Thursday, 26 Nov, 12.59 pm Megamedia News

ಸುದ್ದಿ
ಕುದ್ರೋಳಿ ಸಮೀಪ ಮೆಹೆಂದಿ ಕಾರ್ಯಕ್ರಮಕ್ಕೆ ಬಂದಿದ್ದ ರೌಡಿ ಶೀಟರ್ ಹತ್ಯೆ

ಮಂಗಳೂರು : ರೌಡಿ ಶೀಟರ್ ವೊಬ್ಬನನ್ನು ಬರ್ಬರವಾಗಿ ಹತ್ಯೆಗೈದ ಘಟನೆ ಕುದ್ರೋಳಿ ಸಮೀಪದ ಕರ್ನಲ್‌ ಗಾರ್ಡನ್ ಬಳಿ ನಡೆದಿದೆ.

ಬೊಕ್ಕಪಟ್ಣ ನಿವಾಸಿ ಇಂದ್ರಜಿತ್ (45) ಹತ್ಯೆಗೊಳಗಾದ ವ್ಯಕ್ತಿ ಎಂದು ತಿಳಿದುಬಂದಿದೆ.

ಈತ ಪಾಂಡೇಶ್ವರ ಠಾಣಾ ವ್ಯಾಪ್ತಿಯಲ್ಲಿ ರೌಡಿ ಶೀಟರ್ ಆಗಿದ್ದ ಎಂದು ಪೊಲೀಸರು ತಿಳಿಸಿದ್ದಾರೆ. ಈ ಹಿಂದೆ ಈತನ ಮೇಲೆ ತಲವಾರ್‌ ದಾಳಿ ನಡೆದಿತ್ತು ಎಂಬ ಮಾಹಿತಿ ಲಭಿಸಿದೆ.

ಬುಧವಾರ ರಾತ್ರಿ ಈತನು ಮೆಹೆಂದಿ ಕಾರ್ಯಕ್ರಮವೊಂದರಲ್ಲಿ ಭಾಗಿಯಾಗಿದ್ದು ಅಲ್ಲಿ ಯಾವುದೋ ವಿಚಾರಕ್ಕೆ ಗಲಾಟೆ ನಡೆದಿದೆ ಎಂದು ತಿಳಿದು ಬಂದಿದೆ.

ಗುರುವಾರ ನಸುಕಿನ ಜಾವ 2 ಗಂಟೆಗೆ ಈ ಹತ್ಯೆ‌ ನಡೆದಿದೆಯೆನ್ನಲಾಗಿದೆ.

ಇಂದ್ರಜಿತ್ ನನ್ನು‌ ಮಾರಕ ಆಯುಧಗಳಿಂದ ಕೊಚ್ಚಿ ಕೊಲೆ ಮಾಡಿ ಗಾರ್ಡನ್ ಬಳಿ ಎಸೆಯಲಾಗಿದ್ದು, ಬೆಳಗ್ಗೆ 6 ಗಂಟೆ ಸುಮಾರಿಗೆ ಮೃತದೇಹ ಪತ್ತೆಯಾಗಿದೆ.

ಈ ಬಗ್ಗೆ ಸ್ಥಳಕ್ಕೆ ಬರ್ಕೆಯ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.

Dailyhunt
Disclaimer: This story is auto-aggregated by a computer program and has not been created or edited by Dailyhunt. Publisher: Megamedia News Kannada
Top