ನವದೆಹಲಿ: ಕೇಂದ್ರ ಸರ್ಕಾರಿ ನೌಕರರಿಗೆ ತುಟ್ಟಿಭತ್ಯೆ ಅಥವಾ ಡಿಎಯನ್ನು ಶೇ.3ರಷ್ಟು ಹೆಚ್ಚಿಸಲು ಕೇಂದ್ರ ಸರ್ಕಾರ ನಿರ್ಧರಿಸಿದೆ. ಡಿಎಯನ್ನು ಶೇ.31ರಿಂದ ಶೇ.34ಕ್ಕೆ ಹೆಚ್ಚಿಸಲಾಗಿದೆ. ಕೇಂದ್ರ ಸರ್ಕಾರದ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಂಡಿದೆ.
ಇಂಧನದ ಬೆಲೆ ಏರಿಕೆ ಮತ್ತು ಹೆಚ್ಚುತ್ತಿರುವ ಹಣದುಬ್ಬರದ ನಡುವೆ ತುಟ್ಟಿಭತ್ಯೆ ಅಥವಾ ಡಿಎ ಹೆಚ್ಚಳವು ಕೇಂದ್ರ ಸರ್ಕಾರಿ ನೌಕರರಿಗೆ ಪರಿಹಾರವಾಗಿ ಬರುತ್ತದೆ.
ನೌಕರರ ವೇತನದ ಮೇಲೆ ಹಣದುಬ್ಬರದ ಪರಿಣಾಮವನ್ನು ಸರಿದೂಗಿಸಲು ಕೇಂದ್ರ ಸರ್ಕಾರಿ ನೌಕರರಿಗೆ ತುಟ್ಟಿಭತ್ಯೆಯನ್ನು ಪಾವತಿಸಲಾಗುತ್ತದೆ. ಇದು ಉದ್ಯೋಗಿಗಳು ಮತ್ತು ಪಿಂಚಣಿದಾರರಿಬ್ಬರಿಗೂ ಅನ್ವಯಿಸುತ್ತದೆ.

