Dailyhunt Logo
  • Light mode
    Follow system
    Dark mode
    • Play Story
    • App Story

ಸಿದ್ದರಾಮಯ್ಯ ರಾಜೀನಾಮೆ - ಬಿಕ್ಕಿ ಬಿಕ್ಕಿ ಅತ್ತ ಸಚಿವ ಸಂತೋಷ್ ಲಾಡ್!

Karnatakanewsbeat 3 weeks ago

ಬೆಂಗಳೂರು : ಅತಿ ಹೆಚ್ಚು ಅವಧಿಗೆ ರಾಜ್ಯದ ಚುಕ್ಕಾಣಿ ಹಿಡಿದ ಮುಖ್ಯಮಂತ್ರಿ, ರಾಜ್ಯದಲ್ಲಿ ಅತೀ ಹೆಚ್ಚು ಬಜೆಟ್‌ ಮಂಡಿಸಿದ ಜನಪ್ರತಿನಿಧಿ ಎಂದು ಈ ವರ್ಷ ದಾಖಲೆ ಬರೆದ ಸಿದ್ದರಾಮಯ್ಯ ಇದೀಗ ಸಿಎಂ ಪಟ್ಟದಿಂದ ಕೆಳಗೆ ಇಳಿಯುವುದಾಗಿ ಘೋಷಿಸಿದ್ದಾರೆ. ಕೆಲವು ದಿನಗಳಿಂದ ನಡೆಯುತ್ತಿದ್ದ ರಾಜಕೀಯ ಚಟುವಟಿಕೆಗೆ ಸದ್ಯ ತೆರೆ ಬಿದ್ದಿದ್ದು, ಡಿಸಿಎಂ ಡಿ.ಕೆ.

ಶಿವಕುಮಾರ್‌ ಅವರು ರಾಜ್ಯದ ಮುಂದಿನ ಮುಖ್ಯಮಂತ್ರಿಯಾಗಿ ನೇಮಕಗೊಳ್ಳುವ ಸಾಧ್ಯತೆ ಹೆಚ್ಚಿದೆ.

ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ನೀಡ್ತಿರೋ ಹಿನ್ನೆಲೆ ಕಾರ್ಮಿಕ ಸಚಿವ ಸಂತೋಷ್ ಲಾಡ್ ಭಾವುಕರಾಗಿದ್ದಾರೆ. ಇಂದು ಬ್ರೇಕ್ ಫಾಸ್ಟ್ ಸಭೆ ಮುಗಿಸಿ ವಾಪಸ್ ತೆರಳುತ್ತಿದ್ದ ವೇಳೆ ಸಿದ್ದರಾಮಯ್ಯ ರಾಜೀನಾಮೆ ನೀಡುತ್ತಿರುವ ವಿಷಯ ನೆನದು ಸಂತೋಷ್ ಲಾಡ್ ಕಣ್ಣೀರು ಹಾಕಿದ್ದಾರೆ. ಈ ವೇಳೆ ಮಾಧ್ಯಮಗಳಿಗೆ ಕೈ ಮುಗಿದು ತಾನು ಏನೂ ಪ್ರತಿಕ್ರಿಯೆ ನೀಡಲ್ಲ ಎಂದು ತೆರಳಿದ್ದಾರೆ.

ದಲಿತ ಸಿಎಂಗಾಗಿ ಹೆಚ್ಚಿದ ಕೂಗು!

ಸಿಎಂ ಸಿದ್ದರಾಮಯ್ಯ ರಾಜೀನಾಮೆ ಮಧ್ಯೆ ರಾಜ್ಯದಲ್ಲಿ ಮತ್ತೆ ದಲಿತ ಸಿಎಂಗಾಗಿ ಕೂಗು ಕೇಳಿ ಬಂದಿದೆ. ಗೃಹ ಸಚಿವ ಡಾ.ಜಿ ಪರಮೇಶ್ವರ್ ಮುಂದಿನ ಸಿಎಂ ಮಾಡುವಂತೆ ಕೂಗು ಕೇಳಿಬಂದಿದ್ದು, ಪರಮೇಶ್ವರ್ ಅವರನ್ನು ಸಿಎಂ ಮಾಡುವಂತೆ ಒತ್ತಾಯಿಸಿ ಅಭಿಮಾನಿಗಳು ಪ್ರತಿಭಟನೆ ನಡೆಸಲು ಮುಂದಾಗಿದ್ದಾರೆ. ಕೆಲವೇ ಹೊತ್ತಿನಲ್ಲಿ ಗೃಹಸಚಿವರ ಮನೆ ಮುಂದೆ ಬೆಂಬಲಿಗರು ಪ್ರತಿಭಟಿಸಲಿದ್ದಾರೆ ಎಂದು ತಿಳಿದು ಬಂದಿದೆ.

ಇದನ್ನೂ ಓದಿ : ಕೊನೆಗೂ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಘೋಷಿಸಿದ ಸಿದ್ದರಾಮಯ್ಯ!

Dailyhunt
Disclaimer: This content has not been generated, created or edited by Dailyhunt. Publisher: Karnatakanewsbeat