Dailyhunt Logo
  • Light mode
    Follow system
    Dark mode
    • Play Story
    • App Story

RCB ಕಪ್ ಗೆದ್ದ ಖುಷಿಯಲ್ಲಿ ಅನಾಹುತ ; ಸಂಭ್ರಮಾಚರಣೆ ಮುಗಿಸಿ ಮನೆಗೆ ಬರ್ತಿದ್ದ ಅಭಿಮಾನಿ ಸಾವು!

Karnatakanewsbeat 2 weeks ago

ನೆಲಮಂಗಲ : ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆದ ಟಾಟಾ ಐಪಿಎಲ್ 2026ರ ಫೈನಲ್ ಪಂದ್ಯದಲ್ಲಿ ಗುಜರಾತ್ ಟೈಟನ್ಸ್ ವಿರುದ್ಧ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಭರ್ಜರಿ ಜಯ ದಾಖಲಿಸಿದೆ. ಈ ಗೆಲುವಿನೊಂದಿಗೆ ಆರ್‌ಸಿಬಿ ಸತತ ಎರಡನೇ ಬಾರಿಗೆ ಚಾಂಪಿಯನ್ ಪಟ್ಟ ಅಲಂಕರಿಸಿದ್ದು, ಐಪಿಎಲ್ ಇತಿಹಾಸದಲ್ಲಿ ಪ್ರಶಸ್ತಿ ಉಳಿಸಿಕೊಂಡ ಮೂರನೇ ತಂಡ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ.

ಆದರೆ ಆರ್‌ಸಿಬಿ ಸತತ 2ನೇ ಬಾರಿಗೆ ಚಾಂಪಿಯನ್‌ ಪಟ್ಟ ಮುಡಿಗೇರಿಸಿಕೊಂಡ ಸಂಭ್ರಮಾಚರಣೆ ಮುಗಿಸಿ ಮನೆಗೆ ವಾಪಸ್‌ ಬರುತ್ತಿದ್ದ ಅಭಿಮಾನಿಯೊಬ್ಬ ದಾರುಣವಾಗಿರುವ ಸಾವಿಗೀಡಾಗಿರುವ ಘಟನೆ ಬೆಂಗಳೂರಲ್ಲಿ ನಡೆದಿದೆ.

ಬೆಂಗಳೂರು ಉತ್ತರ ತಾಲೂಕಿನ ಮಾದನಾಯಕನಹಳ್ಳಿ ಲಕ್ಷ್ಮೀಪುರ ಗ್ರಾಮದ ಬಳಿ 2 ಬೈಕ್‌ಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ ಯುವಕ ಸಾವನ್ನಪ್ಪಿದ್ದಾನೆ. ಮನೋಜ್ (21) ಮೃತ ಯುವಕ ಎಂದು ತಿಳಿದುಬಂದಿದೆ. ಘಟನೆಯಲ್ಲಿ ಓರ್ವ ಸಾವನ್ನಪ್ಪಿದ್ದು, ಇಬ್ಬರ ಸ್ಥಿತಿ ಗಂಭೀರವಾಗಿದೆ. ಅಪಘಾತದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.

Dailyhunt
Disclaimer: This content has not been generated, created or edited by Dailyhunt. Publisher: Karnatakanewsbeat