Dailyhunt Logo
  • Light mode
    Follow system
    Dark mode
    • Play Story
    • App Story

ಶಿವಮೊಗ್ಗ ಜಿಲ್ಲೆಯಾದ್ಯಂತ ಮರಳು, ಕ್ವಾರಿಗಳ ಮೇಲೆ ಲೋಕಾ ಟ್ರ್ಯಾಪ್‌!

ಶಿವಮೊಗ್ಗ : ಶಿವಮೊಗ್ಗ ಜಿಲ್ಲೆಯ ಹಲವೆಡೆ ಮರಳು ಮತ್ತು ಕ್ವಾರಿಗಳ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದು, ಮರಳು ಗಣಿಗಾರಿಕೆ ಹಾಗೂ ಸಂಗ್ರಹವನ್ನ ಪರಿಶೀಲಿಸಿದ್ದಾರೆ.

ಜಿಲ್ಲೆಯಲ್ಲಿ ಅಕ್ರಮ ಮರಳು ಸಾಗಣೆ ಸಂಬಂಧ ಸಾಲು ಸಾಲು ದೂರುಗಳು ಕೇಳಿಬಂದ ಹಿನ್ನೆಲೆ ಶಿವಮೊಗ್ಗ ಜಿಲ್ಲೆಯ ಹೊಸನಗರ, ಸಾಗರ, ತೀರ್ಥಹಳ್ಳಿ, ಭದ್ರಾವತಿ, ನಿಂಬೆಗೊಂದಿ, ಮಂಗೋಟೆ, ಸನ್ಯಾಸಿ ಕೊಡಮಗ್ಗಿ, ಹಾಡೋನಹಳ್ಳಿ, ಕೂಡಲಿ, ಮಂಡುವಳ್ಳಿ, ತೂದೂರು, ದಬ್ಬಣಗದ್ದೆ, ಹೊಸನಗರ ತಾಲೂಕಿನ ಹರಿದ್ರಾವತಿ, ಸಂಪಕಟ್ಟೆ ಮತ್ತು ಸಾಗರದ ಆವಿನಹಳ್ಳಿಯ ಕ್ವಾರಿಗಳ ಮೇಲೆ ಅಧಿಕಾರಿಗಳು ಏಕಾಏಕಿ ದಾಳಿ ನಡೆಸಿದ್ದಾರೆ.

ಮರಳು ಕ್ವಾರಿಗಳೊಂದಿಗೆ ಶಿವಮೊಗ್ಗದ ಕುವೆಂಪುನಗರದಲ್ಲಿರುವ ಗಣಿ ಮತ್ತು ಭೂವಿಜ್ಞಾನ ಇಲಾಖೆ ಕಚೇರಿ ಮೇಲೆ ಅಧಿಕಾರಿಗಳು ದಾಳಿ ನಡೆಸಿ ಪರಿಶೀಲನೆ ನಡೆಸುತ್ತಿದ್ದಾರೆ. ದಾಳಿಯಲ್ಲಿ ಶಿವಮೊಗ್ಗ ಮತ್ತು ಚಿತ್ರದುರ್ಗದ ಲೋಕಾಯುಕ್ತ ಅಧಿಕಾರಿಗಳು ಭಾಗಿಯಾಗಿದ್ದಾರೆ.

Dailyhunt
Disclaimer: This content has not been generated, created or edited by Dailyhunt. Publisher: Karnatakanewsbeat