Dailyhunt Logo
  • Light mode
    Follow system
    Dark mode
    • Play Story
    • App Story

Sigandur Bridge ಸಿಗಂದೂರು ಸೇತುವೆ ಕೆಳಭಾಗ ಈಜಲು ಹೋದ ವ್ಯಕ್ತಿ ಸಾವು.

Klive News 2 weeks ago

Sigandur Bridge ಶಿವಮೊಗ್ಗ ಸಿಗಂದೂರು ಸೇತುವೆ ಶರಾವತಿ ಹಿನ್ನೀರಿನಲ್ಲಿ ಮುಳುಗಿ ಆಂಧ್ರ ಮೂಲದ ಯುವಕ ಸಾವು
ಸಿಗಂದೂರು ಚೌಡೇಶ್ವರಿ ದೇವಿಯ ದರ್ಶನಕ್ಕಾಗಿ ಕುಟುಂಬಸ್ಥರು ಹಾಗೂ ಸ್ನೇಹಿತರೊಂದಿಗೆ ಬಂದಿದ್ದ ಆಂಧ್ರಪ್ರದೇಶ ಮೂಲದ ಯುವಕನು ಶರಾವತಿ ಹಿನ್ನೀರಿನಲ್ಲಿ ಮುಳುಗಿ ಮೃತಪಟ್ಟಿರುವ ಘಟನೆ ಬುಧವಾರ ನಡೆದಿದೆ.

ಮೃತರನ್ನು ಆಂಧ್ರಪ್ರದೇಶದ ರಾಯದುರ್ಗ ನಿವಾಸಿ ಉಮೇಶ್ (30) ಎಂದು ಗುರುತಿಸಲಾಗಿದೆ.

ಮಾಹಿತಿಯಂತೆ, ಬುಧವಾರ ಮಧ್ಯಾಹ್ನ ಉಮೇಶ್ ಅವರು ಸಿಗಂದೂರು ಸೇತುವೆಯ ಕೆಳಭಾಗದ ಮುಳುಗಡೆ ಪ್ರದೇಶದಲ್ಲಿ ಈಜಲು ನೀರಿಗೆ ಇಳಿದಿದ್ದರು. ಈ ವೇಳೆ ನೀರಿನ ತೀವ್ರ ಸೆಳೆತಕ್ಕೆ ಸಿಲುಕಿದ ಅವರು ನಿಯಂತ್ರಣ ಕಳೆದುಕೊಂಡು ನೀರಿನಲ್ಲಿ ಕೊಚ್ಚಿಹೋಗಿ ನಾಪತ್ತೆಯಾಗಿದ್ದರು.

Sigandur Bridge ಜೊತೆಯಲ್ಲಿದ್ದವರು ತಕ್ಷಣ ಸ್ಥಳೀಯರು ಹಾಗೂ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ. ಮಾಹಿತಿ ತಿಳಿದ ಕೂಡಲೇ ಸಾಗರ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ, ಸ್ಥಳೀಯ ಮೀನುಗಾರರು ಹಾಗೂ ಸಾರ್ವಜನಿಕರ ಸಹಕಾರದೊಂದಿಗೆ ಶೋಧ ಕಾರ್ಯಾಚರಣೆ ನಡೆಸಿದರು.

ಕೆಲವು ಗಂಟೆಗಳ ಸತತ ಕಾರ್ಯಾಚರಣೆಯ ಬಳಿಕ ಉಮೇಶ್ ಅವರ ಮೃತದೇಹವನ್ನು ನೀರಿನಿಂದ ಹೊರತೆಗೆದಿದ್ದಾರೆ.

ಈ ಸಂಬಂಧ ಕಾರ್ಗಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Dailyhunt
Disclaimer: This content has not been generated, created or edited by Dailyhunt. Publisher: Klive.News