S.N. Channabasappa ಶಿವಮೊಗ್ಗ "ನಗರದ ನೈರ್ಮಲ್ಯ ಹಾಗೂ ಸಾರ್ವಜನಿಕರ ಆರೋಗ್ಯ ರಕ್ಷಣೆಯಲ್ಲಿ ಸ್ವಚ್ಛತಾ ಸಿಬ್ಬಂದಿಗಳ ಪಾತ್ರ ಅತ್ಯಂತ ಹಿರಿದಾಗಿದ್ದು, ಅವರ ಸುರಕ್ಷತೆ, ಉತ್ತಮ ಆರೋಗ್ಯ ಮತ್ತು ಯಾಂತ್ರಿಕೃತ ತರಬೇತಿಗೆ ಸರ್ಕಾರ ಹಾಗೂ ಜಿಲ್ಲಾಡಳಿತವು ವಿಶೇಷ ಆದ್ಯತೆ ನೀಡಿದೆ" ಎಂದು ಶಿವಮೊಗ್ಗ ನಗರ ವಿಧಾನಸಭಾ ಕ್ಷೇತ್ರದ ಶಾಸಕರಾದ ಶ್ರೀ ಎಸ್.ಎನ್.
ಚನ್ನಬಸಪ್ಪ (ಚೆನ್ನಿ) ಅವರು ತಿಳಿಸಿದ್ದಾರೆ.
ಕೇಂದ್ರ ಸರ್ಕಾರ ಹಾಗೂ ಶಿವಮೊಗ್ಗ ಮಹಾನಗರ ಪಾಲಿಕೆಯ ಸಂಯುಕ್ತ ಆಶ್ರಯದಲ್ಲಿ ನಗರದಲ್ಲಿ ಆಯೋಜಿಸಲಾಗಿದ್ದ 'ನಮಸ್ತೆ ದಿನಾಚರಣೆ - ೨೦೨೬' ವಿಶೇಷ ಜಾಗೃತಿ ಅಭಿಯಾನ ಮತ್ತು ಸ್ವಚ್ಛತಾ ಸಿಬ್ಬಂದಿಗಳ ಆರೋಗ್ಯ ಹಾಗೂ ಕಾರ್ಯನಿರ್ವಹಣೆ ಕುರಿತ ಕಾರ್ಯಾಗಾರವನ್ನು ಉದ್ಘಾಟಿಸಿ ಅವರು ಮಾತನಾಡಿದರು.
S.N. Channabasappa ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ 'ನಮಸ್ತೆ' (NAMASTE) ಯೋಜನೆಯಡಿ ಸ್ವಚ್ಛತಾ ಕಾರ್ಯದಲ್ಲಿ ಮಾನವ ಶ್ರಮದ ಜೊತೆಗೆ ಆಧುನಿಕ ಯಂತ್ರೋಪಕರಣಗಳ ಬಳಕೆಯನ್ನು ಹೆಚ್ಚಿಸುವ ಮೂಲಕ ಸಿಬ್ಬಂದಿಗಳ ಸುರಕ್ಷತೆಯನ್ನು ಕಾಯ್ದುಕೊಳ್ಳುವ ವಿಧಾನಗಳ ಕುರಿತು ಈ ಕಾರ್ಯಾಗಾರದಲ್ಲಿ ವಿಸ್ತೃತ ಮಾಹಿತಿ ನೀಡಲಾಯಿತು. ಸಿಬ್ಬಂದಿಗಳು ಕಡ್ಡಾಯವಾಗಿ ಸುರಕ್ಷತಾ ಕವಚಗಳನ್ನು ಧರಿಸಿ ಕಾರ್ಯನಿರ್ವಹಿಸಬೇಕು ಎಂದು ಶಾಸಕರು ಮನವಿ ಮಾಡಿದರು.
ಈ ಸಂದರ್ಭದಲ್ಲಿ ಮಹಾನಗರ ಪಾಲಿಕೆಯ ಆಯುಕ್ತರಾದ ಶ್ರೀ ಮಾಯಣ್ಣ ಗೌಡ, ಪಾಲಿಕೆಯ ಅಧಿಕಾರಿಗಳು ಹಾಗೂ ಪೌರಕಾರ್ಮಿಕ ಸಿಬ್ಬಂದಿಗಳು ಉಪಸ್ಥಿತರಿದ್ದರು.
