Dailyhunt

ಟೆಕ್ಕಿ ಯುವತಿ ಸ್ನಾನ ಮಾಡುವಾಗ ವಿಡಿಯೋ ಮಾಡಿದ್ದ ಕಿಡಿಗೇಡಿ ಅರೆಸ್ಟ್!

ಬೆಂಗಳೂರು : ನಗರದಲ್ಲಿ ಮತ್ತೊಂದು ಶಾಕಿಂಗ್‌ ಘಟನೆ ಬೆಳಕಿಗೆ ಬಂದಿದೆ. ಸಾಫ್ಟ್‌ವೇರ್ ಎಂಜಿನಿಯರ್ ಆಗಿ ಕೆಲಸ ಮಾಡುತ್ತಿದ್ದ ಯುವತಿ ತನ್ನ ಮನೆಯಲ್ಲಿ ಸ್ನಾನ ಮಾಡುತ್ತಿದ್ದ ವೇಳೆ ಕಿಟಕಿ ಬಳಿ ನಿಂತು ಮೊಬೈಲ್‌ನಲ್ಲಿ ವಿಡಿಯೋ ರೆಕಾರ್ಡ್ ಮಾಡಿದ್ದ ಆರೋಪದ ಮೇಲೆ ಯುವಕನನ್ನು ಪೊಲೀಸರು ಬಂಧಿಸಿದ್ದಾರೆ.

ಘಟನೆ ಮಹದೇವಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ಟೆಕ್ಕಿ ಯುವತಿಯರು ಹಾಗೂ ಮಹಿಳೆಯರಲ್ಲಿ ಆತಂಕ ಮೂಡಿಸಿದೆ.

ಹೌದು.. ಗರುಡಾಚಾರ್ ಪಾಳ್ಯದ ಆಶ್ರಯ ಲೇಔಟ್‌ನ ಮನೆಯಲ್ಲಿ ವಾಸವಿದ್ದ ಯುವತಿ ಖಾಸಗಿ ಕಂಪನಿಯಲ್ಲಿ ಸಾಫ್ಟ್‌ವೇರ್ ಎಂಜಿನಿಯರ್ ಆಗಿ ಕೆಲಸ ಮಾಡುತ್ತಿದ್ದಳು. ಕಳೆದ ಏಪ್ರಿಲ್ 30ರಂದು ಕೆಲಸ ಮುಗಿಸಿಕೊಂಡು ಮನೆಗೆ ಬಂದಿದ್ದ ಯುವತಿ, ರಾತ್ರಿ ಸುಮಾರು 9:30ರ ವೇಳೆಗೆ ಸ್ನಾನಕ್ಕೆ ತೆರಳಿದ್ದಾಳೆ ಎಂದು ತಿಳಿದುಬಂದಿದೆ.

ಯುವತಿ ಸ್ನಾನ ಮಾಡುತ್ತಿದ್ದ ಸಮಯದಲ್ಲಿ ಮನೆಯ ಬಾತ್‌ರೂಂ ಕಿಟಕಿ ಬಳಿ ಮೊಬೈಲ್ ಹಿಡಿದು ನಿಂತು ವಿಡಿಯೋ ರೆಕಾರ್ಡ್ ಮಾಡುತ್ತಿದ್ದ ಆರೋಪಿಯನ್ನು ಯುವತಿ ಗಮನಿಸಿದ್ದಾಳೆ. ಮೊಬೈಲ್ ಕ್ಯಾಮೆರಾ ಮೂಲಕ ವಿಡಿಯೋ ಚಿತ್ರೀಕರಣ ಮಾಡುತ್ತಿರುವುದು ಕಂಡ ತಕ್ಷಣ ಯುವತಿ ಬೆಚ್ಚಿಬಿದ್ದು ಜೋರಾಗಿ ಕಿರುಚಿಕೊಂಡಿದ್ದಾಳೆ.

ಕಿರುಚಾಟ ಕೇಳುತ್ತಿದ್ದಂತೆ ಮೊಬೈಲ್ ಸಮೇತ ಎಸ್ಕೇಪ್..!

ಯುವತಿ ಕಿರುಚಿಕೊಂಡ ಕೂಡಲೇ ಆರೋಪಿ ಸ್ಥಳದಿಂದ ಪರಾರಿಯಾಗಿದ್ದಾನೆ. ಮೊಬೈಲ್ ಸಮೇತ ಅಲ್ಲಿಂದ ಓಡಿ ಹೋಗಿರುವ ಆರೋಪಿಯ ವಿರುದ್ಧ ಯುವತಿ ನಂತರ ಮಹದೇವಪುರ ಪೊಲೀಸ್ ಠಾಣೆಗೆ ದೂರು ನೀಡಿದ್ದಾಳೆ. ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ಆರಂಭಿಸಿದ್ದರು. ತನಿಖೆ ನಡೆಸಿದ ಮಹದೇವಪುರ ಪೊಲೀಸರು ಕಾರ್ತಿಕ್ ಎಂಬಾತನನ್ನು ಬಂಧಿಸಿದ್ದಾರೆ. ಆರೋಪಿ ಮೂಲತಃ ಕೇರಳದವನಾಗಿದ್ದು, ಬೆಂಗಳೂರಿನ ಖಾಸಗಿ ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿದ್ದಾನೆ ಎಂದು ತಿಳಿದುಬಂದಿದೆ. ಯುವತಿ ಮನೆಯ ಪಕ್ಕದಲ್ಲೇ ಬಾಡಿಗೆ ಮನೆಯಲ್ಲಿ ಕಾರ್ತಿಕ್ ವಾಸವಿದ್ದು, ಈ ಕೃತ್ಯ ಎಸಗಿದ್ದಾನೆ ಎಂದು ಗೊತ್ತಾಗಿದೆ.

ಸದ್ಯ ಪ್ರಕರಣ ದಾಖಲಿಸಿಕೊಂಡಿರುವ ಮಹದೇವಪುರ ಪೊಲೀಸರು ಆರೋಪಿಯಿಂದ ಮೊಬೈಲ್ ವಶಕ್ಕೆ ಪಡೆದು ಪರಿಶೀಲನೆ ನಡೆಸುತ್ತಿದ್ದಾರೆ. ಈ ಹಿಂದೆ ಕೂಡ ಇಂತಹ ಕೃತ್ಯಗಳಲ್ಲಿ ಭಾಗಿಯಾಗಿದ್ದಾನೆಯೇ ಎಂಬುದರ ಬಗ್ಗೆ ತನಿಖೆ ಮುಂದುವರಿದಿದೆ ಎಂದು ತಿಳಿದುಬಂದಿದೆ.

ಇದನ್ನೂ ಓದಿ : ಆಧಾರ್ ಸೇವಾ ಕೇಂದ್ರದಲ್ಲಿ 245 ಹುದ್ದೆಗಳ ನೇಮಕಾತಿ : ಕರ್ನಾಟಕದಲ್ಲಿವೆ 75 ಹುದ್ದೆಗಳು

Dailyhunt
Disclaimer: This content has not been generated, created or edited by Dailyhunt. Publisher: Karnatakanewsbeat