Dailyhunt Logo
  • Light mode
    Follow system
    Dark mode
    • Play Story
    • App Story
ಆತ್ಮಶಕ್ತಿ ಸಹಕಾರ ಸಂಘದಲ್ಲಿ ಬ್ರಹ್ಮಶ್ರೀ ನಾರಾಯಣಗುರುಗಳ 172ನೇ ಜಯಂತಿ ಆಚರಣೆ: ಹಿರಿಯ ಸದಸ್ಯ ಮಾಧವ ಸುವರ್ಣಗೆ ಗುರುವಂದನೆ

ಆತ್ಮಶಕ್ತಿ ಸಹಕಾರ ಸಂಘದಲ್ಲಿ ಬ್ರಹ್ಮಶ್ರೀ ನಾರಾಯಣಗುರುಗಳ 172ನೇ ಜಯಂತಿ ಆಚರಣೆ: ಹಿರಿಯ ಸದಸ್ಯ ಮಾಧವ ಸುವರ್ಣಗೆ ಗುರುವಂದನೆ

ಮಂಗಳೂರು : ಆತ್ಮಶಕ್ತಿ ವಿವಿಧೋದ್ದೇಶ ಸಹಕಾರ ಸಂಘದ ಮಂಗಳೂರಿನ ಪ್ರಧಾನ ಕಚೇರಿಯಲ್ಲಿ ಬ್ರಹ್ಮಶ್ರೀ ನಾರಾಯಣಗುರುಗಳ 172ನೇ ಜಯಂತ್ಯುತ್ಸವ ಹಾಗೂ ಗುರುವಂದನಾ ಕಾರ್ಯಕ್ರಮವನ್ನು ವಿಜೃಂಭಣೆಯಿಂದ ನೆರವೇರಿಸಲಾಯಿತು. ಸಂಘದ ಅಧ್ಯಕ್ಷ ಸಹಕಾರ ರತ್ನ ಚಿತ್ತರಂಜನ್ ಬೋಳಾರ್ ಅವರು ಭಜನಾ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ಪಚ್ಚನಾಡಿ ದೇವಿನಗರದ ಮಾತೃಶ್ರೀ ಸತ್ಸಂಗ ಭಜನಾ ಮಂಡಳಿ ಹಾಗೂ ಸಂಘದ ಸಿಬ್ಬಂದಿ ವರ್ಗದವರು ಭಕ್ತಿಪೂರ್ವಕ ಭಜನೆ ನಡೆಸಿಕೊಟ್ಟರು. ಪುರೋಹಿತ ಮನೋಜ್ ಶಾಂತಿ ಅವರ ನೇತೃತ್ವದಲ್ಲಿ ವಿಶೇಷ ಗುರುಪೂಜೆ ನೆರವೇರಿ ಪ್ರಸಾದ ವಿತರಣೆ ನಡೆಯಿತು.

ವಿಶೇಷವಾಗಿ ಆಯೋಜಿಸಲಾಗಿದ್ದ ಗುರುವಂದನಾ ಕಾರ್ಯಕ್ರಮದಲ್ಲಿ ಸಂಘದ ಹಿರಿಯ ಸದಸ್ಯರೂ, ಗುರು ಶ್ರೇಷ್ಠರೂ ಆದ ಮಾಧವ ಸುವರ್ಣ ಯು. ಅವರನ್ನು ಸಂಘದ ವತಿಯಿಂದ ಆತ್ಮೀಯವಾಗಿ ಸನ್ಮಾನಿಸಿ ಗೌರವಿಸಲಾಯಿತು.

ಈ ಶುಭ ಸಮಾರಂಭದಲ್ಲಿ ಸಂಘದ ಉಪಾಧ್ಯಕ್ಷ ನೇಮಿರಾಜ್ ಪಿ., ನಿರ್ದೇಶಕರಾದ ಜಿ. ಪರಮೇಶ್ವರ ಪೂಜಾರಿ, ಆನಂದ ಎಸ್. ಕೊಂಡಾಣ, ರಮಾನಾಥ್ ಸನಿಲ್, ಗೋಪಾಲ್ ಎಮ್., ಉಮಾವತಿ, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸೌಮ್ಯ ವಿಜಯ್, ಬ್ರಹ್ಮಶ್ರೀ ನಾರಾಯಣಗುರು ಸ್ವಾಮಿ ಪ್ರಕಾಶನ ಮತ್ತು ಚಾರಿಟೇಬಲ್ ಟ್ರಸ್ಟ್ ಗೌರವಾಧ್ಯಕ್ಷ ವಾಮನ್ ಕೆ. ಸೇರಿದಂತೆ ಸಂಘದ ಹಲವು ಸದಸ್ಯರು ಹಾಗೂ ಸಿಬ್ಬಂದಿ ಉಪಸ್ಥಿತರಿದ್ದರು.

ನಿಮ್ಮ ಇಮೇಲ್ ವಿಳಾಸವನ್ನು ಪ್ರಕಟಿಸಲಾಗುವುದಿಲ್ಲ.ಕಡ್ಡಾಯ ಫೀಲ್ಡ್ಗಳನ್ನು * ಮೂಲಕ ಗುರುತಿಸಲಾಗಿದೆ

ಪ್ರತಿಕ್ರಿಯೆ

ಹೆಸರು

ಇಮೇಲ್

ಊರು

ನಂತರದ ಪ್ರತಿಕ್ರಿಯೆಗಾಗಿ ನನ್ನ ಹೆಸರು, ಇಮೇಲ್ ಮತ್ತು ವೆಬ್‌ಸೈಟ್ ಅನ್ನು ಈ ಬ್ರೌಸರ್‌ನಲ್ಲಿ ಉಳಿಸಿ.

Dailyhunt
Disclaimer: This content has not been generated, created or edited by Dailyhunt. Publisher: Megamedia News Kannada