ಥಿಗಳಿಗೆ 200 ರೂಪಾಯಿ ಅರ್ಜಿ ಶುಲ್ಕವಿದ್ದರೆ, ಉಳಿದವರಿಗೆ 350 ರೂ. ಇದೆ. ಎಸ್ಸಿ, ಎಸ್ಟಿ ಅಭ್ಯರ್ಥಿಗಳಿಗೆ 5 ವರ್ಷಗಳ ವಯೋಮಿತಿ ಸಡಿಲಿಕೆ ಇದ್ದರೆ, ಒಬಿಸಿಯವರಿಗೆ 3 ವರ್ಷಗಳ ಸಡಿಲಿಕೆ ಇದೆ.

ಅಭ್ಯರ್ಥಿಗಳನ್ನು ಟೈಪಿಂಗ್ ಟೆಸ್ಟ್ ಹಾಗೂ ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ. ನೇಮಕಾತಿ ಹೊಂದಿದವರಿಗೆ ಮಾಸಿಕ 25,500 ರೂಪಾಯಿಯಿಂದ 81,100 ರೂಪಾಯಿವರೆಗೆ ಸಂಬಳ ನೀಡಲಾಗುತ್ತದೆ ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.

ಅರ್ಜಿ ಸಲ್ಲಿಸುವುದು ಹೇಗೆ?

ಮೊದಲಿಗೆ ಅಧಿಕೃತ ವೆಬ್ ಸೈಟ್ ಆಗಿರುವ karnatakajudiciary.kar.nic.in ಗೆ ಭೇಟಿ ನೀಡಬೇಕು
ನಿಮಗೆ ಬೇಕಾದ ಹುದ್ದೆಯ ಅಧಿಸೂಚನೆಯನ್ನು ಓದಬೇಕು
ಆನ್ ಲೈನ್ ಅರ್ಜಿ ನಮೂನೆಯ ಲಿಂಕ್ ತೆರೆಯಬೇಕು.
ಅರ್ಜಿಯನ್ನು ಯಾವುದೇ ತಪ್ಪುಗಳಿಲ್ಲದ ರೀತಿ ಭರ್ತಿ ಮಾಡಬೇಕು
ಭರ್ತಿ ಮಾಡಿದ ಅರ್ಜಿಯನ್ನು ಅಗತ್ಯ ದಾಖಲೆಗಳೊಂದಿಗೆ ಸಲ್ಲಿಸಬೇಕು
ಫ್ಯೂಚರ್ ರೆಫರೆನ್ಸಿಗಾಗಿ ಅರ್ಜಿ ನಮೂನೆಯ ಪ್ರಿಂಟೌಟ್ ತೆಗೆದಿಟ್ಟುಕೊಳ್ಳಬೇಕು

Dailyhunt
Disclaimer: This content has not been generated, created or edited by Dailyhunt. Publisher: Karnatakanewsbeat