B.Y. Raghavendra ಗೌರವಾನ್ವಿತ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಜೀ ಅವರ ಜನ್ಮದಿನದ ಶುಭ ಸಂದರ್ಭದಲ್ಲಿ, ಶಿವಮೊಗ್ಗದ ರಾಷ್ಟ್ರೀಯ ರಕ್ಷಾ ವಿಶ್ವವಿದ್ಯಾಲಯ (RRU) ಕ್ಕೆ ಶಿವಮೊಗ್ಗ ಸಂಸದ ಬಿ.ವೈ.ರಾಘವೇಂದ್ರ ಭೇಟಿ ನೀಡಿದರು.
ದೇಶದ ಸುರಕ್ಷತೆ ಮತ್ತು ಸೇವೆಗೆ ಸಿದ್ಧರಾಗುತ್ತಿರುವ ಯುವ ವಿದ್ಯಾರ್ಥಿಗಳೊಂದಿಗೆ ಆತ್ಮೀಯವಾಗಿ ಸಂವಾದ ನಡೆಸಿದರು.
ರಾಷ್ಟ್ರ ನಿರ್ಮಾಣದಲ್ಲಿ ಯುವಜನತೆಯ ಪಾತ್ರ ಹಾಗೂ ಮೋದೀಜಿಯವರ 'ವಿಕಸಿತ ಭಾರತ್' ಕನಸನ್ನು ಸಾಕಾರಗೊಳಿಸುವ ಕುರಿತು ವಿದ್ಯಾರ್ಥಿಗಳೊಂದಿಗೆ ವಿಚಾರ ವಿನಿಮಯ ನಡೆಸಿ, ಬಳಿಕ ಎಲ್ಲರಿಗೂ ಸಿಹಿ ಹಂಚಿ ಸಂಭ್ರಮಿಸಿದರು.
B.Y. Raghavendra ದೇಶದ ಭದ್ರತೆ ಮತ್ತು ಅಭಿವೃದ್ಧಿಗೆ ಹೊಸ ದಿಕ್ಸೂಚಿ ನೀಡಿದ ನಮ್ಮ ನಾಯಕರಿಗೆ ಈ ಮೂಲಕ ಶುಭ ಕೋರುತ್ತಾ, ವಿದ್ಯಾರ್ಥಿಗಳ ಭವಿಷ್ಯ ಉಜ್ವಲವಾಗಲಿ ಎಂದು ಸಂಸದ ರಾಘವೇಂದ್ರ ಹಾರೈಸಿದರು

