Dailyhunt Logo
  • Light mode
    Follow system
    Dark mode
    • Play Story
    • App Story

ಮೀನುಮರಿ ಖರೀದಿಗೆ ಜಿಲ್ಲಾ ವಲಯ ಯೋಜನೆಯಡಿ ಸಹಾಯಧನಕ್ಕಾಗಿ ಅರ್ಜಿ ಆಹ್ವಾನ

Klive News 2 weeks ago

ಮೀನುಗಾರಿಕೆ ಇಲಾಖೆಯು 2026-27ನೇ ಸಾಲಿನ ಜಿಲ್ಲಾ ವಲಯ ಯೋಜನೆಯಡಿಯಲ್ಲಿ ಮೀನುಮರಿ ಖರೀದಿಗೆ ಸಹಾಯಧನ ಪಡೆಯಲು ಅರ್ಹ ಫಲಾನುಭವಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ.ಸ್ವಂತ ಕೊಳ, ಇಲಾಖೆಯಿಂದ ಗುತ್ತಿಗೆ, ಹರಾಜಿನಲ್ಲಿ ಪಡೆದ ಕೆರೆಯಲ್ಲಿ ವೈಜ್ಞಾನಿಕವಾಗಿ ಮೀನುಮರಿ ಬಿತ್ತನೆ, ಸ್ವಂತ ಕೊಳ ನಿರ್ಮಿಸಿಕೊಂಡು ಮೀನುಮರಿ ಪಾಲನೆಗೆ ಬಳಸಲು ಖರೀದಿಸಿದವರಿಗೆ ಮಾತ್ರ ಸಹಾಯಧನ ನೀಡಲಾಗುವುದು.

ಅರ್ಹ ಫಲಾನುಭವಿಗಳು ಅಗತ್ಯ ದಾಖಲೆಗಳೊಂದಿಗೆ ಜಿಲ್ಲಾ ಪಂಚಾಯತ್ ಯೋಜನೆಗಳ ಅಧಿಕೃತ ಪೋರ್ಟಲ್ https://shimoga.nic.in ಮುಖಾಂತರ ಆನ್‌ಲೈನ್‌ನಲ್ಲಿ ಸೆ. 15 ರೊಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ.
ಹೆಚ್ಚಿನ ವಿವರಗಳಿಗಾಗಿ ಆಯಾ ತಾಲ್ಲೂಕಿನ ಮೀನುಗಾರಿಕೆ ಸಹಾಯಕ ನಿರ್ದೇಶಕರ ಕಚೇರಿ ಅಥವಾ ಆಯಾ ತಾಲೂಕು ಮೀನುಗಾರಿಕೆ ಸಹಾಯಕ ನಿರ್ದೇಶಕರ ಮೊಬೈಲ್ ಸಂಖ್ಯೆ ಶಿವಮೊಗ್ಗ-9986040981, ಭದ್ರಾವತಿ-9743370815, ಶಿಕಾರಿಪುರ- 9686939028, ಸಾಗರ -9538044365, ಸೊರಬ -9535386449, ತೀರ್ಥಹಳ್ಳಿ- 8655132438 ಇವರುಗಳನ್ನು ಸಂಪರ್ಕಿಸುವಂತೆ ಮೀನುಗಾರಿಕೆ ಉಪನಿರ್ದೇಶಕರು ತಿಳಿಸಿರುತ್ತಾರೆ.

Dailyhunt
Disclaimer: This content has not been generated, created or edited by Dailyhunt. Publisher: Klive.News