Dailyhunt Logo
  • Light mode
    Follow system
    Dark mode
    • Play Story
    • App Story

ಸರ್ಕಾರಿ ಶಾಲೆ ಆವರಣದಲ್ಲೇ ಸೀಮಂತ ಕಾರ್ಯಕ್ರಮ - ಸಾರ್ವಜನಿಕರಿಂದ ಆಕ್ರೋಶ!

Karnatakanewsbeat 2 weeks ago

ಬೆಳಗಾವಿ : ಸರ್ಕಾರಿ ಕನ್ನಡ ಶಾಲೆಗಳು ಈಗ ಶಿಕ್ಷಣದ ಮಂದಿರಗಳ ಬದಲು ಕಾರ್ಯಕ್ರಮಗಳ ಕೇಂದ್ರಗಳಾಗುತ್ತಿವೆಯಾ ಎಂಬ ಪ್ರಶ್ನೆ ಉದ್ಭವಿಸುವ ಘಟನೆ ಬೆಳಗಾವಿ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಸರ್ಕಾರಿ ಶಾಲೆಯ ಆವರಣದಲ್ಲಿ ಸೀಮಂತ ಕಾರ್ಯಕ್ರಮ ನಡೆದಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ.

ಹೌದು.. ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ತೆಲಸಂಗ ಗ್ರಾಮದಲ್ಲಿರುವ ನಮ್ಮೂರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಮಾಧವನಂದನಗರದ ಆವರಣದಲ್ಲಿ ಸೀಮಂತ ಕಾರ್ಯಕ್ರಮ ನಡೆಸಲಾಗಿದೆ ಎಂಬ ಆರೋಪ ಕೇಳಿಬಂದಿದೆ. ಶಾಲೆಯ ಆವರಣವನ್ನೇ ಕಲ್ಯಾಣ ಮಂಟಪದ ರೀತಿಯಲ್ಲಿ ಬಳಸಿರುವ ದೃಶ್ಯಗಳು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಹರಿದಾಡುತ್ತಿವೆ.

ಸರ್ಕಾರಿ ಶಾಲೆಗಳಲ್ಲಿ ಮದುವೆ, ಸೀಮಂತ ಸೇರಿದಂತೆ ಖಾಸಗಿ ಕಾರ್ಯಕ್ರಮಗಳು ನಡೆಯುತ್ತಿದ್ದರೂ ಅಧಿಕಾರಿಗಳ ಗಮನಕ್ಕೆ ಬರುತ್ತಿಲ್ಲವೇ ಎಂಬ ಪ್ರಶ್ನೆ ಸಾರ್ವಜನಿಕರಿಂದ ಕೇಳಿಬರುತ್ತಿದೆ. ಶಿಕ್ಷಣಕ್ಕಾಗಿ ನಿರ್ಮಿಸಿದ ಶಾಲಾ ಆವರಣವನ್ನು ಈ ರೀತಿಯಾಗಿ ಬಳಸಿರುವುದು ಶಿಕ್ಷಣ ವ್ಯವಸ್ಥೆಯ ಮೇಲೆಯೇ ಪ್ರಶ್ನೆ ಹುಟ್ಟಿಸಿದೆ.

ಘಟನೆ ಬಗ್ಗೆ ಕ್ಷೇತ್ರ ಶಿಕ್ಷಣಾಧಿಕಾರಿ ಪ್ರತಿಕ್ರಿಯೆ :

ಕನ್ನಡ ಶಾಲೆಯಲ್ಲಿ ಸೀಮಂತ ಕಾರ್ಯಕ್ರಮ ನಡೆದಿರುವ ವಿಚಾರಕ್ಕೆ ಅಥಣಿ ಕ್ಷೇತ್ರ ಶಿಕ್ಷಣಾಧಿಕಾರಿ ಎಂ.ಆರ್. ಮುಂಜೆ ಪ್ರತಿಕ್ರಿಯೆ ನೀಡಿದ್ದಾರೆ. "ಈ ವಿಚಾರ ಈಗಾಗಲೇ ನನ್ನ ಗಮನಕ್ಕೂ ಬಂದಿದೆ. ರಜೆ ಇದ್ದ ಕಾರಣ ಶಾಲಾ ಆವರಣದಲ್ಲಿ ಕಾರ್ಯಕ್ರಮ ಮಾಡಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ಶಿಕ್ಷಕರ ಕಡೆಯಿಂದ ಸಂಪೂರ್ಣ ವರದಿ ಪಡೆಯಲಾಗುವುದು. ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುತ್ತೇನೆ" ಎಂದು ಸ್ಪಷ್ಟಪಡಿಸಿದ್ದಾರೆ. ಒಟ್ಟಿನಲ್ಲಿ ಶಾಲಾ ಆವರಣವನ್ನು ಖಾಸಗಿ ಕಾರ್ಯಕ್ರಮಗಳಿಗೆ ಬಳಸಿರುವ ಪ್ರಕರಣ ಇದೀಗ ಚರ್ಚೆಗೆ ಕಾರಣವಾಗಿದ್ದು, ಮುಂದಿನ ಕ್ರಮ ಏನಾಗಲಿದೆ ಎಂಬುದನ್ನು ಕಾದು ನೋಡಬೇಕಿದೆ.

Dailyhunt
Disclaimer: This content has not been generated, created or edited by Dailyhunt. Publisher: Karnatakanewsbeat