Dailyhunt Logo
  • Light mode
    Follow system
    Dark mode
    • Play Story
    • App Story

ಕ್ರಿಕೆಟ್ ಆಡುವಾಗಲೇ ಕುಸಿದು ಅಸು ನೀಗಿದ ಕ್ರಿಕೆಟ್ ಪಟು ಅಕ್ಷಯ್

Klive News 1 day ago

ಮಾಜಿ ರಣಜಿ ಕ್ರಿಕೆಟ್ ಆಟಗಾರ ಅಕ್ಷಯ್ ಎಸ್.ಎಲ್ ಅವರು ಹೃದಯಾಘಾತದಿಂದ ನಿಧನರಾಗಿದ್ದಾರೆ. ಬೆಂಗಳೂರಿನ ಎಸ್ ಎಲ್ ಎಸ್ ಕ್ರೀಡಾಂಗಣದಲ್ಲಿ ನಡೆದ ಕೆಎಸ್‌ಸಿಎ 3ನೇ ಡಿವಿಜನ್ ಲೀಗ್ ಪಂದ್ಯದಲ್ಲಿ ಆಟವಾಡುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ.

ನಿನ್ನೆ ಮಧ್ಯಾಹ್ನ ಪಂದ್ಯ ನಡೆಯುತ್ತಿರುವಾಗ ಅಕ್ಷಯ್ ಅವರು ಅಸ್ವಸ್ಥಗೊಂಡು ಕುಸಿದು ಬಿದ್ದಿದ್ದು, ತಕ್ಷಣ ಚಿಕಿತ್ಸೆಗಾಗಿ ಆಸ್ಪತ್ರೆಗೆ ಸಾಗಿಸಲಾಯಿತಾದರೂ ಅವರು ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.

ಅವರ ಅಕಾಲಿಕ ನಿಧನ ಕ್ರಿಕೆಟ್ ವಲಯದಲ್ಲಿ ಶೋಕದ ವಾತಾವರಣ ನಿರ್ಮಿಸಿದೆ.

ಮೃತ ಅಕ್ಷಯ್ ಅವರ ಪಾರ್ಥಿವ ಶರೀರವನ್ನು ಬೆಂಗಳೂರಿನಿಂದ ಶಿವಮೊಗ್ಗಕ್ಕೆ ರವಾನೆ ಮಾಡಲಾಗಿದೆ. ಶಿವಮೊಗ್ಗ ನಗರದ ಅರವಿಂದ ನಗರದಲ್ಲಿರುವ ಅವರ ನಿವಾಸದಲ್ಲಿ ಕುಟುಂಬಸ್ಥರು ಮತ್ತು ಆಪ್ತರು ಅಂತಿಮ ದರ್ಶನ ಪಡೆಯುತ್ತಿದ್ದಾರೆ.

ಇಂದು ಮಧ್ಯಾಹ್ನ ಶಿವಮೊಗ್ಗದ ನವುಲೆಯಲ್ಲಿ ಇರುವ ಕೆ ಎಸ್ ಸಿ ಎ ಕ್ರಿಕೆಟ್ ಸ್ಟೇಡಿಯಂನಲ್ಲಿ ಸಾರ್ವಜನಿಕರ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಮಧ್ಯಾಹ್ನ ಒಂದು ಗಂಟೆಯಿಂದ ಸಾರ್ವಜನಿಕರಿಗೆ ಅಂತಿಮ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ ಎಂದು ಸಂಬಂಧಪಟ್ಟವರು ತಿಳಿಸಿದ್ದಾರೆ.

ಅಕ್ಷಯ್ ಎಸ್.ಎಲ್ ಅವರ ನಿಧನಕ್ಕೆ ಕ್ರೀಡಾಪಟುಗಳು, ಅಭಿಮಾನಿಗಳು ಹಾಗೂ ವಿವಿಧ ಗಣ್ಯರು ಸಂತಾಪ ಸೂಚಿಸಿದ್ದಾರೆ.

Dailyhunt
Disclaimer: This content has not been generated, created or edited by Dailyhunt. Publisher: Klive.News