Dailyhunt Logo
  • Light mode
    Follow system
    Dark mode
    • Play Story
    • App Story
ಸಭೆ ನಡೆಯುತ್ತಿದ್ದಾಗಲೇ ಕುಸಿದು ಬಿದ್ದು ಭೂ ನ್ಯಾಯ ಮಂಡಳಿ ಸದಸ್ಯ ಸಾವು!

ಸಭೆ ನಡೆಯುತ್ತಿದ್ದಾಗಲೇ ಕುಸಿದು ಬಿದ್ದು ಭೂ ನ್ಯಾಯ ಮಂಡಳಿ ಸದಸ್ಯ ಸಾವು!

ಕ್ಷಿಣ ಕನ್ನಡ : ಜಿಲ್ಲೆಯ ಪುತ್ತೂರಿನಲ್ಲಿ ಭೂ ನ್ಯಾಯ ಮಂಡಳಿ ಸದಸ್ಯರೊಬ್ಬರು ಸಭೆಯಲ್ಲೇ ಕುಸಿದು ಬಿದ್ದು ಮೃತಪಟ್ಟಿರುವ ದುರ್ಘಟನೆ ನಡೆದಿದೆ. ಪುತ್ತೂರು ಸಹಾಯಕ ಆಯುಕ್ತರ ಕಚೇರಿಯಲ್ಲಿ ನಡೆಯುತ್ತಿದ್ದ ಭೂ ನ್ಯಾಯ ಮಂಡಳಿ ಸಭೆಯಲ್ಲಿ ಪಾಲ್ಗೊಂಡಿದ್ದ ವೇಳೆ ಈ ಘಟನೆ ಸಂಭವಿಸಿದೆ.

ಮೃತರನ್ನು ನಿರಂಜನ್ ರೈ ಮಠಂದಬೆಟ್ಟು ಎಂದು ಗುರುತಿಸಲಾಗಿದೆ. ಇವರು ಕಂಬಳದ ಖ್ಯಾತ ವೀಕ್ಷಕ ವಿವರಣೆಗಾರರಾಗಿಯೂ ಗುರುತಿಸಿಕೊಂಡಿದ್ದರು.

ಸಹಾಯಕ ಆಯುಕ್ತೆ ಸ್ಟೆಲ್ಲಾ ವರ್ಗೀಸ್ ಅವರ ನೇತೃತ್ವದಲ್ಲಿ ಸಭೆ ನಡೆಯುತ್ತಿದ್ದ ವೇಳೆ ನಿರಂಜನ್ ರೈ ಏಕಾಏಕಿ ಕುಸಿದು ಬಿದ್ದಿದ್ದಾರೆ. ತಕ್ಷಣವೇ ಸಹಾಯಕ ಆಯುಕ್ತೆ ಹಾಗೂ ತಹಶೀಲ್ದಾರ್ ಸೇರಿದಂತೆ ಅಧಿಕಾರಿಗಳು ಅವರನ್ನು ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ ವೈದ್ಯರು ಪರೀಕ್ಷಿಸಿದ ವೇಳೆ ತೀವ್ರ ಹೃದಯಾಘಾತದಿಂದ ಅವರು ಮೃತಪಟ್ಟಿರುವುದು ದೃಢಪಟ್ಟಿದೆ.

ನಿರಂಜನ್ ರೈ ಅವರ ಅಕಾಲಿಕ ನಿಧನದಿಂದ ಭೂ ನ್ಯಾಯ ಮಂಡಳಿ ಸದಸ್ಯರು, ಅಧಿಕಾರಿಗಳು ಹಾಗೂ ಕಂಬಳ ವಲಯದಲ್ಲಿ ಶೋಕದ ವಾತಾವರಣ ನಿರ್ಮಾಣವಾಗಿದೆ.

Dailyhunt
Disclaimer: This content has not been generated, created or edited by Dailyhunt. Publisher: Karnatakanewsbeat