Saturday, 28 Nov, 10.40 am Masth Magaa

ಎಲ್ಲಾ ಸುದ್ದಿ
ದೇಶದಲ್ಲಿ ಇಳಿಕೆ ಕಂಡ ಕೊರೋನಾ ಕೇಸಸ್..ಸೋಂಕಿತರೆಷ್ಟು?

masthmagaa.com:

ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 41,000 ಜನರಿಗೆ ಹೊಸದಾಗಿ ಕೊರೋನಾ ಸೋಂಕು ದೃಢಪಟ್ಟಿದ್ದು, 485 ಸೋಂಕಿತರು ಮೃತಪಟ್ಟಿದ್ದಾರೆ. ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 93.51 ಲಕ್ಷ ದಾಟಿದ್ದು, ಒಟ್ಟು ಮೃತಪಟ್ಟವರ ಸಂಖ್ಯೆ 1,36,200 ಆಗಿದೆ. ನಿನ್ನೆಗೆ ಹೋಲಿಸಿದ್ರೆ ಕೊರೋನಾ ಪಾಸಿಟಿವ್‌ ಪ್ರಕರಣಗಳಲ್ಲಿ ಶೇ.4ರಷ್ಟು ಇಳಿಕೆಯಾಗಿದೆ.

ಕಳೆದ 24 ಗಂಟೆಗಳಲ್ಲಿ 41,000+ ಸೋಂಕಿತರು ಗುಣಮುಖರಾಗಿದ್ದು, ಒಟ್ಟು ಗುಣಮುಖರಾದವರ ಸಂಖ್ಯೆ 87.59 ಲಕ್ಷ ದಾಟಿದೆ. ದೇಶದಲ್ಲಿ ಇನ್ನೂ ಕೂಡ 4.54 ಲಕ್ಷ ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದಾರೆ.

ದೇಶದಲ್ಲಿ ಗುಣಮುಖ ಪ್ರಮಾಣ 93.68% ಇದ್ದು, ಸಾವಿನ ಪ್ರಮಾಣ 1.46% ರಷ್ಟಿದೆ. ನವೆಂಬರ್‌ 27ರಂದು 11.57 ಲಕ್ಷ ಕೊರೋನಾ ಪರೀಕ್ಷೆಗಳನ್ನ ನಡೆಸಲಾಗಿದೆ.

-masthmagaa.com

Dailyhunt
Disclaimer: This story is auto-aggregated by a computer program and has not been created or edited by Dailyhunt. Publisher: Masth Magaa
Top